AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಅಧಿಕಾರಕ್ಕಾಗಿ ಅಂಟಿ ಕುಳಿತಿಲ್ಲ, ರೈತರ ಪರವಾಗಿ ಇದ್ದೇನೆ: CM BSY

ಬೆಂಗಳೂರು: ಕೃಷಿ ಮಸೂದೆಗಳನ್ನು ವಿರೋಧಿಸಿ ಕರ್ನಾಟಕ ಬಂದ್ ವಿಚಾರವಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದರು. ರೈತ ಸಂಘಟನೆಗಳು, ಕಾಂಗ್ರೆಸ್‌ನವರ ಪಿತೂರಿಯಿಂದ ಧರಣಿ ನಡೆಯುತ್ತಿದೆ. ರೈತ ಮುಖಂಡರನ್ನು ಕರೆಸಿ ಮಾತಾಡುವ ಪ್ರಯತ್ನ ಮಾಡಿದ್ದೆ. ಈ ಕಾಯ್ದೆಗಳಿಂದ ಆಗುವ ಅನುಕೂಲದ ಬಗ್ಗೆ ವಿವರಿಸಿದ್ದೇನೆ. ಆದ್ರೆ ಅವರು ಪ್ರತಿಭಟನೆ ಮಾಡುವ ಉದ್ದೇಶದಿಂದ ಬಂದಿದ್ದಾರೆ. ನಾನು ಅಧಿಕಾರಕ್ಕಾಗಿ ಅಂಟಿ ಕುಳಿತಿಲ್ಲ, ರೈತರ ಪರವಾಗಿ ಇದ್ದೇನೆ. ರೈತರಿಗೆ ಕೆಟ್ಟದ್ದಾಗಲೂ ನಾನು ಎಂದಿಗೂ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. APMC […]

ನಾನು ಅಧಿಕಾರಕ್ಕಾಗಿ ಅಂಟಿ ಕುಳಿತಿಲ್ಲ, ರೈತರ ಪರವಾಗಿ ಇದ್ದೇನೆ: CM BSY
ಬಿ.ಎಸ್. ಯಡಿಯೂರಪ್ಪ
KUSHAL V
|

Updated on:Sep 28, 2020 | 1:40 PM

Share

ಬೆಂಗಳೂರು: ಕೃಷಿ ಮಸೂದೆಗಳನ್ನು ವಿರೋಧಿಸಿ ಕರ್ನಾಟಕ ಬಂದ್ ವಿಚಾರವಾಗಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದರು.

ರೈತ ಸಂಘಟನೆಗಳು, ಕಾಂಗ್ರೆಸ್‌ನವರ ಪಿತೂರಿಯಿಂದ ಧರಣಿ ನಡೆಯುತ್ತಿದೆ. ರೈತ ಮುಖಂಡರನ್ನು ಕರೆಸಿ ಮಾತಾಡುವ ಪ್ರಯತ್ನ ಮಾಡಿದ್ದೆ. ಈ ಕಾಯ್ದೆಗಳಿಂದ ಆಗುವ ಅನುಕೂಲದ ಬಗ್ಗೆ ವಿವರಿಸಿದ್ದೇನೆ. ಆದ್ರೆ ಅವರು ಪ್ರತಿಭಟನೆ ಮಾಡುವ ಉದ್ದೇಶದಿಂದ ಬಂದಿದ್ದಾರೆ. ನಾನು ಅಧಿಕಾರಕ್ಕಾಗಿ ಅಂಟಿ ಕುಳಿತಿಲ್ಲ, ರೈತರ ಪರವಾಗಿ ಇದ್ದೇನೆ. ರೈತರಿಗೆ ಕೆಟ್ಟದ್ದಾಗಲೂ ನಾನು ಎಂದಿಗೂ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

APMC ಕಾಯ್ದೆ ತಿದ್ದುಪಡಿಯಿಂದ ರೈತರು ತಮ್ಮ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಬಹುದು. APMC ಬಾಗಿಲನ್ನು ನಾವು ಮುಚ್ಚಿಲ್ಲ. ರೈತರು APMCಯಲ್ಲಿ ಬೇಕಾದ್ರೂ ಬೆಳೆ ಮಾರಬಹುದಾಗಿದೆ. 6 ತಿಂಗಳಿಂದ 1 ವರ್ಷದವರೆಗೆ ನೋಡಿ ನಿಮಗೇ ತಿಳಿಯುತ್ತೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಹೇಳಿದ್ದಾರೆ.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿಚಾರವಾಗಿಈ ತಿದ್ದುಪಡಿಯಿಂದ ಯಾರು ಬೇಕಾದ್ರೂ ಕೃಷಿ ಮಾಡಬಹುದು. ಕೃಷಿಗೆ ಉಪಯೋಗವಿಲ್ಲದ ಭೂಮಿಯಲ್ಲಿ ಕೈಗಾರಿಕೆ ನಡೆಸಬಹುದು. ಅದರೆ, ನೀರಾವರಿ ಜಮೀನಿನಲ್ಲಿ ಕೃಷಿಯನ್ನೇ ಮಾಡಬೇಕು. ಈ ರೀತಿಯ ನಿಯಮ ತಿದ್ದುಪಡಿ ವಿಧೇಯಕದಲ್ಲಿ ಇದೆ ಅಂತಾ ಯಡಿಯೂರಪ್ಪ ಹೇಳಿದ್ದಾರೆ.

‘ನನ್ನಿಂದ ರೈತ ಸಮುದಾಯಕ್ಕೆ ಎಂದೂ ಅನ್ಯಾಯವಾಗುವುದಿಲ್ಲ’ ರೈತರನ್ನು ಅನಗತ್ಯವಾಗಿ ಗೊಂದಲದಲ್ಲಿ ದೂಡದಂತೆ ಮನವಿ ಮಾಡುತ್ತೇನೆ. ರೈತ ಸಂಘಟನೆಗಳಲ್ಲಿ ನಾನು ಈ ಬಗ್ಗೆ ಮನವಿ ಮಾಡುತ್ತೇನೆ. ಪ್ರಧಾನಿ ಮೋದಿ ಒಳ್ಳೆಯ ಉದ್ದೇಶದಿಂದ ಇದನ್ನು ತಂದಿದ್ದಾರೆ. ರೈತರಿಗೆ ಬೇಕಾದ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಹಣ ನೀಡಲಾಗಿದೆ ಎಂದು ಹೇಳಿದರು.

ನನ್ನಿಂದ ರೈತ ಸಮುದಾಯಕ್ಕೆ ಎಂದೂ ಅನ್ಯಾಯವಾಗುವುದಿಲ್ಲ. ಇಂದು ಚಳವಳಿ ಮಾಡಿ, ಬಳಿಕವಾದರೂ ಚರ್ಚೆಗೆ ಬನ್ನಿ. ಬಿಲ್‌ನಲ್ಲಿ ಏನಾದರೂ ಬದಲಾವಣೆ ಬೇಕಿದ್ದರೆ ಮಾಡೋಣ. ಸುಮ್ಮನೇ ರೈತರನ್ನು ದಾರಿತಪ್ಪಿಸುವ ಕೆಲಸವನ್ನು ಮಾಡಬೇಡಿ ಅಂತಾ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದರು.

‘ದಲ್ಲಾಳಿಗಳು ಪಡೆಯುತ್ತಿದ್ದ ಕಮೀಷನ್‌ಗೆ ಕಡಿವಾಣ ಹಾಕಿದ್ದೇವೆ’ ದಲ್ಲಾಳಿಗಳು ಪಡೆಯುತ್ತಿದ್ದ ಕಮೀಷನ್‌ಗೆ ಕಡಿವಾಣ ಹಾಕಿದ್ದೇವೆ. ನೀರಾವರಿ ಜಮೀನನ್ನು ಖರೀದಿಸಿದ್ರೆ ಅದನ್ನ ಕೃಷಿಗೇ ಬಳಸಬೇಕು. ಬರಡು ಭೂಮಿಯನ್ನು ಮಾತ್ರ ಕೈಗಾರಿಕೆಗಳಿಗೆ ಬಳಸಬಹುದು. SC, ST ಭೂಮಿಯನ್ನು ಖರೀದಿಸುವಂತಿಲ್ಲ. ಸಣ್ಣ ರೈತರಿಗೆ ಯಾವುದೇ ಕಷ್ಟವಾಗದಂತೆ ವಿಧೇಯಕ ತಿದ್ದುಪಡಿ ಮಾಡಿದ್ದೇವೆ. ಜೊತೆಗೆ, 54 ಎಕರೆ ಜಮೀನು ಮಾತ್ರ ಖರೀದಿಗೆ ಅವಕಾಶ ಮಾಡಿದ್ದೇವೆ. 5 ಜನರ ಕುಟುಂಬ 54 ಎಕರೆ ಜಮೀನು ಖರೀದಿಸಬಹುದು. ಈ ಮೊದಲೂ ಇದೇ ನಿಯಮ ಜಾರಿಯಲ್ಲಿತ್ತು ಎಂದು ಯಡಿಯೂರಪ್ಪ ಹೇಳಿದ್ದಾರೆ.

ಕಾಂಗ್ರೆಸ್‌ನವರು ಈ ಮೊದಲು ಇದರ ಜಾರಿಗೆ ಮುಂದಾಗಿದ್ದರು. ಈಗ ನಾವು ಮಾಡಲು ಹೊರಟಿದ್ದಕ್ಕೆ ವಿರೋಧಿಸುತ್ತಿದ್ದಾರೆ ಅಷ್ಟೆ. APMC ಸೆಸ್ 1.5 ಇತ್ತು. ಅದನ್ನ ನಾವು 0.3ಗೆ ಇಳಿಸಿದ್ದೇವೆ. APMC ಸಿಬ್ಬಂದಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಅಂತಾ ಯಡಿಯೂರಪ್ಪ ಹೇಳಿದ್ದಾರೆ.

‘JDS ಬಗ್ಗೆ ನಾನು ಏನೂ ಮಾತಾಡಲ್ಲ’ JDS ಬಗ್ಗೆ ನಾನು ಏನೂ ಮಾತಾಡಲ್ಲ. ಅವರು ಸದನದಲ್ಲಿ ತಿದ್ದುಪಡಿ ಬೆಂಬಲಿಸಿ ಮಾತಾಡಿದ್ದಾರೆ. ಕಾಂಗ್ರೆಸ್​ನವರು ಮಾತ್ರ ವಿರೋಧ ಮಾಡಿದ್ದಾರೆ. ಸುರ್ಜೇವಾಲಾ ಒಂದು ವಾರದ ಹಿಂದೆ ತಾನೇ ರಾಜ್ಯಕ್ಕೆ ಬಂದಿದ್ದಾರೆ. ಮೊದಲು ಅವರು ಕಾಂಗ್ರೆಸ್ ಪಕ್ಷ ಸಂಘಟಿಸಲಿ ಆಮೇಲೆ ಬಿಜೆಪಿ ಹಾಗೂ ಮತ್ತೊಂದರ ಬಗ್ಗೆ ಮಾತನಾಡಲಿ ಎಂದು ಸುರ್ಜೆವಾಲಾಗೆ ಸಿಎಂ ತಿರುಗೇಟು ಕೊಟ್ಟಿದ್ದಾರೆ.

Published On - 1:23 pm, Mon, 28 September 20

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?