AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ವಾರದಲ್ಲಿ ಅಗಸ, ಕ್ಷೌರಿಕ, ಆಟೋ ಚಾಲಕರಿಗೆ ತಲಾ 5 ಸಾವಿರ ಕೊಡ್ತೀವಿ: BSY

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟಲು ಒಂದೂವರೆ ತಿಂಗಳಿನಿಂದ ಲಾಕ್‌ಡೌನ್ ಮಾಡಲಾಗಿದೆ. ಇದರಿಂದ ರಾಜ್ಯದ ಜನರು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ 1,610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕಳೆದ ಮೂರು ದಿನದಿಂದ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ. ಹಾಗಂತ ಲಾಕ್‌ಡೌನ್ ಸಡಿಲಿಕೆ ದುರುಪಯೋಗಪಡಿಸಿಕೊಳ್ಳಬಾರದು. ಕಾರ್ಮಿಕರು ತಮ್ಮ ಗ್ರಾಮಗಳಿಗೆ ಹೋಗಲು ಮನವಿ ಮಾಡಿದ್ದರು. ಹೀಗಾಗಿ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ನಾಳೆಗೆ ಉಚಿತ ಕೆಎಸ್‌ಆರ್‌ಟಿಸಿ ಬಸ್ ಸೇವೆ ಅಂತ್ಯವಾಗಲಿದೆ. ಇಲ್ಲೇ ಇರುವ […]

ಒಂದು ವಾರದಲ್ಲಿ ಅಗಸ, ಕ್ಷೌರಿಕ, ಆಟೋ ಚಾಲಕರಿಗೆ ತಲಾ 5 ಸಾವಿರ ಕೊಡ್ತೀವಿ: BSY
ಸಾಧು ಶ್ರೀನಾಥ್​
|

Updated on:May 06, 2020 | 11:41 AM

Share

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟಲು ಒಂದೂವರೆ ತಿಂಗಳಿನಿಂದ ಲಾಕ್‌ಡೌನ್ ಮಾಡಲಾಗಿದೆ. ಇದರಿಂದ ರಾಜ್ಯದ ಜನರು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಹೀಗಾಗಿ 1,610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ರಾಜ್ಯದಲ್ಲಿ ಕಳೆದ ಮೂರು ದಿನದಿಂದ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ. ಹಾಗಂತ ಲಾಕ್‌ಡೌನ್ ಸಡಿಲಿಕೆ ದುರುಪಯೋಗಪಡಿಸಿಕೊಳ್ಳಬಾರದು. ಕಾರ್ಮಿಕರು ತಮ್ಮ ಗ್ರಾಮಗಳಿಗೆ ಹೋಗಲು ಮನವಿ ಮಾಡಿದ್ದರು. ಹೀಗಾಗಿ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ. ನಾಳೆಗೆ ಉಚಿತ ಕೆಎಸ್‌ಆರ್‌ಟಿಸಿ ಬಸ್ ಸೇವೆ ಅಂತ್ಯವಾಗಲಿದೆ. ಇಲ್ಲೇ ಇರುವ ಕಾರ್ಮಿಕರಿಗೆ ಅಗತ್ಯ ಸೌಲಭ್ಯ ನೀಡಿದ್ದೇವೆ. ಮುಂದಿನ ದಿನಗಳಲ್ಲೂ ಇದೇ ರೀತಿ ಸೌಲಭ್ಯ ನೀಡುತ್ತೇವೆ.

1,610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ: ರಾಜ್ಯದಲ್ಲಿ ಕೈಗಾರಿಕೆಗಳನ್ನು ಪುನರ್ ಆರಂಭ ಮಾಡಬೇಕು. ಈ ಬಗ್ಗೆ ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇವೆ. ಆರ್ಥಿಕ ಸಂಕಷ್ಟದಲ್ಲಿ ಜನರ ನೆರವಿಗೆ ಧಾವಿಸಬೇಕು. ಹೀಗಾಗಿ 1,610 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ದೇವಾಲಯಗಳನ್ನು ಮುಚ್ಚಲಾಗಿದೆ. ದೊಡ್ಡ ದೊಡ್ಡ ಕಾರ್ಯಕ್ರಮಗಳು ನಿಂತು ಹೋಗಿವೆ. ಹೀಗಾಗಿ ಹೂವು ಬೆಳೆಗಾರರಿಗೆ ಆರ್ಥಿಕ ನೆರವು ನೀಡಲಾಗುವುದು.

ಹೂ ಬೆಳೆಗಾರರಿಗೆ ಪರಿಹಾರ ಧನ: 11,687 ಹೆಕ್ಟೇರ್ ಪ್ರದೇಶದಲ್ಲಿರುವ ಹೂವು ಮಾರಾಟವಾಗಿಲ್ಲ. ಒಂದು ಹೆಕ್ಟೇರ್‌ಗೆ 25 ಸಾವಿರ ರೂ. ಪರಿಹಾರ ಧನ ನೀಡಲಾಗುವುದು. ಗರಿಷ್ಠ ಒಂದು ಹೆಕ್ಟೇರ್‌ಗೆ ಮಾತ್ರ ಪರಿಹಾರ ನೀಡುತ್ತೇವೆ. ತರಕಾರಿ, ಹಣ್ಣು ಬೆಳಗಾರರಿಗೆ ಪರಿಹಾರ ನೀಡಲು ಪ್ಯಾಕೇಜ್ ಘೋಷಿಸಲು ಚರ್ಚೆ ಮಾಡುತ್ತಿದ್ದೇವೆ. ಹಣ್ಣು ಬೆಳೆಗಾರರಿಗೆ ಶೀಘ್ರದಲ್ಲೇ ಪ್ಯಾಕೇಜ್ ನೀಡುತ್ತೇವೆ.

ಅಗಸ, ಕ್ಷೌರಿಕ, ಆಟೋ ಚಾಲಕರಿಗೆ ಪರಿಹಾರ: ಅಗಸ, ಕ್ಷೌರಿಕರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಇದರಿಂದ 60 ಸಾವಿರ ಅಗಸರು, 2 ಲಕ್ಷ ಕ್ಷೌರಿಕರಿಗೆ ಅನುಕೂಲವಾಗಲಿದೆ. ಆಟೋ, ರಿಕ್ಷಾ ಚಾಲಕರಿಗೆ 5 ಸಾವಿರ ಪರಿಹಾರ ನೀಡುತ್ತೇವೆ. ಇದರಿಂದ 7 ಲಕ್ಷ 75 ಆಟೋ, ರಿಕ್ಷಾ ಚಾಲಕರಿಗೆ ಪರಿಹಾರ ಸಿಗುತ್ತೆ.

ಸಣ್ಣ ಉದ್ದಿಮೆಗಳ ವಿದ್ಯುತ್ ಬಿಲ್ ಮನ್ನಾ: ಸಣ್ಣ ಉದ್ದಿಮೆಗಳು ಸಹ ಸಂಕಷ್ಟ ಅನುಭವಿಸುತ್ತಿವೆ. ಹಾಗಾಗಿ 2 ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡುತ್ತಿದ್ದೇವೆ. ಸಣ್ಣ, ಅತಿ ಸಣ್ಣ, ಮಧ್ಯಮ ಉದ್ದಿಮೆಗಳಿಗೆ ಮಾತ್ರ ಇದು ಅನ್ವಯವಾಗಲಿದೆ. ಗ್ರಾಹಕರಿಗೆ ಶೇ.1ರಷ್ಟು ವಿದ್ಯುತ್ ಬಿಲ್ ರಿಯಾಯಿತಿ ನೀಡಲಾಗುವುದು. ಸಮಯಕ್ಕೆ ಸರಿಯಾಗಿ ಬಿಲ್ ಪಾವತಿಸಿದರೆ ರಿಯಾಯಿತಿ ಸಿಗುತ್ತೆ. ತಡವಾಗಿ ಬಿಲ್ ಪಾವತಿಸಿದವರಿಗೆ ಬಡ್ಡಿಯಲ್ಲಿ ಶೇಕಡಾ 50ರಿಂದ 75ರಷ್ಟು ಬಡ್ಡಿಯಲ್ಲಿ ಕಡಿತವಾಗಲಿದೆ.

ನೇಕಾರರಿಗೆ ಹೊಸ ಸಾಲಕ್ಕೆ ಅವಕಾಶ: ಬೃಹತ್ ಕೈಗಾರಿಕೆಗಳು ವಿದ್ಯುತ್ ಬಿಲ್ ಪಾವತಿಸದಿದ್ದರೆ ಅವರಿಗೆ ಯಾವುದೇ ರೀತಿಯ ದಂಡ ವಿಧಿಸುವುದಿಲ್ಲ. ಲಾಕ್‌ಡೌನ್‌ನಿಂದ ನೇಕಾರರು ಸಂಕಷ್ಟ ಅನುಭವಿಸಿದ್ದಾರೆ. ನೇಕಾರರಿಗೆ ಹೊಸ ಸಾಲ ಪಡೆಯುವುದಕ್ಕೆ ಅವಕಾಶ ನೀಡಲಾಗುವುದು. ನೇಕಾರರ ಸಾಲಮನ್ನಾಗೆ ಕೂಡಲೇ 80 ಕೋಟಿ ರೂ. ಬಿಡುಗಡೆ ಮಾಡುತ್ತೇವೆ. ನೇಕಾರ್ ಸಮ್ಮಾನ್ ಯೋಜನೆ ಜಾರಿ ಮಾಡುತ್ತೇವೆ. ಕೈ ಮಗ್ಗ ನೇಕಾರರಿಗೆ ಪ್ರತಿ ವರ್ಷ 2 ಸಾವಿರ ರೂ. ಕೊಡುತ್ತೇವೆ.

ನೇರವಾಗಿ ಅವರ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುತ್ತೇವೆ. ಸದ್ಯ ಕಟ್ಟಡ ಕಾರ್ಮಿಕರಿಗೆ 2 ಸಾವಿರ ರೂಪಾಯಿ ನೀಡುತ್ತಿದ್ದೇವೆ. 3 ಸಾವಿರ ರೂಪಾಯಿ ಹೆಚ್ಚುವರಿಯಾಗಿ ನೀಡುತ್ತೇವೆ. ಒಟ್ಟು ಕಟ್ಟಡ ಕಾರ್ಮಿಕರಿಗೆ 5 ಸಾವಿರ ರೂಪಾಯಿ ನೀಡುತ್ತೇವೆ. ರಾಜ್ಯ ಬಿಟ್ಟು ಹೋಗದಂತೆ ತಡೆಯುವುದಕ್ಕೆ ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ 1,600 ಕೋಟಿ ರೂಪಾಯಿ ಖರ್ಚಾಗಲಿದೆ.

ಮದ್ಯ ಪ್ರಿಯರಿಗೆ ಸಿಎಂ ಶಾಕ್: ಮದ್ಯ ಪ್ರಿಯರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಾಕ್ ನೀಡಿದ್ದಾರೆ. ಒಂದೆರಡು ದಿನಗಳಲ್ಲಿ ಮದ್ಯದ ಮೇಲೆ ಸುಂಕ ಶೇ.11ರಷ್ಟು ಹೆಚ್ಚಳ ಮಾಡುವುದಾಗಿ ತಿಳಿಸಿದ್ದಾರೆ. ಬಜೆಟ್‌ನಲ್ಲಿನ ಶೇಕಡಾ 6ರಷ್ಚು ಹೊರತುಪಡಿಸಿ, ಅಬಕಾರಿ ಸುಂಕ ಒಟ್ಟು ಶೇಕಡಾ 17ರಷ್ಟು ಹೆಚ್ಚಳ ಮಾಡುವುದಾಗಿ ಬಿಎಸ್​ವೈ ಘೋಷಿಸಿದ್ದಾರೆ.

Published On - 11:18 am, Wed, 6 May 20