ಮುಷ್ಕರ ಕೈಬಿಡಿ: ಸಾರಿಗೆ ನಿಗಮ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಕರೆ

ಸಭೆಯಲ್ಲಿ ಸರ್ಕಾರದ ನಿರ್ಧಾರ ಒಪ್ಪಿಕೊಂಡು ಸ್ವಾತಂತ್ರ್ಯ ಉದ್ಯಾನದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ ಸಾರಿಗೆ ನೌಕಕರ ಸಂಘದ ಮುಖಂಡರು, ಕೋಡಿಹಳ್ಳಿ ಚಂದ್ರಶೇಖರ್ ಜೊತೆಗೂಡಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ.

ಮುಷ್ಕರ ಕೈಬಿಡಿ: ಸಾರಿಗೆ ನಿಗಮ ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಕರೆ
ಇಂದು ಮೈಸೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 13, 2020 | 10:28 PM

ಬೆಂಗಳೂರು: ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.

ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನಡೆಸಿದ ಚರ್ಚೆಯಲ್ಲಿ ಸಾರಿಗೆ ನೌಕರರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಯಿತು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆನ್ನುವ ಬೇಡಿಕೆಯನ್ನು ಹೊರತುಪಡಿಸಿ ವೇತನ ತಾರತಮ್ಯ, ಕೋವಿಡ್ 19ರಿಂದ ಮೃತರಾದ ಸಾರಿಗೆ ನೌಕರರ ಕುಟುಂಬಗಳಿಗೆ ₹ 30 ಲಕ್ಷ ರೂ.ಗಳ ಪರಿಹಾರ, ಮೇಲಾಧಿಕಾರಿಗಳ ಕಿರುಕುಳ ತಪ್ಪಿಸಲು ಕ್ರಮ ಮುಂತಾದ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಲಾಗಿತ್ತು ಎಂದು ಬಿಎಸ್​ವೈ ತಿಳಿಸಿದರು.

ಕೋಡಿಹಳ್ಳಿ ಚಂದ್ರಶೇಖರ್​ ವಿರುದ್ಧ ಹರಿಹಾಯ್ದಿರುವ ಬಿಎಸ್​ವೈ, ಸಭೆಯಲ್ಲಿ ಸರ್ಕಾರದ ನಿರ್ಧಾರ ಒಪ್ಪಿಕೊಂಡು ಸ್ವಾತಂತ್ರ್ಯ ಉದ್ಯಾನದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ ಸಾರಿಗೆ ನೌಕಕರ ಸಂಘದ ಮುಖಂಡರು, ಕೋಡಿಹಳ್ಳಿ ಚಂದ್ರಶೇಖರ್ ಜೊತೆಗೂಡಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ಅವರು ಅನಗತ್ಯವಾಗಿ ನೌಕರರ ದಾರಿತಪ್ಪಿಸುತ್ತಿರುವುದು ಸರಿಯಲ್ಲ. ಅವರ ದುರುದ್ದೇಶಪೂರಿತ ನಡೆ ಖಂಡನೀಯ ಎಂದರು.

ಮುಷ್ಕರದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಇದಲ್ಲದೆ ಸಾರಿಗೆ ಸಂಸ್ಥೆಗೆ ನಷ್ಟ ಹಾಗೂ ಸಾರಿಗೆ ನಿಗಮಗಳ ನೌಕರರಿಗೂ ತೊಂದರೆಯಾಗುತ್ತದೆ. ನೌಕರರು ಮುಷ್ಕರವನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮುಖ್ಯಮಂತ್ರಿಗಳು ಕರೆ ನೀಡಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್ ಬ್ಲ್ಯಾಕ್​ಮೇಲ್ ತಂತ್ರ ರೂಪಿಸುತ್ತಿದ್ದಾರೆ: ಬೊಮ್ಮಾಯಿ ಆರೋಪ

Published On - 10:21 pm, Sun, 13 December 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ