
ಬೆಂಗಳೂರು: ಬೈಎಲೆಕ್ಷನ್‌ನಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಮಂತ್ರಿ ಸ್ಥಾನ ನೀಡುತ್ತೇನೆ. ನೂರಕ್ಕೆ ನೂರರಷ್ಟು ಮುನಿರತ್ನಗೆ ಸಚಿವ ಸ್ಥಾನ ಕೊಡುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ನಾವು ಯಾವುದೇ ಜಾತಿ ರಾಜಕಾರಣವನ್ನು ಮಾಡುತ್ತಿಲ್ಲ. ನಮ್ಮ ಸಂಪುಟದಲ್ಲಿ ಈಗಾಗಲೇ ಒಕ್ಕಲಿಗ ಸಚಿವರು ಇದ್ದಾರೆ. ಎಲ್ಲ ಸಮುದಾಯವನ್ನು ಒಟ್ಟಿಗೆ ತೆಗೆದುಕೊಂಡು ಹೋಗ್ತೇವೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.
ಉಪಚುನಾವಣೆ ಮುಗಿದ ಕೂಡಲೇ ದೆಹಲಿಗೆ ಹೋಗುತ್ತೇನೆ. ಸಂಪುಟ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ದೆಹಲಿಗೆ ಹೋದ ಬಳಿಕ ಅಲ್ಲಿ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು. ಸಚಿವ ಸಂಪುಟ ಈಗಾಗಲೇ ವಿಸ್ತರಣೆ ಮಾಡಬೇಕಾಗಿತ್ತು. ಬೇರೆ ಬೇರೆ ಕಾರಣಗಳಿಂದ ವಿಸ್ತರಣೆ ಮಾಡಲು ಆಗಿಲ್ಲ ಎಂದು ಹೇಳಿದರು.