ಯಡಿಯೂರಪ್ಪ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಪಕ್ಷಪಾತ: ಮಧ್ಯ ಪ್ರವೇಶಿಸುವಂತೆ ಸಿಜೆಐಗೆ ಮನವಿ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಪಕ್ಷಪಾತದಿಂದ ವರ್ತಿಸುತ್ತಿದೆ ಎಂದು ಆರೋಪಿಸಿ, ಮುಖ್ಯ ನ್ಯಾಯಮೂರ್ತಿಗಳಿಗೆ ಬೆಂಗಳೂರಿನ ವಕೀಲ ಸಚಿನ್ ದೇಶಪಾಂಡೆ ಅವರು ಪತ್ರ ಬರೆದಿದ್ದಾರೆ.
ಬೆಂಗಳೂರು, ನವೆಂಬರ್ 22: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ (Supreme Court) ಮಾಡುತ್ತಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಮುಖ್ಯ ನ್ಯಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರಿಗೆ ಬೆಂಗಳೂರಿನ ವಕೀಲ ಸಚಿನ್ ದೇಶಪಾಂಡೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 2017ರಿಂದ ಬಾಕಿ ಉಳಿದಿರುವ ಹಲವು ಪ್ರಕರಣಗಳ ತನಿಖೆಗೆ ಯಾವುದೇ ವಿವರಣೆ ನೀಡಿದೆ ಸುಪ್ರೀಂ ಕೋರ್ಟ್ ತಡಯಾಜ್ಞೆ ನೀಡಿದೆ. ಈ ಮೂಲಕ ನ್ಯಾಯಾಂಗ ಬಿಎಸ್ ಯಡಿಯೂರಪ್ಪ ಅವರ ಪರ ನಿಲುವು ತಾಳುತ್ತಿದೆ ಎಂದು ವಕೀಲ ಸಚಿನ್ ಆರೋಪಿಸಿದ್ದಾರೆ.
“ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ ಸೆಕ್ಷನ್ 19ಕ್ಕೆ ವಿರುದ್ಧವಾಗಿ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಚರ್ಚಿಸದೇ ಬಿಎಸ್ ಯಡಿಯೂರಪ್ಪ ಅವರು ಕೋರಿದ ತಕ್ಷಣ ಬಹುತೇಕ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.”
“ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಪಿಸಿ ಕಾಯ್ದೆಯಡಿ ದಾಖಲಾಗಿದ್ದ ಭ್ರಷ್ಟಾಚಾರ ಪ್ರಕರಣಗಳನ್ನು ಹೈಕೋರ್ಟ್ ವಜಾ ಮಾಡಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಮತ್ತು ಲೋಕಾಯುಕ್ತ ಹಾಗೂ ಭ್ರಚಾರ ನಿಗ್ರಹ ದಳ ಸುಪ್ರೀಂ ಕೋರ್ಟನಲ್ಲಿ ಪ್ರಶ್ನಿಸಿದಾಗ ಸುಪ್ರೀಂ ಕೋರ್ಟ್ ಯಾವುದೇ ವಿವರಣೆ ನೀಡಿದೆ ತಡೆ ನೀಡಿದೆ. ಇದು ಬಿಎಸ್ ಯಡಿಯೂರಪ್ಪ ಪರವಾಗಿ ಸುಪ್ರೀಂ ಕೋರ್ಟ್ ಪಕ್ಷಪಾತದಿಂದ ನಡೆದುಕೊಂಡಿದೆ ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:51 am, Fri, 22 November 24