ಬಿಎಸ್​ ಯಡಿಯೂರಪ್ಪ ಆಪ್ತ, ವರುಣ ಕ್ಷೇತ್ರದ ಪ್ರಭಾವಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ನಿಧನ

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಆಪ್ತ ವರುಣ ಕ್ಷೇತ್ರದ ಪ್ರಭಾವಿ ಮುಖಂಡರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ತಡರಾತ್ರಿ ನಿಧನರಾಗಿದ್ದಾರೆ. ಕಳೆದ ಆರೇಳು ತಿಂಗಳಿನಿಂದ ಕಾ.ಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೆ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬಿಎಸ್​ ಯಡಿಯೂರಪ್ಪ ಆಪ್ತ, ವರುಣ ಕ್ಷೇತ್ರದ ಪ್ರಭಾವಿ ಮುಖಂಡ ಕಾಪು ಸಿದ್ದಲಿಂಗಸ್ವಾಮಿ ನಿಧನ
ಕಾ.ಪು ಸಿದ್ದಲಿಂಗಸ್ವಾಮಿ
Follow us
ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on: Jun 06, 2024 | 8:34 AM

ಮೈಸೂರು, ಜೂನ್.06: ಬಿಜೆಪಿ ಹಿರಿಯ ಮುಖಂಡ ಕಾ.ಪು.ಸಿದ್ದಲಿಂಗಸ್ವಾಮಿ(56) ವಿಧಿವಶರಾಗಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ (BS Yediyurappa) ಆಪ್ತ ಸಹಾಯಕರಾಗಿದ್ದ ಕಾ.ಪು ಸಿದ್ದಲಿಂಗಸ್ವಾಮಿ (Kapu Siddalingaswamy) ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ (Apollo Hospital) ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾ.ಪು ಸಿದ್ದಲಿಂಗಸ್ವಾಮಿ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೆ ಬಿಜೆಪಿ ಮುಖಂಡ ಕಾ.ಪು.ಸಿದ್ದಲಿಂಗಸ್ವಾಮಿ ನಿಧನರಾಗಿದ್ದಾರೆ.

2013ರಲ್ಲಿ ವರುಣದಿಂದ KJP ಅಭ್ಯರ್ಥಿಯಾಗಿದ್ದ ಕಾ.ಪು.ಸಿದ್ದಲಿಂಗಸ್ವಾಮಿ ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದರು. ಕಾ.ಪು.ಸಿದ್ದಲಿಂಗಸ್ವಾಮಿ ಅಂತ್ಯಕ್ರಿಯೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ನಡೆಯಲಿದೆ. ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿ: ಕುಮಾರಸ್ವಾಮಿ ಕೇಂದ್ರ ಸಚಿವರಾಗುತ್ತಾರಾ, ರಾಜ್ಯದಿಂದ ಎಷ್ಟು ಮಂದಿಗೆ ಸಿಗಬಹುದು ಮೋದಿ ಸಂಪುಟದಲ್ಲಿ ಸ್ಥಾನ?

ಭಾನುವಾರ ಅಷ್ಟೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕಾಪು ಅವರ ಆರೋಗ್ಯ ವಿಚಾರಿಸಿದ್ದರು. ನಿನ್ನೆಯಷ್ಟೇ ತುಮಕೂರು ನೂತನ ಸಂಸದ ವಿ ಸೋಮಣ್ಣ ಅವರು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಲ್ಲಿ ಸೋಮಣ್ಣ ಪರ ಕಾಪು ಅವರು ಕೆಲಸ ಮಾಡಿದ್ದರು.

2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ಅವರ ವಿರುದ್ಧ ಸೋಲುಂಡಿದ್ದರು. ವರುಣ ಕ್ಷೇತ್ರದ ಬಿಜೆಪಿಯಲ್ಲಿ ಹಿಡಿತ ಹೊಂದಿದ್ದ ಸಿದ್ದಲಿಂಗಸ್ವಾಮಿ ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದರು. ಕಾಪುಸಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ