ನಮ್ಮದು ರೈತ ಪರ ಸರ್ಕಾರ; ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ: ಬಿ ಎಸ್ ಯಡಿಯೂರಪ್ಪ

ರಾಜ್ಯದಲ್ಲಿ 3ನೇ ಅಲೆ ಬರುವುದಾಗಿ ತಜ್ಞರು ಹೇಳುತ್ತಿದ್ದಾರೆ. 2ನೇ ಅಲೆಗಿಂತ 3ನೇ ಅಲೆಯಿಂದ ಇನ್ನೂ ಹೆಚ್ಚಿನ ತೊಂದರೆ ನೀಡಬಹುದು. ಹೀಗಾಗಿ ಜನರು ಇನ್ನೂ ಹೆಚ್ಚು ಮುಂಜಾಗ್ರತೆ ವಹಿಸಬೇಕು ಎಂದು ಕಲಬುರಗಿಯಲ್ಲಿ ಸಿಎಂ ಬಿ.ಎಸ್​.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ನಮ್ಮದು ರೈತ ಪರ ಸರ್ಕಾರ; ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ: ಬಿ ಎಸ್ ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ (ಚಿತ್ರ: ಅಂತರ್ಜಾಲ)
Follow us
TV9 Web
| Updated By: ganapathi bhat

Updated on:Jul 10, 2021 | 3:59 PM

ಕಲಬುರಗಿ: ರೈತ ನೆಮ್ಮದಿಯಿಂದ ಇದ್ರಷ್ಟೇ ನಾವು ನೆಮ್ಮದಿಯಿಂದ ಇರಲು ಸಾಧ್ಯ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದು‌ ಸಂತಸ ತಂದಿದೆ. ನಮ್ಮದು ರೈತ ಪರ ಸರ್ಕಾರ, ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ ಎಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಜುಲೈ 10) ಹೇಳಿಕೆ ನೀಡಿದರು.

ರಾಜ್ಯದಲ್ಲಿ 3ನೇ ಅಲೆ ಬರುವುದಾಗಿ ತಜ್ಞರು ಹೇಳುತ್ತಿದ್ದಾರೆ. 2ನೇ ಅಲೆಗಿಂತ 3ನೇ ಅಲೆಯಿಂದ ಇನ್ನೂ ಹೆಚ್ಚಿನ ತೊಂದರೆ ನೀಡಬಹುದು. ಹೀಗಾಗಿ ಜನರು ಇನ್ನೂ ಹೆಚ್ಚು ಮುಂಜಾಗ್ರತೆ ವಹಿಸಬೇಕು ಎಂದು ಕಲಬುರಗಿಯಲ್ಲಿ ಸಿಎಂ ಬಿ.ಎಸ್​.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಡಿಸಿಸಿ ಬ್ಯಾಂಕ್ ಸಾಲ ವಿತರಣಾ ಕಾರ್ಯಕ್ರಮದಲ್ಲಿ‌ ಯಡಿಯೂರಪ್ಪ ಭಾಗಿಯಾಗಿದ್ದಾರೆ. ಕಲಬುರಗಿ ರಂಗ ಮಂದಿರದಲ್ಲಿ ಸಿಎಂ ಯಡಿಯೂರಪ್ಪ ಹೀಗೆ ಮಾತನಾಡಿದ್ದಾರೆ. ರೈತ ನೆಮ್ಮದಿಯಿಂದ ಇದ್ರೆ ಮಾತ್ರ ನಾವು ನೆಮ್ಮದಿಯಿಂದ ಇರಲು ಸಾಧ್ಯ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವದು‌ ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

ರೈತರ ಖಾತೆಗಳಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯ 770 ಕೋಟಿ ಹಣ ಪಾವತಿ ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 4-5 ತಿಂಗಳ ಹಿಂದೆ ಖರೀದಿ ಮಾಡಲಾಗಿದ್ದ ರಾಗಿ, ಭತ್ತ ಹಾಗೂ ಗೋಧಿಗೆ ಬಾಕಿ ಹಣವು ಸುಮಾರು 770 ಕೋಟಿ ರೂಪಾಯಿಯಷ್ಟಿದ್ದು, ಇದನ್ನು ಇನ್ನು 2-3 ದಿನಗಳಲ್ಲಿ ಪಾವತಿಸುವುದಾಗಿ ಸಹಕಾರ ಸಚಿವ ಹಾಗೂ ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರೂ ಎಸ್.ಟಿ. ಸೋಮಶೇಖರ್ ನಿನ್ನೆ (ಜುಲೈ 9) ತಿಳಿಸಿದ್ದರು.

ಸಚಿವ ಸಂಪುಟ ಉಪ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ನಾಲ್ಕೈದು ತಿಂಗಳ ಹಿಂದೆಯೇ ರಾಗಿ, ಭತ್ತ ಹಾಗೂ ಗೋಧಿಯನ್ನು ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಖರೀದಿ ಮಾಡಲಾಗಿತ್ತು. ಆದರೆ, ಬೆಂಬಲ ಬೆಲೆ ಹಣ ಬಿಡುಗಡೆಯಾಗದೆ ಸಮಸ್ಯೆಯಾಗುತ್ತಿದೆ. ಕೂಡಲೇ ಬಾಕಿ ಹಣವನ್ನು ಪಾವತಿಸುವಂತೆ ಒತ್ತಡಗಳು ಬರುತ್ತಿದ್ದವು. ಇದೀಗ ಬಾಕಿ 770 ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಡುಗಡೆ ಮಾಡಲು ಆದೇಶ ನೀಡಿದ್ದು, ಇನ್ನು 2-3 ದಿನಗಳಲ್ಲಿ ರೈತರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಸಚಿವರು ಹೇಳಿದ್ದರು.

ಇದನ್ನೂ ಓದಿ: ವಿಳಂಬವಾಗಿ ಸಂಪುಟ ಪುನರ್ ರಚಿಸಿ ಪ್ರಧಾನಿ ಮೋದಿ ನೀಡಿದ ಸಂದೇಶವಾದರೂ ಏನು? ಯಡಿಯೂರಪ್ಪಗೆ ಕೊಟ್ಟ ಸಂದೇಶ ಏನು?

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಸಲ್ಲಿಸಿದ್ದ ದೂರು ವಜಾ

Published On - 3:38 pm, Sat, 10 July 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ