ಕಲಬುರಗಿ: ರೈತ ನೆಮ್ಮದಿಯಿಂದ ಇದ್ರಷ್ಟೇ ನಾವು ನೆಮ್ಮದಿಯಿಂದ ಇರಲು ಸಾಧ್ಯ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದು ಸಂತಸ ತಂದಿದೆ. ನಮ್ಮದು ರೈತ ಪರ ಸರ್ಕಾರ, ಕೃಷಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ ಎಂದು ಕಲಬುರಗಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಜುಲೈ 10) ಹೇಳಿಕೆ ನೀಡಿದರು.
ರಾಜ್ಯದಲ್ಲಿ 3ನೇ ಅಲೆ ಬರುವುದಾಗಿ ತಜ್ಞರು ಹೇಳುತ್ತಿದ್ದಾರೆ. 2ನೇ ಅಲೆಗಿಂತ 3ನೇ ಅಲೆಯಿಂದ ಇನ್ನೂ ಹೆಚ್ಚಿನ ತೊಂದರೆ ನೀಡಬಹುದು. ಹೀಗಾಗಿ ಜನರು ಇನ್ನೂ ಹೆಚ್ಚು ಮುಂಜಾಗ್ರತೆ ವಹಿಸಬೇಕು ಎಂದು ಕಲಬುರಗಿಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಡಿಸಿಸಿ ಬ್ಯಾಂಕ್ ಸಾಲ ವಿತರಣಾ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಭಾಗಿಯಾಗಿದ್ದಾರೆ. ಕಲಬುರಗಿ ರಂಗ ಮಂದಿರದಲ್ಲಿ ಸಿಎಂ ಯಡಿಯೂರಪ್ಪ ಹೀಗೆ ಮಾತನಾಡಿದ್ದಾರೆ. ರೈತ ನೆಮ್ಮದಿಯಿಂದ ಇದ್ರೆ ಮಾತ್ರ ನಾವು ನೆಮ್ಮದಿಯಿಂದ ಇರಲು ಸಾಧ್ಯ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.
ರೈತರ ಖಾತೆಗಳಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯ 770 ಕೋಟಿ ಹಣ ಪಾವತಿ
ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 4-5 ತಿಂಗಳ ಹಿಂದೆ ಖರೀದಿ ಮಾಡಲಾಗಿದ್ದ ರಾಗಿ, ಭತ್ತ ಹಾಗೂ ಗೋಧಿಗೆ ಬಾಕಿ ಹಣವು ಸುಮಾರು 770 ಕೋಟಿ ರೂಪಾಯಿಯಷ್ಟಿದ್ದು, ಇದನ್ನು ಇನ್ನು 2-3 ದಿನಗಳಲ್ಲಿ ಪಾವತಿಸುವುದಾಗಿ ಸಹಕಾರ ಸಚಿವ ಹಾಗೂ ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷರೂ ಎಸ್.ಟಿ. ಸೋಮಶೇಖರ್ ನಿನ್ನೆ (ಜುಲೈ 9) ತಿಳಿಸಿದ್ದರು.
ಸಚಿವ ಸಂಪುಟ ಉಪ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ನಾಲ್ಕೈದು ತಿಂಗಳ ಹಿಂದೆಯೇ ರಾಗಿ, ಭತ್ತ ಹಾಗೂ ಗೋಧಿಯನ್ನು ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಖರೀದಿ ಮಾಡಲಾಗಿತ್ತು. ಆದರೆ, ಬೆಂಬಲ ಬೆಲೆ ಹಣ ಬಿಡುಗಡೆಯಾಗದೆ ಸಮಸ್ಯೆಯಾಗುತ್ತಿದೆ. ಕೂಡಲೇ ಬಾಕಿ ಹಣವನ್ನು ಪಾವತಿಸುವಂತೆ ಒತ್ತಡಗಳು ಬರುತ್ತಿದ್ದವು. ಇದೀಗ ಬಾಕಿ 770 ಕೋಟಿ ರೂಪಾಯಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಡುಗಡೆ ಮಾಡಲು ಆದೇಶ ನೀಡಿದ್ದು, ಇನ್ನು 2-3 ದಿನಗಳಲ್ಲಿ ರೈತರ ಖಾತೆಗಳಿಗೆ ನೇರವಾಗಿ ಜಮಾ ಮಾಡಲಾಗುವುದು ಎಂದು ಸಚಿವರು ಹೇಳಿದ್ದರು.
ಇದನ್ನೂ ಓದಿ: ವಿಳಂಬವಾಗಿ ಸಂಪುಟ ಪುನರ್ ರಚಿಸಿ ಪ್ರಧಾನಿ ಮೋದಿ ನೀಡಿದ ಸಂದೇಶವಾದರೂ ಏನು? ಯಡಿಯೂರಪ್ಪಗೆ ಕೊಟ್ಟ ಸಂದೇಶ ಏನು?
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಸಲ್ಲಿಸಿದ್ದ ದೂರು ವಜಾ
Published On - 3:38 pm, Sat, 10 July 21