2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ; ಯಾರನ್ನೂ ಸಿಎಂ ಮಾಡಬೇಕೆಂದು ಸಲಹೆ, ಶಿಫಾರಸು ಮಾಡಲ್ಲ -ಯಡಿಯೂರಪ್ಪ

ಬಿ ಎಸ್​ ಯಡಿಯೂರಪ್ಪ: ಹೈಕಮಾಂಡ್‌ನಿಂದ ನನಗೆ ಇನ್ನೂ ಅಧಿಕೃತ ಸೂಚನೆ ಬಂದಿಲ್ಲ. 25ರ ಬಳಿಕ ಬರುವ ಸಂದೇಶಕ್ಕಾಗಿ ನಾನು ಕಾಯುತ್ತಿದ್ದೇನೆ. 2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ. ಅಧಿಕಾರ ಇರಲಿ, ಇಲ್ಲದಿರಲಿ ಪಕ್ಷಕ್ಕಾಗಿ ದುಡಿಯುತ್ತೇನೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಸಿಎಂ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಮಾರ್ಮಿಕವಾಗಿ ಹೇಳಿದ್ದಾರೆ.

2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ; ಯಾರನ್ನೂ ಸಿಎಂ ಮಾಡಬೇಕೆಂದು ಸಲಹೆ, ಶಿಫಾರಸು ಮಾಡಲ್ಲ -ಯಡಿಯೂರಪ್ಪ
2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ; ಯಾರನ್ನೂ ಸಿಎಂ ಮಾಡಬೇಕೆಂದು ಸಲಹೆ, ಶಿಫಾರಸು ಮಾಡಲ್ಲ -ಯಡಿಯೂರಪ್ಪ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 22, 2021 | 4:34 PM

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟದ ಕೊನೆಯ ಸಭೆಗೆ ಮಾನಸಿಕ ಸಿದ್ಧತೆ ನಡೆಸಿದ್ದಾರಾ? ಜುಲೈ 25 ರಂದು ಹೈಕಮಾಂಡಿನಿಂದ ಸಂದೇಶ ಬರುತ್ತೆ. ಸಂದೇಶದಂತೆ ಜುಲೈ 26 ರಂದು ನಾನು ನಡೆದುಕೊಳ್ಳುವೆ ಎಂದು ಹೇಳುವ ಮೂಲಕ ಸಿಎಂ ಹುದ್ದೆಗೆ ರಾಜೀನಾಮೆ ನೀಡುವ ಸುಳಿವನ್ನು ಇಂದು ಬೆಳಗ್ಗೆ ಸಿಎಂ ಯಡಿಯೂರಪ್ಪ ನೀಡಿದ್ದಾರೆ. ಇದು ಕರ್ನಾಟಕದಲ್ಲಿ ರಾಜಕೀಯ ಸಂಚಲನ ಸೃಷ್ಟಿಸಿದೆ.

ಇನ್ನೇನು ಕೆಲವೇ ಕ್ಷಣಗಳಲ್ಲಿ ಕರ್ನಾಟಕದ ಹಾಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಸಚಿವ ಸಂಪುಟ ಸಭೆ ನಡೆಸಲಿದ್ದು, ಅದಕ್ಕೂ ಮುನ್ನ ಸುದ್ದಿಗಾರರೊಂದಿಗೆ ವಿಧಾನಸೌಧದಲ್ಲಿ ಮಾತನಾಡಿದರು. ಹೈಕಮಾಂಡ್ ಹೇಳುವವರೆಗೂ ಸಿಎಂ ಸ್ಥಾನದಲ್ಲಿರುತ್ತೇನೆ. ಹೈಕಮಾಂಡ್‌ ಬೇಡವೆಂದಾಗ ರಾಜೀನಾಮೆ ನೀಡುತ್ತೇನೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಪಕ್ಷ ಸಂಘಟಿಸುತ್ತೇನೆ. ಆದರೆ ಮುಂದೆ ಯಾರನ್ನು ಸಿಎಂ ಮಾಡಬೇಕೆಂದು ಸಲಹೆ ನೀಡಲ್ಲ; ಯಾರ ಹೆಸರನ್ನೂ ಸಿಎಂ ಸ್ಥಾನಕ್ಕೆ ಶಿಫಾರಸು ಮಾಡುವುದಿಲ್ಲ. ಅದರ ಅಗತ್ಯವೂ ಇಲ್ಲ; ಕೇಳಿದರೂ ನಾನು ಯಾರ ಹೆಸರನ್ನೂ ಸೂಚಿಸುವುದಿಲ್ಲ ಎಂದು ಪಕ್ಷದಲ್ಲಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಸೂಚ್ಯವಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ:ಸಿಎಂ ಬಿ.ಎಸ್. ಯಡಿಯೂರಪ್ಪ

ಹೈಕಮಾಂಡ್‌ನಿಂದ ನನಗೆ ಇನ್ನೂ ಅಧಿಕೃತ ಸೂಚನೆ ಬಂದಿಲ್ಲ. 25ರ ಬಳಿಕ ಬರುವ ಸಂದೇಶಕ್ಕಾಗಿ ನಾನು ಕಾಯುತ್ತಿದ್ದೇನೆ. 2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ. ಅಧಿಕಾರ ಇರಲಿ, ಇಲ್ಲದಿರಲಿ ಪಕ್ಷಕ್ಕಾಗಿ ದುಡಿಯುತ್ತೇನೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಮಾರ್ಮಿಕವಾಗಿ ಹೇಳಿದ್ದಾರೆ.

ವಿಧಾನಸೌಧದ 3ನೇ ಮಹಡಿಯಲ್ಲಿರುವ ತಮ್ಮ ಕೊಠಡಿಯಲ್ಲಿ ಸಚಿವರ ದಂಡಿಲ್ಲದೇ ಸಿಎಂ ಬಿ.ಎಸ್. ಯಡಿಯೂರಪ್ಪ ಏಕಾಂಗಿಯಾಗಿ ಕುಳಿತಿದ್ದರು. ಸ್ವಲ್ಪ ಸಮಯದ ಬಳಿಕ ಸಿಎಂ ಕೊಠಡಿಗೆ ಹಿರಿಯ ಸಚಿವರಾದ ಬಸವರಾಜ ಬೊಮ್ಮಾಯಿ, ಉಮೇಶ್ ಕತ್ತಿ, ಭೈರತಿ, ಸಿ.ಸಿ.ಪಾಟೀಲ್ ಆಗಮಿಸಿದರು.

ಸಿಎಂ ಬಿಎಸ್​ವೈ ಅವರೇ ಹೇಳಿದ್ದಾರೆ ಪಕ್ಷ ತಾಯಿ ಇದ್ದಂತೆ. ವರಿಷ್ಠರ ನಿರ್ಧಾರಕ್ಕೆ ಬದ್ಧ ಎಂದು ಸಿಎಂ ಅವರೇ ಹೇಳಿದ್ದಾರೆ. ಅದರ ಬಗ್ಗೆ ವ್ಯಾಖ್ಯಾನ ಮಾಡುವಷ್ಟು ದೊಡ್ಡವರಲ್ಲ ನಾವು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್​ ಇದೇ ಸಂದರ್ಭದಲ್ಲಿ ಹೇಳಿದರು. ಇನ್ನು ವಲಸೆ ಬಂದ 17 ಸಚಿವರ ಮುಂದಿನ ನಡೆ ಬಗ್ಗೆ ಪ್ರಶ್ನೆ ಮಾಡಿದಾಗ ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಬಿಸಿ ಪಾಟೀಲ್ ತೆರಳಿದರು.

ಮಂಗಳಮುಖಿಯರಿಂದ ಭೇಟಿ: ರಾಜ್ಯ ಸರ್ಕಾರದ ನೇಮಕಾತಿಯಲ್ಲಿ ಶೇಕಡಾ 1 ರಷ್ಟು ಮೀಸಲಾತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಮಂಗಳಮುಖಿಯರು ಅಭಿನಂದನೆ ಸಲ್ಲಿಸಿದರು. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಮಂಗಳಮುಖಿಯರು ಸಿಎಂ ಸಚಿವ ಸಂಪುಟ ಸಭೆಗೆ‌ ತೆರಳುವ ಮುನ್ನ ಭೇಟಿ ಮಾಡಿ, ಅಭಿನಂದನೆ ಹೇಳಿದರು.

BS Yediyurappa: ಕರ್ನಾಟಕದಲ್ಲಿ ಯಡಿಯೂರಪ್ಪ ನಂತರ ಬಿಜೆಪಿ ನಾಯಕ ಇವರೇನಾ? ಇಷ್ಟಕ್ಕೂ ಬಿಎಸ್​ವೈ ರಾಜೀನಾಮೆಗೆ ಕಾರಣವೇನು?

(BS Yediyurappa exit from Karnataka chief ministership expected but i wont suggest any name for next cm)

Published On - 4:09 pm, Thu, 22 July 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ