AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜು. 26 ರಂದು ಎಲ್ಲಾ ಗೊಂದಲಕ್ಕೆ ತೆರೆ ಬೀಳುತ್ತದೆ; ಹೈಕಮಾಂಡ್ ಎನು ಹೇಳ್ತಾರೋ ಅದಕ್ಕೆ ನಾನೂ ಬದ್ಧ: ಸಚಿವ ಆರ್ ಅಶೋಕ್

ಬಿ ಎಸ್​ ಯಡಿಯೂರಪ್ಪ: ಟಿವಿ9 ಜೊತೆ ನಡೆಸಿದ ಚಿಟ್ ಚಾಟ್​ನಲ್ಲಿ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್ ಅವರು ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ದ.  ಹೈಕಮಾಂಡ್ ಎನು ಹೇಳುತ್ತಾರೆ ಅದಕ್ಕೆ ನಾವೆಲ್ಲರೂ ಬದ್ದವಾಗಿರುತ್ತೇವೆ. ಜೊತೆಗೆ ಜುಲೈ 26 ಕ್ಕೆ ಎಲ್ಲ ಗೊಂದಲಕ್ಕೆ ತೆರೆ ಬೀಳುತ್ತದೆ ಎಂದಿದ್ದಾರೆ. 

ಜು. 26 ರಂದು ಎಲ್ಲಾ ಗೊಂದಲಕ್ಕೆ ತೆರೆ ಬೀಳುತ್ತದೆ; ಹೈಕಮಾಂಡ್ ಎನು ಹೇಳ್ತಾರೋ ಅದಕ್ಕೆ ನಾನೂ ಬದ್ಧ: ಸಚಿವ ಆರ್ ಅಶೋಕ್
ಆರ್ ಅಶೋಕ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 22, 2021 | 3:14 PM

Share

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಈ ಬಾರಿ ನಿರ್ಣಾಯಕ ಹಂತಕ್ಕೆ ಬಂದಂತಿದೆ. ಸ್ವತಃ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರೂ ಸಹ ತಾವು 76 ವರ್ಷ ದಾಟಿದ್ದು;  ಮುಖ್ಯಮಂತ್ರಿ ಸ್ಥಾನ ತ್ಯಜಿಸಿ ಎಂದು ಹೈಕಮಾಂಡ್​ ಸೂಚಿಸಿದರೆ ಪಕ್ಷದ ಹಿತದೃಷ್ಟಿಯಿಂದ ತಾನು ಸಿಎಂ ಸ್ಥಾನದಿಂದ ನಿರ್ಗಮಿಸುವುದಾಗಿ ಇಂದು ಬೆಳಗ್ಗೆ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಸಿಎಂ ಯಡಿಯೂರಪ್ಪ ಸಂಪುಟದ ಪ್ರಭಾವೀ ಸಚಿವ ಆರ್​ ಅಶೋಕ್​ ಅವರೂ ಸಹ  ಪಕ್ಷದ ಶಿಸ್ತಿನ ಸಿಪಾಯಿಯಾಗಿ ಆದೇಶ ಪಾಲಿಸುವೆ. ಒಟ್ಟಿನಲ್ಲಿ ಜುಲೈ 26 ಕ್ಕೆ ಎಲ್ಲಾ ಗೊಂದಲಕ್ಕೆ ತೆರೆ ಬೀಳುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಟಿವಿ9 ಜೊತೆ ನಡೆಸಿದ ಚಿಟ್ ಚಾಟ್​ನಲ್ಲಿ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್ ಅವರು ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ದ.  ಹೈಕಮಾಂಡ್ ಎನು ಹೇಳುತ್ತಾರೆ ಅದಕ್ಕೆ ನಾವೆಲ್ಲರೂ ಬದ್ದವಾಗಿರುತ್ತೇವೆ. ನಾನು ಪಕ್ಷದ ಶಿಸ್ತಿನ ಸಿಪಾಯಿ ಅನ್ನೋ ಸಂದೇಶ ಕೊಟ್ಟಿದ್ದಾರೆ. ಜೊತೆಗೆ ಜುಲೈ 26 ಕ್ಕೆ ಎಲ್ಲ ಗೊಂದಲಕ್ಕೆ ತೆರೆ ಬೀಳುತ್ತದೆ ಎಂದಿದ್ದಾರೆ.

ಮೊದಲ ಬಾರಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರದಿಂದ ಇಳಿಯುವ ಸುಳಿವನ್ನು ನೀಡಿದ್ದಾರೆ. ಇಂದು (ಜುಲೈ 22) ಬೆಂಗಳೂರು ಸಮೀಪ ಕಾಚರಕನಹಳ್ಳಿಯಲ್ಲಿ ನಡೆದ ಧನ್ವಂತರಿ ಹೋಮದಲ್ಲಿ ಪಾಲ್ಗೊಂಡ ಬಿ.ಎಸ್​.ಯಡಿಯೂರಪ್ಪ ಪೂಜೆ ಮುಗಿಸಿ ಹೊರಬಂದು ಈ ಬಗ್ಗೆ ಮಾತನಾಡಿದ್ದಾರೆ. ಈ ತಿಂಗಳು 25 ರಂದು ಹೈಕಮಾಂಡ್​ನಿಂದ ಸೂಚನೆ ಬರುತ್ತೆ. ಅದರ ಆಧಾರದ ಮೇಲೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ಮಠಾಧೀಶರು ಕೊಟ್ಟ ಪ್ರೀತಿಗೆ ನಾನು ಚಿರಋಣಿ. ಪಕ್ಷ ಬಲಪಡಿಸಿ ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನನ್ನ ಮುಂದಿರುವ ಗುರಿ-ದಾರಿ. ಅದಕ್ಕಾಗಿ ಹಗಲು ರಾತ್ರಿ ಕೆಲಸ ಮಾಡುತ್ತೇನೆ. ಎಲ್ಲರೂ ಸಹಕರಿಸಿ ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ. ಅವರ ಮಾತಿನ ಧ್ವನಿ ಹೇಗಿತ್ತು ಎಂದರೆ, 26 ಕ್ಕೆ ಅವರ ಸರಕಾರಕ್ಕೆ ಎರಡು ವರ್ಷ ತುಂಬುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಆ ನಂತರ ಅವರು ಪ್ರಾಯಶಃ ಮುಖ್ಯಮಂತ್ರಿ ಹುದ್ದೆಯಿಂದ ಇಳಿಯುವಂತೆ ಕಾಣುತ್ತಿತ್ತು. ಅವರ ಧ್ವನಿ ಅದನ್ನೇ ಸಾರುತ್ತಿತ್ತು.

ಬೇಗ ಈ ವಾತಾವರಣ ತಿಳಿಗೊಳಿಸಿ ಉತ್ತಮ ಆಡಳಿತ ನೀಡಿ; ಬಿಜೆಪಿ ಹೈಕಮಾಂಡ್‌ಗೆ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ

(BS Yediyurappa exit from Karnataka chief ministership minister r ashoka statement)

Published On - 3:03 pm, Thu, 22 July 21

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು