ಇನ್ನೆರಡು ವರ್ಷ ಬಿಎಸ್​ವೈ ಸಿಎಂ ಆಗಿರಬೇಕು.. ಅಷ್ಟದಿಕ್ಕುಗಳಲ್ಲಿ ಈಡುಗಾಯಿ ಒಡೆದು ಪೂಜೆ ಸಲ್ಲಿಸಿದ ಅಭಿಮಾನಿಗಳು

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ವದಂತಿ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪನವರ ಅಭಿಮಾನಿಗಳಿಂದ ಈಡುಗಾಯಿ ಸೇವೆ ಸಲ್ಲಿಸಲಾಗುತ್ತಿದೆ. ಮಂಡ್ಯದ ಕಾಳಮ್ಮ ದೇವಸ್ಥಾನದ ಅಷ್ಟದಿಕ್ಕುಗಳಲ್ಲಿ ಈಡುಗಾಯಿ ಒಡೆದು ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ.

ಇನ್ನೆರಡು ವರ್ಷ ಬಿಎಸ್​ವೈ ಸಿಎಂ ಆಗಿರಬೇಕು.. ಅಷ್ಟದಿಕ್ಕುಗಳಲ್ಲಿ ಈಡುಗಾಯಿ ಒಡೆದು ಪೂಜೆ ಸಲ್ಲಿಸಿದ ಅಭಿಮಾನಿಗಳು
ಅಷ್ಟದಿಕ್ಕುಗಳಲ್ಲಿ ಈಡುಗಾಯಿ ಒಡೆದು ಪೂಜೆ ಸಲ್ಲಿಸಿದ ಅಭಿಮಾನಿಗಳು
Follow us
TV9 Web
| Updated By: ಆಯೇಷಾ ಬಾನು

Updated on: Jun 16, 2021 | 12:22 PM

ಮಂಡ್ಯ: ಕರ್ನಾಟಕ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮುಸುಕಿನ ಗುದ್ದಾಟ ನಡೆಯುತ್ತಿದೆ. ಸಿಎಂ ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಎರಡು ಗುಂಪುಗಳು, ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಸದ್ಯ ಇದಕ್ಕೆ ಬ್ರೇಕ್ ಹಾಕಲು ಇಂದು ಸಂಜೆ 5 ಗಂಟೆಗೆ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಈ ಬಗ್ಗೆ ಚರ್ಚೆ ನಡೆಸಲು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಇದರ ಬೆನ್ನಲ್ಲೆ ರಾಜಕೀಯ ಕ್ಷೇತ್ರದಲ್ಲಿ ಅನೇಕ ಚರ್ಚೆಗಳು ನಡೆಯುತ್ತಿವೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ವದಂತಿ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪನವರ ಅಭಿಮಾನಿಗಳಿಂದ ಈಡುಗಾಯಿ ಸೇವೆ ಸಲ್ಲಿಸಲಾಗುತ್ತಿದೆ. ಮಂಡ್ಯದ ಕಾಳಮ್ಮ ದೇವಸ್ಥಾನದ ಅಷ್ಟದಿಕ್ಕುಗಳಲ್ಲಿ ಈಡುಗಾಯಿ ಒಡೆದು ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಇನ್ನೆರಡು ವರ್ಷ ಬಿಎಸ್ವೈ ಸಿಎಂ ಆಗಿರಬೇಕು. ಯಡಿಯೂರಪ್ಪ ಆಡಳಿತಕ್ಕೆ ಯಾವುದೇ ತೊಂದ್ರೆ ಆಗಬಾರದು. ಅರುಣ್ ಸಿಂಗ್ ಯಡಿಯೂರಪ್ಪ ಪರ ನಿಲ್ಲಬೇಕೆಂದು ಕಾಳಮ್ಮ ದೇವಿಗೆ ಪ್ರಾರ್ಥನೆ ಮಾಡಿ 8 ದಿಕ್ಕುಗಳಿಗೂ ಈಡುಗಾಯಿ ಒಡೆದಿದ್ದಾರೆ.

BS Yediyurappa Fans

ಅಷ್ಟದಿಕ್ಕುಗಳಲ್ಲಿ ಈಡುಗಾಯಿ ಒಡೆದು ಪೂಜೆ ಸಲ್ಲಿಸಿದ ಸಿಎಂ ಯಡಿಯೂರಪ್ಪ ಅಭಿಮಾನಿಗಳು

ಮಧ್ಯಾಹ್ನ 3.30ಕ್ಕೆ ಬೆಂಗಳೂರಿಗೆ ಅರುಣ್ ಸಿಂಗ್ ಆಗಮನ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಏರ್ಪೋರ್ಟ್ನಿಂದ ಕುಮಾರಕೃಪಾ ಗೆಸ್ಟ್ಹೌಸ್ಗೆ ಬಂದಿಳಿಯಲಿದ್ದಾರೆ. ಬಳಿಕ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸಂಜೆ 5 ಗಂಟೆಗೆ ಸಭೆ ನಡೆಸಲಿದ್ದಾರೆ. ಇಂದಿನ ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಭಾಗಿಯಾಗೋ ಸಾಧ್ಯತೆ ಇದೆ.

ಇನ್ನು ವಿಶೇಷ ಅಂದ್ರೆ ಇಂದಿನ ಸಭೆಗೆ ಶಾಸಕರಿಗೆ, ಸಂಸದರಿಗೆ ನೋ ಎಂಟ್ರಿ ಅಂತಾ ಹೇಳಲಾಗಿದ್ದು, ಸಚಿವರೊಂದಿಗೆ ಮಾತ್ರ ಸಭೆ ನಡೆಯಲಿದೆ. ಹೀಗಾಗಿ ನಾಳೆಯಿಂದ ಪರ-ವಿರೋಧ ಗುಂಪಿನ ಅಸಲಿ ಆಟ ಶುರುವಾಗಲಿದೆ. ನಾಳೆ ಶಾಸಕರ ಭೇಟಿಗೆ ಅರುಣ್ ಸಿಂಗ್ ಸಮಯ ಮೀಸಲಿಟ್ಟಿದ್ದು, ನಾಳೆ ಬೆಳಗ್ಗೆ 7ರಿಂದ ರಾತ್ರಿ 11 ರವರೆಗೆ ಸಮಯ ನಿಗದಿ ಮಾಡಲಾಗಿದೆ. ಈ ವೇಳೆ ಶಾಸಕರು ಹಾಗೂ ಸಂಸದರ ತಮಗಿರೋ ನೋವು, ಅಸಮಾಧಾನ ತೋಡಿಕೊಳ್ಳಲು ಅವಕಾಶ ಕೊಡಲಾಗಿದೆ. ಕೆ.ಕೆ. ಗೆಸ್ಟ್ಹೌಸ್ನಲ್ಲಿ ಶಾಸಕರೊಂದಿಗೆ ಅರುಣ್ ಸಿಂಗ್ ಸಭೆ ನಡೆಸಲಿದ್ದಾರೆ. ಇನ್ನು ನಾಡಿದ್ದು ಶುಕ್ರವಾರ ಕೋರ್ ಕಮಿಟಿ ಸದಸ್ಯರೊಂದಿಗೆ ಸಭೆ ನಡೆಸೋ ಅರುಣ್ ಸಿಂಗ್ ಅವತ್ತೇ ಸಂಜೆ ದೆಹಲಿಗೆ ತೆರಳಲಿದ್ದಾರೆ.

BS Yediyurappa Fans

ಅಷ್ಟದಿಕ್ಕುಗಳಲ್ಲಿ ಈಡುಗಾಯಿ ಒಡೆದು ಪೂಜೆ ಸಲ್ಲಿಸಿದ ಸಿಎಂ ಯಡಿಯೂರಪ್ಪ ಅಭಿಮಾನಿಗಳು

ಇದನ್ನೂ ಓದಿ: ಅರುಣ್ ಸಿಂಗ್ ನೇತೃತ್ವದಲ್ಲಿ ಇಂದು ಆರೋಪ ಪ್ರತ್ಯಾರೋಪಗಳ ಚರ್ಚೆ; ಏನಾಗಲಿದೆ ಸಿಎಂ ಯಡಿಯೂರಪ್ಪ ಭವಿಷ್ಯ?

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ