BS Yediyurappa: ವಿಧಾನಸಭೆಯಲ್ಲಿ ಬಿ.ಎಸ್ ಯಡಿಯೂರಪ್ಪ ವಿದಾಯದ ಭಾಷಣ: ಶಿಕಾರಿಪುರ ಜನತೆಗೆ ಚಿರಋಣಿ ಎಂದ ಮಾಜಿ ಸಿಎಂ

ಇದು ನನ್ನ ಕೊನೆಯ ಅಧಿವೇಶನ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಮಾತೇ ಇಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸದನಕ್ಕೆ ಆಯ್ಕೆಯಾಗಿ ಬರಬೇಕು. ಶಿಕಾರಿಪುರ ತಾಲೂಕಿನ ಜನರ ಪ್ರೀತಿಗೆ ನಾನು ಚಿರಋಣಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಹೇಳಿದ್ದಾರೆ.

BS Yediyurappa: ವಿಧಾನಸಭೆಯಲ್ಲಿ ಬಿ.ಎಸ್ ಯಡಿಯೂರಪ್ಪ ವಿದಾಯದ ಭಾಷಣ: ಶಿಕಾರಿಪುರ ಜನತೆಗೆ ಚಿರಋಣಿ ಎಂದ ಮಾಜಿ ಸಿಎಂ
ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ
Follow us
ವಿವೇಕ ಬಿರಾದಾರ
|

Updated on:Feb 24, 2023 | 1:12 PM

ಬೆಂಗಳೂರು: ಇದು ನನ್ನ ಕೊನೆಯ ಅಧಿವೇಶನ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಮಾತೇ ಇಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು (BJP) ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸದನಕ್ಕೆ ಆಯ್ಕೆಯಾಗಿ ಬರಬೇಕು. ಶಿಕಾರಿಪುರ ತಾಲೂಕಿನ ಜನರ ಪ್ರೀತಿಗೆ ನಾನು ಚಿರಋಣಿಯಾಗಿದ್ದೇನೆ. ಫೆಬ್ರವರಿ 27ಕ್ಕೆ ನನಗೆ 80 ವರ್ಷ ತುಂಬುತ್ತದೆ. ಅಂದೇ ಏರ್​ಪೋರ್ಟ್​ ಉದ್ಘಾಟನೆಗೆ ಬರುತ್ತೇನೆಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹೇಳಿದ್ದಾರೆ. ಇದು ನನಗೆ ಅತ್ಯಂತ ಸಮಾಧಾನ ಮತ್ತು ತೃಪ್ತಿ ತಂದಿದೆ ಎಂದು ವಿಧಾನಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ.

ವಿಧಾನಸಭೆಯಲ್ಲಿ ತಮ್ಮ ಕೊನೆಯ ಭಾಷಣ ಮಾಡಿದ ಯಡಿಯೂರಪ್ಪ ಪಕ್ಷ ಕಟ್ಟುವಾಗ ನಾನು ಸಭೆಗೆ ಹೋಗಿ ಭಾಷಣ ಶುರು ಮಾಡಿದ ಮೇಲೆಯೇ ಅಟಲ್​ ಬಿಹಾರಿ ವಾಜಪೇಯಿ, ಮುರಳಿ ಮನೋಹರ್ ಜೋಷಿ ಬರುತ್ತಿದ್ದರು. ನಾನು ಇಂದು ಇಷ್ಟು ಎತ್ತರಕ್ಕೆ ಬೆಳೆಯಲು ಆರ್​ಎಸ್​​ಎಸ್ ಕಾರಣ. RSSನಲ್ಲಿ ಸಿಕ್ಕಿದ ತರಬೇತಿಯಿಂದ ನನಗೆ ಇಷ್ಟೆಲ್ಲಾ ಸ್ಥಾನಮಾನ ಸಿಕ್ಕಿದೆ ಎಂದು ನೆನಪು ಮಾಡಿಕೊಂಡರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಕೂಡ ಎಸ್​​ಸಿ, ಎಸ್​​ಟಿ ಸಮುದಾಯಕ್ಕೆ ಕೊಡುಗೆ ಕೊಟ್ಟಿದ್ದಾರೆ. ಮುಂಬರುವ ದಿನಗಳಲ್ಲಿ ಅದರ ಫಲ ಸಿಗಲಿದೆ. ಮತ್ತೆ ರಾಜ್ಯದಲ್ಲಿ ಓಡಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ. ನೀವೆಲ್ಲರೂ ಮತ್ತೆ ಆಯ್ಕೆ ಯಾಗಿ ಬರಬೇಕು. ಆಡಳಿತ ಪಕ್ಷದ ಯಾರೂ ವಿಚಲಿತರಾಗಬೇಕಿಲ್ಲ. ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದೊಂದಿಗೆ ನಾವು ಹೋಗಬೇಕಾಗಿದೆ ಎಂದು ಆಡಳಿತ ಪಕ್ಷಕ್ಕೆ ಕಿವಿ ಮಾತು ಹೇಳಿದರು.

ನಮಗೆಲ್ಲರಿಗೂ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರೇ ಆದರ್ಶ. ಈ ವಯಸ್ಸಿನಲ್ಲೂ ಕೂಡ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡುತ್ತಾರೆ. ಹೆಚ್​.ಡಿ.ದೇವೇಗೌಡರನ್ನು ನೋಡಿ ನಾವೆಲ್ಲರೂ ಕಲಿಯಬೇಕಿದೆ ಎಂದು ಮಾತನಾಡಿದರು.

ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ತಾವು ಮಂತ್ರಿಯಾಗಿ

ತಾವು (ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ) ಅಧ್ಯಕ್ಷರಾಗಿ ಸದನದ ನಡೆಸಿದ ರೀತಿ ಎಲ್ಲರೂ ಮೆಚ್ಚುವಂತಹದ್ದು. ಮುಂದಿನ ಅಧಿವೇಶನದಲ್ಲಿ ನೀವು ಸ್ಪೀಕರ್ ಪೀಠದಲ್ಲಿ ಕೂರದೇ ಮಂತ್ರಿಗಳಾಗಿ ಇರಬೇಕು. ಇದನ್ನು ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡುತ್ತೇನೆ ಎಂದು ಮನವಿ ಮಾಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರ್ಯವೈಖರಿಗೆ ಬಿಎಸ್​ವೈ ಮೆಚ್ಚುಗೆ

ವಿಪಕ್ಷ ನಾಯಕ ಸಿದ್ದರಾಮಯ್ಯ ಯಶಸ್ವಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಎ.ಟಿ.ರಾಮಸ್ವಾಮಿ ಸೇರಿದಂತೆ ಹಲವರು ಉತ್ತಮ ಕೆಲಸ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಅವರನ್ನು ಹೊಗಳಿದರು.

ರಾಜ್ಯದ ಮತ್ತಷ್ಟ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Fri, 24 February 23