AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಕ್ಸೋ ಕೇಸ್​: ಸಮನ್ಸ್​ಗೆ ತಡೆ ನೀಡಿದ ಹೈಕೋರ್ಟ್, ಯಡಿಯೂರಪ್ಪಗೆ ರಿಲೀಫ್

ಪೋಕ್ಸೋ ಪ್ರಕರಣದ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್‌ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಹೈಕೋರ್ಟ್, ಯಡಿಯೂರಪ್ಪ ಅವರ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಪರಿಗಣಿಸಿ ಈ ಆದೇಶ ಹೊರಡಿಸಿದೆ. ಇದರಿಂದ ಬಿಎಸ್​ ಯಡಿಯೂರಪ್ಪಗೆ ಬಿಗ್​ ರಿಲೀಫ್​ ಸಿಕ್ಕಿದೆ.

ಪೋಕ್ಸೋ ಕೇಸ್​: ಸಮನ್ಸ್​ಗೆ ತಡೆ ನೀಡಿದ ಹೈಕೋರ್ಟ್, ಯಡಿಯೂರಪ್ಪಗೆ ರಿಲೀಫ್
ಬಿಎಸ್ ಯಡಿಯೂರಪ್ಪ
Ramesha M
| Edited By: |

Updated on:Mar 14, 2025 | 12:49 PM

Share

ಬೆಂಗಳೂರು, ಮಾರ್ಚ್​ 14: ಪೋಕ್ಸೋ ಪ್ರಕರಣದ (POCSO Case) ಸಂಬಂಧ ಮಾರ್ಚ್​ 15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ (High Court) ತಡೆ ನೀಡಿದೆ. ಹಾಗೇ, ಮಾಜಿ ಸಿಎಂ ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಬಿಎಸ್​ ಯಡಿಯೂಪ್ಪ (BS Yediyurappa) ಅವರಿಗೆ  ರಿಲೀಫ್​ ಸಿಕ್ಕಿದೆ.

ವಾದ-ಪ್ರತಿವಾದ

 ಹಿರಿಯ ವಕೀಲ ಸಿ.ವಿ.ನಾಗೇಶ್:  ವಿಚಾರಣೆ ವೇಳೆ ಹೈಕೋರ್ಟ್ ಮಧ್ಯಂತರ ರಿಲೀಫ್ ನೀಡಿತ್ತು. ಖುದ್ದು ಹಾಜರಾತಿಯಿಂದಲೂ ಹೈಕೋರ್ಟ್ ವಿನಾಯಿತಿ ನೀಡಿತ್ತು. 2024ರ ಫೆ‌ಬ್ರವರಿ 2ರಂದು ಅನುಚಿತವಾಗಿ ಸ್ಪರ್ಶಿಸಿದ ಆರೋಪವಿದೆ. ಒಂದು ತಿಂಗಳ ಬಳಿಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಸ್ಥಳದಲ್ಲಿದ್ದ ಸಾಕ್ಷಿಗಳು ಆ ರೀತಿಯ ಘಟನೆ ನಡೆದಿಲ್ಲವೆಂದಿದ್ದಾರೆ. ಬಾಲಕಿ, ಆಕೆಯ ತಾಯಿಯ ಹೇಳಿಕೆ ಮೇಲೆ ಆರೋಪಪಟ್ಟಿ ದಾಖಲಿಸಿದ್ದಾರೆ. ತಾಯಿಯ ಮೊಬೈಲ್​ನಲ್ಲಿದ್ದ ಸಂಭಾಷಣೆ ಬಿಎಸ್ ​ಯಡಿಯೂರಪ್ಪ ಅಳಿಸಿಲ್ಲ. ಪೊಲೀಸರು ಹಾಕಿರುವ ಐಟಿ ಸೆಕ್ಷನ್ ದೂರುದಾರರಿಗೆ ಅನ್ವಯವಾಗುತ್ತದೆ ಎಂದು ವಾದಿಸಿದರು.

1 ತಿಂಗಳು 12 ದಿನ ತಡವಾಗಿ ಪೊಕ್ಸೋ ಕೇಸ್ ದಾಖಲಿಸಲಾಗಿದೆ. ಘಟನೆ ನಡೆದಿದ್ದರೆ ಯಾರೂ ಇಷ್ಟು ತಡವಾಗಿ ದೂರು ದಾಖಲಿಸುತ್ತಿರಲಿಲ್ಲ. ಸಮನ್ಸ್ ರದ್ದುಪಡಿಸಿ ಹೊಸದಾಗಿ ಪರಿಶೀಲನೆಗೆ ಹಿಂದೆ ಆದೇಶಿಸಲಾಗಿತ್ತು. ಈಗ ವಿಶೇಷ ಕೋರ್ಟ್ ಕಾಗ್ನಿಜೆನ್ಸ್ ಪಡೆದು ಸಮನ್ಸ್ ಜಾರಿಗೊಳಿಸಿದೆ ಎಂದು ಬಿಎಸ್​ ಯಡಿಯೂರಪ್ಪ ಪರ ವಕೀಲರು ವಾದಿಸಿದರು.

ಇದನ್ನೂ ಓದಿ
Image
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
Image
ವಿಜಯೇಂದ್ರ ಬೆಂಬಲಿಗರ ಸಭೆಯಲ್ಲಿ ಭಾಗಿಯಾಗಿದ್ದು ಡೋಂಗಿಗಳು: ಯತ್ನಾಳ್
Image
ಬೇರೆಯವರ ನೆರವಿಲ್ಲದೆ ಮೆಟ್ಟಿಲು ಹತ್ತಿ ಮೊದಲ ಮಹಡಿಗೆ ಹೋದ ಯಡಿಯೂರಪ್ಪ
Image
ನಾಳೆ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿಎಸ್​ವೈ ಭವಿಷ್ಯ ನಿರ್ಧಾರ!

ಬಿಎಸ್​ ಯಡಿಯೂರಪ್ಪ ವಕೀಲರ ಮನವಿಗೆ ಅಡ್ವೊಕೇಟ್ ಜನರಲ್ ಆಕ್ಷೇಪಿಸಿದರು. ಹೈಕೋರ್ಟ್ ಸೂಚನೆಯಂತೆ ವಿಶೇಷ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ. ಹೀಗಾಗಿ ಸಮನ್ಸ್​​ಗೆ ತಡೆ ನೀಡದಂತೆ ಮನವಿ ಮಾಡಿದರು.

ವಾದ-ಪ್ರತಿವಾದ ಆಲಿಸಿದ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ, ಬಿಎಸ್ ಯಡಿಯೂರಪ್ಪ ಅರ್ಜಿಯ ವಿಚಾರಣೆ ಅಗತ್ಯವಿದೆ ಎಂದು ಹೇಳಿ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ ಕಾಗ್ನಿಜೆನ್ಸ್, ಸಮನ್ಸ್ ಆದೇಶಕ್ಕೆ ತಡೆ ನೀಡಿದೆ. ಹಾಗೇ, ಖುದ್ದು ಹಾಜರಾತಿಯಿಂದಲೂ ಬಿಎಸ್ ಯಡಿಯೂರಪ್ಪ ಅವರಿಗೆ ವಿನಾಯಿತಿ ನೀಡಿದೆ.

ಇದನ್ನೂ ನೋಡಿ: ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆದು ಪುನಃ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇನೆ: ಬಿಎಸ್ ಯಡಿಯೂರಪ್ಪ

ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ಹಿನ್ನೆಲೆ

ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ 2024 ರ ಮಾರ್ಚ್​ನಲ್ಲಿ ಕೇಳಿಬಂದಿತ್ತು. ಸಂತ್ರಸ್ತೆಯ ತಾಯಿ ಈ ಆರೋಪ ಮಾಡಿದ್ದರು. ಬಳಿಕ ಯಡಿಯೂರಪ್ಪ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:36 pm, Fri, 14 March 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್