ಹಂಪಿಯ ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾದೀತೆ? ಬಳ್ಳಾರಿ ಇಬ್ಭಾಗವಾಗುತ್ತಾ?

ಬಳ್ಳಾರಿ ಜಿಲ್ಲೆಯನ್ನ ವಿಭಜಿಸಿ ವಿಜಯನಗರವನ್ನೇ ಪ್ರತ್ಯೇಕ ಜಿಲ್ಲೆಯಾಗಿಸುವ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಜಯನಗರವನ್ನು ಜಿಲ್ಲೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ  ಸೆ. 19ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ಪತ್ರ ಬರೆದಿದ್ದಾರೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಹೊಸಪೇಟೆಯನ್ನು ಕೇಂದ್ರವನ್ನಾಗಿಸಿಕೊಂಡು ವಿಜಯನಗರವನ್ನು ಜಿಲ್ಲೆ ಮಾಡುವ ವಿಷಯವನ್ನು ಮಂಡಿಸುವಂತೆ ಬಿಎಸ್ ವೈ ತಮ್ಮ ಪತ್ರದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದಾರೆ. ಬುಧವಾರ ಎರಡು ವಿಶೇಷ ವಿಮಾನಗಳಲ್ಲಿ ಉಜ್ಜೈನಿ ಪೀಠದ […]

ಹಂಪಿಯ ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾದೀತೆ? ಬಳ್ಳಾರಿ ಇಬ್ಭಾಗವಾಗುತ್ತಾ?
Follow us
ಸಾಧು ಶ್ರೀನಾಥ್​
|

Updated on: Sep 20, 2019 | 4:53 PM

ಬಳ್ಳಾರಿ ಜಿಲ್ಲೆಯನ್ನ ವಿಭಜಿಸಿ ವಿಜಯನಗರವನ್ನೇ ಪ್ರತ್ಯೇಕ ಜಿಲ್ಲೆಯಾಗಿಸುವ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿಜಯನಗರವನ್ನು ಜಿಲ್ಲೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ  ಸೆ. 19ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ಪತ್ರ ಬರೆದಿದ್ದಾರೆ.

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಹೊಸಪೇಟೆಯನ್ನು ಕೇಂದ್ರವನ್ನಾಗಿಸಿಕೊಂಡು ವಿಜಯನಗರವನ್ನು ಜಿಲ್ಲೆ ಮಾಡುವ ವಿಷಯವನ್ನು ಮಂಡಿಸುವಂತೆ ಬಿಎಸ್ ವೈ ತಮ್ಮ ಪತ್ರದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಬುಧವಾರ ಎರಡು ವಿಶೇಷ ವಿಮಾನಗಳಲ್ಲಿ ಉಜ್ಜೈನಿ ಪೀಠದ ಜಗದ್ಗುರು ಶ್ರೀ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿ ನೇತೃತ್ವದಲ್ಲಿ ಚಾನೆಕೋಟೆ ಸ್ವಾಮೀಜಿ, ಕೊಟ್ಟೂರು ಮಠದ ಡಾ.ಸಂಗನಬಸವ ಸ್ವಾಮೀಜಿ, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಮಠಾಧೀಶರ ನಿಯೋಗ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಡಿ ಮಾಡಿ ಬಳ್ಳಾರಿ ಜಿಲ್ಲೆಯನ್ನ ವಿಭಜಿಸಿ ವಿಜಯನಗರವನ್ನು ಕೇಂದ್ರವನ್ನಾಗಿ ಮಾಡುವಂತೆ ಮನವಿ ಪತ್ರ ಸಲ್ಲಿಸಿದ್ದರು. ನಂತರ ಶಾಸಕ ಜೆ. ಗಣೇಶ್, ವಿಧಾನಪರಿಷತ್ ಸದಸ್ಯರಾದ ಅಲ್ಲಂ ವೀರಭದ್ರಪ್ಪ, ಕೆ.ಸಿ.ಕೊಂಡಯ್ಯ, ಅನರ್ಹಗೊಂಡ ಮಾಜಿ ಶಾಸಕ ಆನಂದ್ ಸಿಂಗ್, ಮಾಜಿ ಶಾಸಕ ನೇಮಿ ಚಂದ್ರನಾಯಕ್ ಸೇರಿದಂತೆ ಮತ್ತಿತರರು ಕೂಡ ಸಿಎಂ ಭೇಟಿ ಮಾಡಿ ಇದೇ ಬೇಡಿಕೆಯನ್ನು ಇಟ್ಟಿದ್ದಾರೆ.

‘ಪ್ರಸ್ತುತ, ಬಳ್ಳಾರಿ ಸ್ವಲ್ಪ ದೊಡ್ಡದೇ ಜಿಲ್ಲೆಯಾಗಿದೆ’: ಪ್ರಸ್ತುತ ಬಳ್ಳಾರಿ ಜಿಲ್ಲೆ ತುಂಬಾ ವಿಸ್ತಾರವಾಗಿದ್ದು,  11 ಕಂದಾಯ ತಾಲೂಕುಗಳು ಹಾಗೂ 3 ಕಂದಾಯ ಉಪವಿಭಾಗಗಳನ್ನು ಒಳಗೊಂಡಿರುವ ಅತಿ ದೊಡ್ಡ ಜಿಲ್ಲೆಯಾಗಿದೆ.  ಕೆಲವೊಂದು ಪ್ರದೇಶಗಳು ಜಿಲ್ಲಾ ಕೇಂದ್ರದಿಂದ 200 ಕಿ.ಮೀ ಅಂತರದಲ್ಲಿವೆ. ಇದರಿಂದ ಈ ಭಾಗದ ರೈತರಿಗೆ, ಬಡವರಿಗೆ, ಕೂಲಿ ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರಿಗೆ ತಮ್ಮ ಕೆಲಸ ಕಾರ್ಯಗಳಿಗೆ ಜಿಲ್ಲಾ ಕೇಂದ್ರ ತಲುಪುವುದು ತುಂಬಾ ಕಷ್ಟವಾಗಿದೆ.

ಹೀಗಾಗಿ ಆಡಳಿತದ ಹಿತದೃಷ್ಟಿಯಿಂದ ಪ್ರಸ್ತುತ ಬಳ್ಳಾರಿ ಜಿಲ್ಲೆ 11 ತಾಲೂಕುಗಳಲ್ಲಿ 5 ತಾಲೂಕುಗಳು ಅಂದರೆ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು ಮತ್ತು ಕೂಡ್ಲಿಗಿ ಉಳಿಸಿಕೊಂಡು, ಉಳಿದ 6 ತಾಲೂಕುಗಳು ಅಂದ್ರೆ ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟರು, ಹಡಗಲಿ ಮತ್ತು ಹರಪನಹಳ್ಳಿ ಸೇರಿಸಿ ಹೊಸಪೇಟೆ ಪಟ್ಟಣವನ್ನು ಕೇಂದ್ರವನ್ನಾಗಿಸಿಕೊಂಡು ನೂತನ ವಿಜಯನಗರ ಜಿಲ್ಲೆಯನ್ನು ಆಸ್ಥಿತ್ವಕ್ಕೆ ತರಲು ತಯಾರಿ ನಡೆಯುತ್ತಿದೆ.

ಸಂಭವನೀಯ ಜಿಲ್ಲಾ ಚಿತ್ರಣ ಬಳ್ಳಾರಿ ಜಿಲ್ಲೆ: 5 ತಾಲೂಕುಗಳು ಅಂದರೆ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಸಂಡೂರು ಮತ್ತು ಕೂಡ್ಲಿಗಿ.

ವಿಜಯನಗರ ಜಿಲ್ಲೆ: 6 ತಾಲೂಕುಗಳು ಹೊಸಪೇಟೆ, ಕಂಪ್ಲಿ, ಹಗರಿಬೊಮ್ಮನಹಳ್ಳಿ, ಕೊಟ್ಟರು, ಹಡಗಲಿ ಮತ್ತು ಹರಪನಹಳ್ಳಿ.

ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ