ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ; ಟ್ವಿಟರ್ನಲ್ಲಿ ಶುಭಾಶಯ ಕೋರಿದ ಸಿಎಂ ಯಡಿಯೂರಪ್ಪ
ಅತ್ಯಂತ ಯೋಜನಾಬದ್ಧವಾಗಿ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರ ಸಂಸ್ಮರಣೆಗಳ ಜೊತೆಗೆ ಆ ಧೀಮಂತ ಆಡಳಿತಗಾರನಿಗೆ ಅನಂತ ಪ್ರಣಾಮ ಸಲ್ಲಿಸೋಣ ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವಿಟರ್ನಲ್ಲಿ ಶುಭಾಶಯ ಕೋರಿದ್ದಾರೆ.
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಹಿನ್ನೆಲೆ, ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ. ವ್ಯಾಪಾರ ವಹಿವಾಟಿಗೆ ಅನೇಕ ಪೇಟೆಗಳನ್ನು ಕಟ್ಟಿ. ಅತ್ಯಂತ ಯೋಜನಾಬದ್ಧವಾಗಿ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರ ಸಂಸ್ಮರಣೆಗಳ ಜೊತೆಗೆ ಆ ಧೀಮಂತ ಆಡಳಿತಗಾರನಿಗೆ ಅನಂತ ಪ್ರಣಾಮ ಸಲ್ಲಿಸೋಣ ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವಿಟರ್ನಲ್ಲಿ ಶುಭಾಶಯ ಕೋರಿದ್ದಾರೆ.
ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಕೆಂಪೇಗೌಡರ 512ನೇ ಜಯಂತಿ ಹಿನ್ನೆಲೆ ಕೆಂಪೇಗೌಡರ ಸಮಾಧಿಗೆ ಪೂಜೆ ಸಲ್ಲಿಸಿದರು. ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕೆಂಪಾಪುರ ಗ್ರಾಮದಲ್ಲಿರುವ ಸಮಾಧಿಗೆ ಪೂಜೆ ಸಲ್ಲಿಸಿದರು. ಸಮಾಧಿಗೆ ಪೂಜೆ ಸಲ್ಲಿಸಿ, ಆತ್ಮಜ್ಯೋತಿ ರಥಯಾತ್ರೆಗೆ ಚಾಲನೆ ನೀಡಿದರು. ಡಿಸಿಎಂಗೆ ಶಾಸಕ ಎ.ಮಂಜುನಾಥ್ ಸಾಥ್ ನೀಡಿದರು. ಈ ಆತ್ಮಜ್ಯೋತಿ ರಥಯಾತ್ರೆ ಬೆಂಗಳೂರಿನ ವಿಧಾನಸೌಧದ ಬಾಂಕ್ವೆಟ್ ಹಾಲ್ಗೆ ತೆರಳಲಿದೆ.
ಎಲ್ಲರಿಗೂ ನಾಡಪ್ರಭು ಕೆಂಪೇಗೌಡರ 512ನೇ ಜಯಂತಿಯ ಹಾರ್ದಿಕ ಶುಭಾಶಯಗಳು. ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ, ವ್ಯಾಪಾರ ವಹಿವಾಟಿಗೆ ಅನೇಕ ಪೇಟೆಗಳನ್ನು ಕಟ್ಟಿ, ಅತ್ಯಂತ ಯೋಜನಾಬದ್ಧವಾಗಿ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರ ಸಂಸ್ಮರಣೆಗಳ ಜೊತೆಗೆ, ಆ ಧೀಮಂತ ಆಡಳಿತಗಾರನಿಗೆ ಶ್ರದ್ಧಾಪೂರ್ವಕ ಪ್ರಣಾಮಗಳನ್ನು ಸಲ್ಲಿಸೋಣ. pic.twitter.com/CQR8BgeV32
— B.S. Yediyurappa (@BSYBJP) June 27, 2021
ಜಯಂತಿ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ನಲ್ಲಿ ಕಾರ್ಯಕ್ರಮ ನಡೆಯಲಿದೆ. ಪೋಸ್ಟಲ್ ಸ್ಟ್ಯಾಂಪ್ ಬಿಡುಗಡೆ ಮತ್ತು ಕೆಂಪೇಗೌಡ ಅಧ್ಯಯನ ಕೇಂದ್ರದ ಕಟ್ಟಡ ಕಾಮಗಾರಿಗೆ ಸಿಎಂ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ
Sankashti Chaturthi 2021: ಇಂದು ಸಂಕಷ್ಟ ಚತುರ್ಥಿ; ಈ ದಿನದ ವಿಶೇಷತೆ ಜತೆಗೆ ಪೂಜಾ ವಿಧಿ-ವಿಧಾನ ತಿಳಿಯಿರಿ
(BS Yediyurappa greeted Kempe Gowda 512th Jayanthi in twitter)
Published On - 10:36 am, Sun, 27 June 21