ಸಾಧ್ಯವಾದಷ್ಟು ಮನೆಯಲ್ಲೇ ಇರಿ, ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ: ಟ್ವಿಟರ್​ನಲ್ಲಿ ಸಿಎಂ ಯಡಿಯೂರಪ್ಪ ಮನವಿ

ಪ್ರತಿಯೊಬ್ಬರು ಮಾಸ್ಕ್ ಧರಿಸಿ, ದೈಹಿಕ ಅಂತರವನ್ನು ಕಾಯ್ದುಕೊಳ್ಳಿ. ನಿಮ್ಮ ಸರದಿ ಬಂದಾಗ ಕೊವಿಡ್ ಲಸಿಕೆ ಪಡೆದುಕೊಳ್ಳಿ. ಮುನ್ನೆಚ್ಚರಿಕಾ ಕ್ರಮ ಪಾಲಿಸಿ, ಸರ್ಕಾರದೊಂದಿಗೆ ಸಹಕರಿಸಿ. ನಾವೆಲ್ಲರೂ ಒಗ್ಗಟ್ಟಿನಿಂದ ಕೊರೊನಾ ಹಿಮ್ಮೆಟ್ಟಿಸೋಣ ಎಂದು ಟ್ವೀಟ್ ಮೂಲಕ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.

ಸಾಧ್ಯವಾದಷ್ಟು ಮನೆಯಲ್ಲೇ ಇರಿ, ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ: ಟ್ವಿಟರ್​ನಲ್ಲಿ ಸಿಎಂ ಯಡಿಯೂರಪ್ಪ ಮನವಿ
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ
Follow us
TV9 Web
| Updated By: sandhya thejappa

Updated on: Jun 21, 2021 | 10:26 AM

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಕಾರಣ ಸರ್ಕಾರ ರಾಜ್ಯದ ಹಲವು ಕಡೆ ಲಾಕ್​ಡೌನ್​ ತೆರವುಗೊಳಿಸಿದೆ. ಆದರೆ ಸಂಪೂರ್ಣವಾಗಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಕೆಲವು ನಿಯಮಗಳನ್ನ ಪ್ರತಿಯೊಬ್ಬರು ಪಾಲಿಸಬೇಕಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೊರೊನಾ ಸೋಂಕಿನ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ. ಸಾಧ್ಯವಾದಷ್ಟು ಮನೆಯಲ್ಲಿಯಲ್ಲಿರಿ. ಅಗತ್ಯವಿದ್ದರೆ ಮಾತ್ರ ಹೊರಗಡೆ ಬನ್ನಿ ಎಂದು ಮನವಿ ಮಾಡಿದ್ದಾರೆ.

ಪ್ರತಿಯೊಬ್ಬರು ಮಾಸ್ಕ್ ಧರಿಸಿ, ದೈಹಿಕ ಅಂತರವನ್ನು ಕಾಯ್ದುಕೊಳ್ಳಿ. ನಿಮ್ಮ ಸರದಿ ಬಂದಾಗ ಕೊವಿಡ್ ಲಸಿಕೆ ಪಡೆದುಕೊಳ್ಳಿ. ಮುನ್ನೆಚ್ಚರಿಕಾ ಕ್ರಮ ಪಾಲಿಸಿ, ಸರ್ಕಾರದೊಂದಿಗೆ ಸಹಕರಿಸಿ. ನಾವೆಲ್ಲರೂ ಒಗ್ಗಟ್ಟಿನಿಂದ ಕೊರೊನಾ ಹಿಮ್ಮೆಟ್ಟಿಸೋಣ ಎಂದು ಟ್ವೀಟ್ ಮೂಲಕ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.

ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು, ಜಿಲ್ಲಾವಾರು ಪರಿಸ್ಥಿತಿಗಳನ್ನು ಪರಿಗಣಿಸಿ, ಅದಕ್ಕನುಗುಣವಾಗಿ ಸಡಿಲಿಸಲಾಗುತ್ತಿದೆ. ಸಾಮಾನ್ಯ ಜನಜೀವನಕ್ಕೆ ಅನುಕೂಲ ಕಲ್ಪಿಸಲು ಈ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದ್ದು, ಸೋಂಕಿನ ಅಪಾಯದ ಕುರಿತು ನಿರ್ಲಕ್ಷ್ಯ ಖಂಡಿತ ಬೇಡ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯರವರ ನೇತೃತ್ವದ ಕೇಂದ್ರ ಸರ್ಕಾರ, 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಇಂದಿನಿಂದ (ಜೂನ್ 21) ಉಚಿತವಾಗಿ ಕೊವಿಡ್ ಲಸಿಕೆ ನೀಡುವ ಐತಿಹಾಸಿಕ ನಿರ್ಣಯ ಕೈಗೊಂಡಿದೆ. ಕೊವಿಡ್ ಲಸಿಕೆ ಸಂಪೂರ್ಣ ಸುರಕ್ಷಿತವಾಗಿದೆ. ವದಂತಿಗಳನ್ನು ನಂಬದೆ, ಎಲ್ಲರೂ ಲಸಿಕೆ ಪಡೆಯಿರಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ

World Yoga Day 2021: ಯೋಗ ಎಲ್ಲರ ಜೀವನದ ಅವಿಭಾಜ್ಯ ಅಂಗವಾಗಲಿ.. ಟ್ವೀಟ್ ಮೂಲಕ ಶುಭಾಶಯ ತಿಳಿಸಿದ ಸಿಎಂ ಯಡಿಯೂರಪ್ಪ

International Yoga Day 2021: ಕೊರೊನಾ ವಿರುದ್ಧದ ಹೋರಾಟಕ್ಕೆ ಯೋಗದಿಂದ ಬಲ ಸಿಕ್ಕಿದೆ: ಪ್ರಧಾನಿ ನರೇಂದ್ರ ಮೋದಿ

(BS Yediyurappa has requested on Twitter that wear mask and maintain social distance)

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ