Vijayapura Airport: ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಸಿಎಂ ಯಡಿಯೂರಪ್ಪ ವರ್ಚುವಲ್ ಚಾಲನೆ
vijayapura Airport: ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಿವಮೊಗ್ಗದಿಂದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದ್ದಾರೆ.ಎರಡು ಹಂತದಲ್ಲಿ ಕಾಮಾಗಾರಿ ನಡೆಯುತ್ತದೆ.
ವಿಜಯಪುರ: ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿವಮೊಗ್ಗದಿಂದ ವರ್ಚುವಲ್ ಕಾರ್ಯಕ್ರಮದ ಮೂಲಕ ಚಾಲನೆ ನೀಡಿದ್ದಾರೆ. ತಾಲೂಕಿನ ಬುರಣಾಪುರ ಮದಭಾವಿ ಗ್ರಾಮಗಳ ಬಳಿ 727 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಳ್ಳುತ್ತಿದೆ. 220 ಕೋಟಿ ರೂ. ವೆಚ್ಚದಲ್ಲಿ ಎರಡು ಹಂತದಲ್ಲಿ ಕಾಮಾಗಾರಿ ನಡೆಯುತ್ತದೆ. ಮೊದಲ ಹಂತದಲ್ಲಿ 95 ಕೋಟಿ ರೂ. ವೆಚ್ಚದಲ್ಲಿ ಇಂದಿನಿಂದ (ಫೆಬ್ರವರಿ 15) ಕಾಮಗಾರಿ ಆರಂಭವಾಗುತ್ತದೆ.
2010ರಂದು ಬಿ.ಎಸ್. ಯಡಿಯೂರಪ್ಪ ವಿಮಾನ ನಿಲ್ದಾಣಕ್ಕೆ ಶಿಲಾನ್ಯಾಸ ಮಾಡಿದ್ದರು. ಸದ್ಯ ಹನ್ನೊಂದು ವರ್ಷಗಳ ನಂತರ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗುತ್ತಿದ್ದು, ಉದ್ಘಾಟನೆ ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ ಕಾರಜೋಳ, ಸಂಸದ ರಮೇಶ್ ಜಿಗಜಿಣಗಿ ಸೇರಿದಂತೆ ಜಿಲ್ಲೆಯ ಶಾಸಕರು, ಮಾಜಿ ಸಚಿವರು ಭಾಗಿಯಾಗಿದ್ದರು.
ಪ್ರವಾಸೋದ್ಯಮ ಮತ್ತು ವ್ಯಾಪಾರದ ದೃಷ್ಟಿಯಿಂದ ವಿಜಯಪುರದಲ್ಲಿ ಏರ್ ಪೋರ್ಟ್ ನಿರ್ಮಾಣವಾಗುತ್ತಿದೆ ಎಂದು ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 727 ಎಕರೆ ಪ್ರದೇಶದಲ್ಲಿ 220 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
Published On - 2:27 pm, Mon, 15 February 21