AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದಿ ಬದಿ ವ್ಯಾಪಾರಿಗಳ ಖಾತೆಗೆ ಹಣ ವರ್ಗಾವಣೆ; ಡಿಬಿಟಿ ಮೂಲಕ ಜಮೆಗೆ ಸಿಎಂ ಯಡಿಯೂರಪ್ಪ ಚಾಲನೆ

ನಗರ ಸ್ಥಳೀಯ ಸಂಸ್ಥೆಗಳಿಂದ ಸಮೀಕ್ಷೆಯ ಮೂಲಕ 2,16,439 ಬೀದಿ ಬದಿ ವ್ಯಾಪಾರಸ್ಥರನ್ನು ಗುರುತಿಸಲಾಗಿದೆ. ಇವರುಗಳಿಗೆ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪತ್ರವನ್ನು ವಿತರಿಸಿ, ಬೀದಿ ವ್ಯಾಪಾರ ಕೈಗೊಳ್ಳವ ಸ್ಥಳದಲ್ಲಿ ಮೂಲಭೂತ ಸೌಕರ್ಯವನ್ನು ಕಲ್ಪಿಸಲಾಗಿದೆ.

ಬೀದಿ ಬದಿ ವ್ಯಾಪಾರಿಗಳ ಖಾತೆಗೆ ಹಣ ವರ್ಗಾವಣೆ; ಡಿಬಿಟಿ ಮೂಲಕ ಜಮೆಗೆ ಸಿಎಂ ಯಡಿಯೂರಪ್ಪ ಚಾಲನೆ
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
Follow us
TV9 Web
| Updated By: sandhya thejappa

Updated on: Jun 08, 2021 | 2:42 PM

ಬೆಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ನೋಂದಾಯಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಕೊರೊನಾ 2ನೇ ಅಲೆಯ ಪರಿಹಾರ ಪ್ಯಾಕೇಜ್ನ ಘೋಷಿಸಿದ ತಲಾ ಎರಡು ಸಾವಿರ ರೂ. ಸಹಾಯಧನದ ವರ್ಗಾವಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು ಇಂದು (ಜೂನ್ 8) ಚಾಲನೆ ನೀಡಿದರು. ಇದು ಕೊರೊನಾದಿಂದ ಸಂಕಷ್ಟಕ್ಕೊಳಗಾದವರಿಗೆ ಮಾನವೀಯ ನೆಲೆಯಲ್ಲಿ ಸ್ಪಂದಿಸುವ ನಮ್ಮ ಸರ್ಕಾರದ ಒಂದು ಪ್ರಯತ್ನವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ನಗರ ಸ್ಥಳೀಯ ಸಂಸ್ಥೆಗಳಿಂದ ಸಮೀಕ್ಷೆಯ ಮೂಲಕ 2,16,439 ಬೀದಿ ಬದಿ ವ್ಯಾಪಾರಸ್ಥರನ್ನು ಗುರುತಿಸಲಾಗಿದೆ. ಇವರುಗಳಿಗೆ ಗುರುತಿನ ಚೀಟಿ ಮತ್ತು ಮಾರಾಟ ಪ್ರಮಾಣ ಪತ್ರವನ್ನು ವಿತರಿಸಿ, ಬೀದಿ ವ್ಯಾಪಾರ ಕೈಗೊಳ್ಳವ ಸ್ಥಳದಲ್ಲಿ ಮೂಲಭೂತ ಸೌಕರ್ಯವನ್ನು ಕಲ್ಪಿಸಲಾಗಿದೆ. ಅಂತೆಯೇ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಕೊರೊನಾ ಮೊದಲನೇ ಅಲೆಯ ಸಂದರ್ಭದಲ್ಲಿ ಜೀವನೋಪಾಯ ನಿರ್ವಹಣೆಗೆ ಸಂಕಷ್ಟಕ್ಕೊಳಗಾದ ಬೀದಿ ಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿ ವ್ಯಾಪಾರಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ 10,000 ರೂ. ಗಳ ವರೆಗೆ ಬ್ಯಾಂಕ್ ಮೂಲಕ ಕಿರುಸಾಲ ಸೌಲಭ್ಯವನ್ನು ಒದಗಿಸಲಾಗಿದೆ. ಈವರೆಗೂ ಯೋಜನೆಯಡಿ. 107.92 ರೂ. ಕೋಟಿಗಳಷ್ಟು ಸಾಲವನ್ನು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದಲ್ಲಿ ಕೊರೊನಾ 2ನೇ ಅಲೆಯ ಸಂದರ್ಭದಲ್ಲಿ ವಿಧಿಸಲಾದ ನಿರ್ಬಂಧಗಳಿಂದ ಸಂಕಷ್ಟಕ್ಕೊಳಗಾದ ಬೀದಿಬದಿ ವ್ಯಾಪಾರಿಗಳಿಗೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ನಡಿ ತಲಾ 2,000 ರೂ. ಆರ್ಥಿಕ ನೆರವನ್ನು ಘೋಷಿಸಲಾಗಿತ್ತು. ಅದರಂತೆ 2,16,439 ಫಲಾನುಭವಿಗಳ ಪೈಕಿ ಆಧಾರ್ ಜೋಡಣೆಯಾಗಿರುವ 1,91,684 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಹಾಯಧನವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ವಿಧಾನದ ಮೂಲಕ ತಲಾ 2,000 ರೂ.ನಂತೆ ಒಟ್ಟು 38.33 ರೂ. ಕೋಟಿಗಳನ್ನು ವರ್ಗಾಯಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ನುಡಿದರು.

ಬ್ಯಾಂಕ್ ಖಾತೆಗೆ ಆಧಾರ ಜೋಡಣೆ ಆಗದೇ ಇರುವ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯನ್ನು ಮಾಡಿ, ಸಹಾಯಧನವನ್ನು ತ್ವರಿತವಾಗಿ ಬಿಡುಗಡೆ ಮಾಡಲು ಕ್ರಮವಹಿಸಲಾಗುವುದು. ಈ ಸಹಾಯಧನ ಪಡೆದುಕೊಳ್ಳಲು ನೋಂದಾಯಿತ ಬೀದಿ ಬದಿ ವ್ಯಾಪಾರಿಗಳು ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಈ ಪ್ಯಾಕೇಜ್​ನಡಿ ಬಿಡುಗಡೆ ಮಾಡಿರುವ ಸಹಾಯಧನವನ್ನು ಬೀದಿ ಬದಿ ವ್ಯಾಪಾರಿಗಳ ಯಾವುದೇ ಸಾಲಕ್ಕೆ ಸರಿದೂಗಿಸಬಾರದೆಂದು ಈಗಾಗಲೇ ಸಂಬಂಧಿಸಿದ ಬ್ಯಾಂಕಿನವರಿಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಇದನ್ನೂ ಓದಿ

‘ಕೊವಿಶೀಲ್ಡ್ ಎರಡೂ ಡೋಸ್​ ಲಸಿಕೆ ಪಡೆದ ವರ ಬೇಕು..’: ಮ್ಯಾಟ್ರಿಮೋನಿಯಲ್ಲಿ ಯುವತಿಯ ಜಾಹೀರಾತು..

ಮುಖ್ಯಮಂತ್ರಿ ಯಡಿಯೂರಪ್ಪ ಮಾಡುತ್ತಿರುವುದು ನಾಟಕ: ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ

(BS Yediyurappa initiated the transfer of money to the street vendors account)

ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್