ಯಡಿಯೂರಪ್ಪನವರನ್ನು ಮೂಲೆಗುಂಪು ಮಾಡಿಲ್ಲ; ಬಿಜೆಪಿ ಕೋರ್ ಸಮಿತಿ ಸಭೆಗೂ ಮುನ್ನ ಸದಾನಂದ ಗೌಡ ಸ್ಪಷ್ಟನೆ
ಖಂಡಿತವಾಗಿ ಯಡಿಯೂರಪ್ಪರನ್ನು ಸೈಡ್ಲೈನ್ ಮಾಡಿಲ್ಲ. ಶಾಸಕಾಂಗ ಪಕ್ಷದ ನಾಯಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಹಾಗಾಗಿ ಅವರ ಹೆಸರು ಮುಂಚೂಣಿಯಲ್ಲಿರುತ್ತದೆ ಅಷ್ಟೇ ಎಂದು ದಾವಣಗೆರೆಯಲ್ಲಿ ಕೇಂದ್ರದ ಮಾಜಿ ಸಚಿವ ಡಿವಿ ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.
ದಾವಣಗೆರೆ: ದಾವಣಗೆರೆ ಖಾಸಗಿ ರೆಸಾರ್ಟ್ನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುತ್ತಿದೆ. ಎಲ್ಲ ಚುನಾವಣೆಗಳನ್ನೂ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ನಮ್ಮ ಕಾರ್ಯಾಚರಣೆಗಳ ಬಗ್ಗೆ ನಾವು ಇಂದು ಚರ್ಚಿಸ್ತೇವೆ. ಸಾಮೂಹಿಕ ನಾಯಕತ್ವದಡಿಯಲ್ಲಿ ಕೆಲಸ ನಡೆಯುತ್ತವೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಯಡಿಯೂರಪ್ಪನವರನ್ನು ಸೈಡ್ಲೈನ್ ಮಾಡಲಾಗಿದೆ ಎಂಬ ಮಾತನ್ನು ನಾನು ಒಪ್ಪುವುದಿಲ್ಲ. ಖಂಡಿತವಾಗಿ ಯಡಿಯೂರಪ್ಪರನ್ನು ಸೈಡ್ಲೈನ್ ಮಾಡಿಲ್ಲ. ಶಾಸಕಾಂಗ ಪಕ್ಷದ ನಾಯಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. ಹಾಗಾಗಿ ಅವರ ಹೆಸರು ಮುಂಚೂಣಿಯಲ್ಲಿರುತ್ತದೆ ಅಷ್ಟೇ ಎಂದು ದಾವಣಗೆರೆಯಲ್ಲಿ ಕೇಂದ್ರದ ಮಾಜಿ ಸಚಿವ ಡಿವಿ ಸದಾನಂದ ಗೌಡ ಸ್ಪಷ್ಟನೆ ನೀಡಿದ್ದಾರೆ.
ಇಂದು ಮತ್ತು ನಾಳೆ ದಾವಣಗೆರೆಯ ಖಾಸಗಿ ರೆಸಾರ್ಟ್ನಲ್ಲಿ ನಡೆಯಲಿರುವ ಬಿಜೆಪಿ ಕೋರ್ ಸಮಿತಿ ಸಭೆಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಮಾಜಿ ಕೇಂದ್ರ ಸಚಿವ ಸದಾನಂದ ಗೌಡ, ಸಚಿವ ಕೆ.ಎಸ್ ಈಶ್ವರಪ್ಪ, ಅಶ್ವತ್ಥ್ ನಾರಾಯಣ, ಆರ್. ಅಶೋಕ್, ಶ್ರೀರಾಮುಲು, ಗೋವಿಂದ ಕಾರಜೋಳ ಸೇರಿದಂತೆ ಹಲವರು ಆಗಮಿಸಿದ್ದಾರೆ.
ದಾವಣಗೆರೆಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದ್ದು, ಸಭೆಯಲ್ಲಿ ಮುಂದಿನ ಚುನಾವಣೆಗೆ ರೂಪರೇಷೆ ಸಿದ್ಧಪಡಿಸುತ್ತೇವೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಮಾಡುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. 2023ರ ಚುನಾವಣೆಯಲ್ಲಿ ಬಹುಮತ ಪಡೆಯಲು ಸಿದ್ಧತೆ ನಡೆಸಲಾಗಿದೆ. ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಾರಣಾಸಿಯಲ್ಲಿ ಬಿಜೆಪಿ ಎಸ್.ಸಿ ಮೋರ್ಛಾ ರಾಜ್ಯಾಧ್ಯಕ್ಷರುಗಳ ಸಭೆ ನಡೆಯುತ್ತಿರುವ ಕಾರಣ ಕೋರ್ ಸಮಿತಿ ಸಭೆಗೆ ಸಿ.ಟಿ. ರವಿ ಗೈರು ಹಾಜರಾಗಿದ್ದಾರೆ.
ನಾನು ಈಗಾಗಲೇ ರಾಜ್ಯ ಪ್ರವಾಸ ಆರಂಭಿಸಿದ್ದೇನೆ. ಮೈಸೂರು ಸೇರಿದಂತೆ ಬಹುತೇಕ ಕಡೆ ಹೋಗಿ ಬಂದಿದ್ದೇನೆ ಎಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆಲ್ಲುವ ಉದ್ದೇಶ ಹೊಂದಿದ್ದೇವೆ. ಇಂದು, ನಾಳೆ ದಾವಣಗೆರೆಯಲ್ಲೇ ಇರುತ್ತೇನೆ. ಕೋರ್ ಕಮಿಟಿ ಸಭೆಯಲ್ಲಿ ಕೆಲ ಮಹತ್ವದ ಸಲಹೆ ನೀಡುವೆ. ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಮುಂದಿನ ದಿನಗಳಲ್ಲಿ ರೂಪಿಸಬೇಕಾದ ಯೋಜನೆ ಬಗ್ಗೆ ಸೂಚನೆ ನೀಡುತ್ತೇನೆ ಎಂದು ಸಿಎಂ ಯಡಿಯೂರಪ್ಪ ಇಂದು ಬೆಳಗ್ಗೆ ಹೇಳಿದ್ದರು.
ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಆರಂಭಿಸಲು ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಬಿಜೆಪಿಯ ಹಿರಿಯ ನಾಯಕರು. ಅವರು ಪ್ರವಾಸ ಮಾಡಬಹುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಪಕ್ಷದ ಕಾರ್ಯಕಾರಿಯಲ್ಲಿ ಗ್ರೀನ್ ಸಿಗ್ನಲ್ ನೀಡಿದ್ದರು. ನಾಳೆ ಕೂಡ ದಾವಣಗೆರೆಯಲ್ಲಿ ಬಿಜೆಪಿ ಕೋರ್ ಸಮಿತಿ ಸಭೆ ನಡೆಯಲಿದೆ.
ಇದನ್ನೂ ಓದಿ: ಈಗಾಗಲೇ ರಾಜ್ಯ ಪ್ರವಾಸ ಆರಂಭಿಸಿದ್ದೇನೆ: ಮಾಜಿ ಸಿಎಂ ಯಡಿಯೂರಪ್ಪ
(BS Yediyurappa is not Sidelined in BJP says DV Sadananda Gowda before Davanagere Core Committee Meeting)