ಮೇ 4ರ ನಂತರ ರಾಜ್ಯದಲ್ಲಿ ಕೈಗಾರಿಕೆ ಚಟುವಟಿಕೆ ಆರಂಭವಾಗುತ್ತಾ? ಸಿಎಂ ಏನು ಹೇಳಿದ್ರು

ಬೆಂಗಳೂರು: ಮೇ 4ರ ನಂತರ ಲಾಕ್‌ಡೌನ್ ಸಡಿಲಿಕೆ ಮಾಡುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡುವ ಬಗ್ಗೆ ನಿರ್ಧರಿಸಿದ್ದೇವೆ ಎಂದು ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೊನಾ ವೈರಸ್ ಪತ್ತೆಯಾದ ಕಂಟೇನ್‌ಮೆಂಟ್ ಪ್ರದೇಶಗಳಲ್ಲಿ ಮಾತ್ರ ಅವಕಾಶವಿರುವುದಿಲ್ಲ. ರಾಜ್ಯದ ಜನರು ಸರ್ಕಾರದ ನಿರ್ದೇಶನ ಪಾಲಿಸಿದ್ದಾರೆ. ಬೆಂಗಳೂರಿನಲ್ಲೂ ಕೊರೊನಾ ಪ್ರಕರಣ ಪತ್ತೆಯಾಗದಿದ್ದರೆ ಮೇ 4ರ ನಂತರ ಬೆಂಗಳೂರಿನ ಸುತ್ತಮುತ್ತ ಪ್ರದೇಶದ ಕೈಗಾರಿಕೆಗಳು ಓಪನ್ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು. ಕೊರೊನಾ […]

ಮೇ 4ರ ನಂತರ ರಾಜ್ಯದಲ್ಲಿ ಕೈಗಾರಿಕೆ ಚಟುವಟಿಕೆ ಆರಂಭವಾಗುತ್ತಾ? ಸಿಎಂ ಏನು ಹೇಳಿದ್ರು
ಸಿಎಂ ಬಿ.ಎಸ್.ಯಡಿಯೂರಪ್ಪ (ಸಂಗ್ರಹ ಚಿತ್ರ)

Updated on: Apr 30, 2020 | 1:33 PM

ಬೆಂಗಳೂರು: ಮೇ 4ರ ನಂತರ ಲಾಕ್‌ಡೌನ್ ಸಡಿಲಿಕೆ ಮಾಡುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡುವ ಬಗ್ಗೆ ನಿರ್ಧರಿಸಿದ್ದೇವೆ ಎಂದು ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಕೊರೊನಾ ವೈರಸ್ ಪತ್ತೆಯಾದ ಕಂಟೇನ್‌ಮೆಂಟ್ ಪ್ರದೇಶಗಳಲ್ಲಿ ಮಾತ್ರ ಅವಕಾಶವಿರುವುದಿಲ್ಲ. ರಾಜ್ಯದ ಜನರು ಸರ್ಕಾರದ ನಿರ್ದೇಶನ ಪಾಲಿಸಿದ್ದಾರೆ. ಬೆಂಗಳೂರಿನಲ್ಲೂ ಕೊರೊನಾ ಪ್ರಕರಣ ಪತ್ತೆಯಾಗದಿದ್ದರೆ ಮೇ 4ರ ನಂತರ ಬೆಂಗಳೂರಿನ ಸುತ್ತಮುತ್ತ ಪ್ರದೇಶದ ಕೈಗಾರಿಕೆಗಳು ಓಪನ್ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಕೊರೊನಾ 2-3 ತಿಂಗಳು ಮುಂದುವರಿದ್ರೂ ಅಚ್ಚರಿಯಿಲ್ಲ. ಆದರೆ ಆರ್ಥಿಕ ಚಟುವಟಿಕೆ ಆರಂಭಿಸಬೇಕಾಗಿದೆ. ಈ ಬಗ್ಗೆ ಪ್ರಧಾನಿ ಮೋದಿ ಸಹ ಚಿಂತನೆ ಮಾಡಿದ್ದಾರೆ. ಕೈಗಾರಿಕೆಗಳನ್ನು ಓಪನ್ ಮಾಡುವ ಸಂಬಂಧ ಇಂದು ಸಂಜೆ ಕೈಗಾರಿಕೋದ್ಯಮಿಗಳ ಜತೆ ಸಭೆ ಮಾಡುತ್ತೇವೆ. ಆದ್ರೆ ಹೋಟೆಲ್, ಮಾಲ್ ತೆರೆಯುವ ಯಾವುದೇ ಆಲೋಚನೆ ಇಲ್ಲ. ಮೇ4ರ ನಂತರ ಕೇಂದ್ರದ ಮಾರ್ಗಸೂಚಿ ಬಿಡುಗಡೆ ಆಗಲಿದೆ. ಆ ನಂತರ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.

Published On - 12:55 pm, Thu, 30 April 20