CM Yediyurappa PC: ಕೊರೊನಾದಿಂದ ತಂದೆ ತಾಯಿ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಸಿಎಂ ಬಾಲಸೇವಾ ಯೋಜನೆ ಘೋಷಣೆ

TV9 Web
| Updated By: ganapathi bhat

Updated on:Aug 14, 2021 | 1:09 PM

CM BS Yediyurappa Press Meet LIVE: ಕೊರೊನಾ ಎರಡನೇ ಅಲೆಯಿಂದ ಬಹಳಷ್ಟು ಸಾವು ನೋವು ಸಂಭವಿಸಿದೆ. ಹಲವು ಮಕ್ಕಳು ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ಅಂಥವರಿಗಾಗಿ ಸಿಎಂ ಬಾಲ ಸೇವಾ ಯೋಜನೆಯನ್ನು ಘೋಷಿಸಿದ್ದಾರೆ.

CM Yediyurappa PC: ಕೊರೊನಾದಿಂದ ತಂದೆ ತಾಯಿ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಸಿಎಂ ಬಾಲಸೇವಾ ಯೋಜನೆ ಘೋಷಣೆ
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)

ಬೆಂಗಳೂರು: ಕೊರೊನಾ ಎರಡನೇ ಅಲೆ ಕರ್ನಾಟಕದಲ್ಲಿ ನಿಧಾನಗತಿಯಲ್ಲಿ ಇಳಿಕೆ ಆಗುತ್ತಿದೆ. ಬೆಂಗಳೂರಿನಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ದಾಖಲಾಗುತ್ತಿದೆ. ಆದರೆ, ಇತರ ಗ್ರಾಮೀಣ ಭಾಗದಲ್ಲಿ ಕೊವಿಡ್-19 ಬಗ್ಗೆ ಇನ್ನಷ್ಟು ಜಾಗೃತಿ ಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲವು ಕ್ರಮಗಳನ್ನು ಕೈಗೊಂಡಿದೆ. ಕೊರೊನಾ ಎರಡನೇ ಅಲೆಯಿಂದ ಬಹಳಷ್ಟು ಸಾವು ನೋವು ಸಂಭವಿಸಿದೆ. ಹಲವು ಮಕ್ಕಳು ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ಅಂಥವರಿಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿಎಂ ಬಾಲ ಸೇವಾ ಯೋಜನೆಯನ್ನು ಘೋಷಿಸಿದ್ದಾರೆ.

ಇದೀಗ ಸಂಜೆ 7 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಈ ಮಾಹಿತಿ ನೀಡಿದ್ದಾರೆ. ಕೊರೊನಾ ಲಾಕ್​ಡೌನ್ ಮುಂದುವರಿಕೆ, ನಿಯಮಾವಳಿಗಳಲ್ಲಿ ಬದಲಾವಣೆ, ಸೋಂಕು ತಡೆಗೆ ಹೊಸ ಕ್ರಮ ಅಥವಾ ಮತ್ತೊಂದು ಆರ್ಥಿಕ ಪ್ಯಾಕೇಜ್ ಬಗ್ಗೆ ಮಾಹಿತಿ ಇತ್ಯಾದಿ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿತ್ತು. ಆದರೆ ಆ ಬಗ್ಗೆ ಮಾಹಿತಿ ಬಿಟ್ಟುಕೊಟ್ಟಿಲ್ಲ. ಸುದ್ದಿಗೋಷ್ಠಿಯ ಸಂಪೂರ್ಣ ವಿವರ ಈ ಕೆಳಗೆ ಲಭ್ಯವಿದೆ.

LIVE NEWS & UPDATES

The liveblog has ended.
  • 29 May 2021 07:26 PM (IST)

    ಹತ್ತನೇ ತರಗತಿ ಪೂರೈಸಿದ ಮಕ್ಕಳಿಗೆ ಲ್ಯಾಪ್ ಟ್ಯಾಪ್ ಅಥವಾ ಟ್ಯಾಬ್

    ಹತ್ತನೇ ತರಗತಿ ಪೂರೈಸಿದ ಮಕ್ಕಳಿಗೆ ಲ್ಯಾಪ್​ಟ್ಯಾಪ್ ಅಥವಾ ಟ್ಯಾಬ್ ನೀಡಲಾಗುವುದು. 21 ವರ್ಷ ಪೂರೈಸಿದ ಹೆಣ್ಣುಮಕ್ಕಳಿಗೆ 1 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು. ಅದನ್ನು ಮದುವೆ ವೆಚ್ಚ, ಉನ್ನತ ಶಿಕ್ಷಣ ಅಥವಾ ಸ್ವ ಉದ್ಯೋಗಕ್ಕೆ ಬಳಕೆ ಮಾಡಿಕೊಳ್ಳುವುದು. ಯೋಜನೆಯ ಒಟ್ಟು ವೆಚ್ಚ, ಇತ್ಯಾದಿ ವಿವರಗಳ ಬಗ್ಗೆ ವಿಸ್ತೃತವಾದ ವರದಿಯನ್ನು ಸರ್ಕಾರ ಪ್ರತ್ಯೇಕವಾಗಿ ಹೊರಡಿಸಲಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

  • 29 May 2021 07:15 PM (IST)

    ಪೋಷಕರು ಲಭ್ಯವಿಲ್ಲದಿದ್ದರೆ ಪಾಲನಾ ಕೇಂದ್ರದಲ್ಲಿ ಆರೈಕೆ

    ಕೊರೊನಾದಿಂದ ತಂದೆ ತಾಯಿ ಕಳೆದುಕೊಂಡು ಅನಾಥರಾದ ಮಕ್ಕಳಿಗೆ ಸಿಎಂ ಬಾಲ ಸೇವಾ ಯೋಜನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಪೋಷಕರನ್ನು ಕಳೆದುಕೊಂಡ ಅನಾಥ ಮಕ್ಕಳ ಪೋಷಣೆಗೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಕೊವಿಡ್​ನಿಂದ ಪೋಷಕರಿಬ್ಬರನ್ನು ಕಳೆದುಕೊಂಡ ಮಕ್ಕಳಿಗೆ ಮಾಸಿಕ ಮೂರುವರೆ ಸಾವಿರ ಸಹಾಯಧನ ನೀಡಲಾಗುವುದು. ಪೋಷಕರು ಲಭ್ಯರಿಲ್ಲದಿದ್ದಲ್ಲಿ ನೋಂದಾಯಿತ ಪಾಲನಾ ಕೇಂದ್ರದಲ್ಲಿ ಆರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

  • 29 May 2021 07:10 PM (IST)

    ಅನಾಥ ಮಕ್ಕಳಿಗೆ 3,500 ಪರಿಹಾರ ನೀಡಲಾಗುವುದು

    ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಮೊದಲ ಅಲೆಯಲ್ಲಿ ಹೆಚ್ಚಿನ ತೊಂದರೆಗಳು ಆಗಲಿಲ್ಲ. 2ನೇ ಅಲೆಯಲ್ಲಿ ದೇಶ, ರಾಜ್ಯದಲ್ಲಿ ಸಾಕಷ್ಟು ಜೀವಹಾನಿ ಉಂಟಾಗಿದೆ. ಕೆಲ ಯೋಜನೆ ರೂಪಿಸಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೊರೊನಾದಿಂದ ತಂದೆ, ತಾಯಿ ಕಳೆದುಕೊಂಡ ಮಕ್ಕಳಿಗೆ ಯೋಜನೆ ಘೋಷಿಸಲಾಗಿದೆ. ಅನಾಥ ಮಕ್ಕಳಿಗೆ 3,500 ಪರಿಹಾರ ನೀಡಲಾಗುವುದು, ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ.

  • 29 May 2021 07:02 PM (IST)

    ಕುತೂಹಲ ಕೆರಳಿಸಿದೆ ಸಿಎಂ ಬಿ ಎಸ್ ಯಡಿಯೂರಪ್ಪ ಸುದ್ದಿಗೋಷ್ಠಿ

    ನಿನ್ನೆಯಷ್ಟೇ ಕೇಂದ್ರ ಗೃಹ ಇಲಾಖೆಯಿಂದ ಜೂನ್ 30ರ ವರೆಗೆ ಲಾಕ್​ಡೌನ್, ಕಠಿಣ ನಿಯಮಾವಳಿಗಳನ್ನು ಮುಂದುವರಿಸುವಂತೆ ಸೂಚನೆ ಬಂದಿತ್ತು. ಕೆಲ ದಿನಗಳ ಹಿಂದೆ ಎರಡನೇ ಆರ್ಥಿಕ ಪ್ಯಾಕೇಜ್ ಘೋಷಿಸುವ ಸುಳಿವನ್ನು ಯಡಿಯೂರಪ್ಪ ನೀಡಿದ್ದರು. ಅಥವಾ ಹೊಸ ವಲಯವನ್ನು ಆರ್ಥಿಕ ಪ್ಯಾಕೇಜ್​ಗೆ ಸೇರಿಸುವ ಸಾಧ್ಯತೆ ಇದೆ. ಯಾವ ವಿಚಾರಕ್ಕೆ ಸುದ್ದಿಗೋಷ್ಠಿ ಕರೆಯಲಾಗಿದೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಆದರೆ, ತಕ್ಷಣಕ್ಕೆ ಕರೆದಿರುವ ಸುದ್ದಿಗೋಷ್ಠಿ ಭಾರೀ ಕುತೂಹಲ ಮೂಡಿಸಿದೆ.

  • Published On - May 29,2021 7:26 PM

    Follow us
    ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
    ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
    ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
    ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
    ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
    ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
    ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
    ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
    ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
    ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
    ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
    ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
    ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
    ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
    ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
    ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
    ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
    ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
    ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
    ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್