ನ್ಯಾಯ ಕೊಡಿಸಿ ಎಂದು ಬಂದಿದ್ದ ಅಮ್ಮ ಮಗಳು: ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಯಡಿಯೂರಪ್ಪ ಹೇಳಿದ್ದಿಷ್ಟು

ಲೈಂಗಿಕ ದೌರ್ಜನ್ಯ ಸಂಬಂಧಿಸಿದ ಹಾಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ ಅವರೂ ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಬಗ್ಗೆ ಅವರು ಹೇಳಿದ್ದೇನು? ಅವರ ಪ್ರಕಾರ ನಿಜವಾಗಿಯೂ ನಡೆದಿದ್ದೇನು? ಯಡಿಯೂರಪ್ಪ ಪ್ರತಿಕ್ರಿಯೆಯ ವಿವರ ಇಲ್ಲಿದೆ ನೋಡಿ.

ನ್ಯಾಯ ಕೊಡಿಸಿ ಎಂದು ಬಂದಿದ್ದ ಅಮ್ಮ ಮಗಳು: ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಯಡಿಯೂರಪ್ಪ ಹೇಳಿದ್ದಿಷ್ಟು
ಬಿಎಸ್​ ಯಡಿಯೂರಪ್ಪ
Follow us
| Updated By: ಗಣಪತಿ ಶರ್ಮ

Updated on: Mar 15, 2024 | 11:08 AM

ಬೆಂಗಳೂರು, ಮಾರ್ಚ್​​ 15: ಲೈಂಗಿಕ ದೌರ್ಜನ್ಯ ಆರೋಪದ ವಿಚಾರವಾಗಿ ದಾಖಲಾಗಿರುವ ಎಫ್​ಐಆರ್​ ಬಗ್ಗೆ ಮಾಜಿ ಸಿಎಂ, ಬಿಜೆಪಿ ನಾಯಕ ಬಿಎಸ್​ ಯಡಿಯೂರಪ್ಪ (BS Yediyurappa) ಪ್ರತಿಕ್ರಿಯೆ ನೀಡಿದ್ದು, ನ್ಯಾಯ ಕೊಡಿಸಿ ಎಂದು ಬಂದಿದ್ದ ಅಮ್ಮ, ಮಗಳು ಹಲವು ಸಲ ನನ್ನ ಬಳಿ ಬಂದಿದ್ದರು ಎಂದಿದ್ದಾರೆ. ತಾಯಿ-ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್​ ಬಳಿ ಕಳಿಸಿಕೊಟ್ಟೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಉಪಕಾರ ಮಾಡಿದರೆ ಈಗ ನನ್ನ ಮೇಲೆಯೇ ಹೀಗೆ ಆರೋಪ ಮಾಡಿದ್ದಾರೆ. ಯಾರೋ ಒಬ್ಬ ಹೆಣ್ಣು ಮಗಳು ದೂರು ಕೊಟ್ಟಿದ್ದಾರೆ. ಇರಲಿ ಎದುರಿಸೋಣ. ನಾನು ಈ ಕುರಿತು ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವ ಜಿ ಪರಮೇಶ್ವರ ಕೂಡ ಪ್ರತಿಕ್ರಿಯೆ ನೀಡಿದ್ದು, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದಿದ್ದಾರೆ. ಇದಕ್ಕೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ಗೃಹ ಸಚಿವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದರು. ಬಳಿಕ ಪ್ರತಿಕ್ರಿಯೆ ನೀಡಲು ಅವರು ನಿರಾಕರಿಸಿದ್ದರು.

ಇದನ್ನೂ ಓದಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್

ಏನಿದು ಪ್ರಕರಣ?

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ