BS Yediyurappa: ನಾಯಕತ್ವ ಬದಲಾವಣೆ ಚಟುವಟಿಕೆ ಸಚಿವರಿಂದಲೇ ನಡೆದಿದೆ -ಪರೋಕ್ಷವಾಗಿ ಪುಷ್ಠೀಕರಿಸಿದ ಸಿಎಂ ಯಡಿಯೂರಪ್ಪ

Karnataka Politics: ಈ ಮಧ್ಯೆ, ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಾಡುವುದಾಗಿ ಹಿರಿಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಇನ್ನು ಮತ್ತೊಬ್ಬ ಸಚಿವ ಸಿಪಿ ಯೋಗೀಶ್ವರ್​ ಸಂಪುಟ ಸಭೆಗೆ ಪಾಲ್ಗೊಳ್ಳಲು ಆಗಮಿಸಿದ್ದಾರೆ. ಆದರೆ ಸುದ್ದಿಗಾರರೊಂದಿಗೆ ಮಾತನಾಡಲು ಹಿಂಜರಿದ ಯೋಗೀಶ್ವರ್​ ಅವರು ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ, ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವುದಾಗಿ ಹೇಳಿದ್ದಾರೆ.

BS Yediyurappa: ನಾಯಕತ್ವ ಬದಲಾವಣೆ ಚಟುವಟಿಕೆ ಸಚಿವರಿಂದಲೇ ನಡೆದಿದೆ -ಪರೋಕ್ಷವಾಗಿ ಪುಷ್ಠೀಕರಿಸಿದ ಸಿಎಂ ಯಡಿಯೂರಪ್ಪ
2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ; ಯಾರನ್ನೂ ಸಿಎಂ ಮಾಡಬೇಕೆಂದು ಸಲಹೆ, ಶಿಫಾರಸು ಮಾಡಲ್ಲ -ಯಡಿಯೂರಪ್ಪ
Follow us
| Updated By: Digi Tech Desk

Updated on:May 27, 2021 | 2:00 PM

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಂಪುಟ ಸಭೆ ಇದೀಗತಾನೆ ವಿಧಾನಸೌಧದಲ್ಲಿ ಆರಂಭವಾಗಿದೆ. ಅದಕ್ಕೂ ಮುನ್ನ… ಒಂದು ಕಡೆ ಕೊರೊನಾ ಕಾಟ ಮತ್ತೊಂದು ಕಡೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕಾಟ ನಡೆದಿರುವ ಬಗ್ಗೆ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಾದ ಚಟುವಟಿಕೆ ಸಚಿವರಿಂದಲೇ ನಡೆದಿದೆ ಎಂಬುದನ್ನು ಪರೋಕ್ಷವಾಗಿ ಪುಷ್ಠೀಕರಿಸಿದ್ದಾರೆ. ಅದೇ ವೇಳೆ, ರಾಜ್ಯವನ್ನು ಕಾಡುತ್ತಿರುವ ಕೊರೊನಾ ಸಂಕಟದಿಂದ ಜನರನ್ನು ಕಾಪಾಡುವ ಕೆಲಸ ನನ್ನ ಜವಾಬ್ದಾರಿಯಾಗಿದೆ. ಹಾಗಾಗಿ ರಾಜಕೀಯ ಬೆಳವಣಿಗೆಗಳ ಬಗ್ಗೆ ತಲೆಕೆಡಿಸಿಕೊಳ್ಲುವುದಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ನಾಯಕತ್ವ ಬದಲಾವಣೆ ಕುರಿತಾದ ಚಟುವಟಿಕೆ ಸಚಿವರಿಂದಲೇ ನಡೆದಿದೆ ಎಂಬುದು ಗಮನಕ್ಕೆ ಬಂದಿದೆ. ಆದರೆ ಯಾರು, ಎಲ್ಲಿಗೆ ಹೋಗಿದ್ರೋ ಅವರಿಗೆ ನಮ್ಮ ರಾಷ್ಟ್ರೀಯ ನಾಯಕರು ತಕ್ಕ ಉತ್ತರ ಕೊಟ್ಟು ಕಳುಹಿಸಿದ್ದಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ತನ್ಮೂಲಕ, ದೆಹಲಿಗೆ ಹೋಗಿ ಬಂದವರಿಗೆ ವರಿಷ್ಠರ ಮಟ್ಟದಲ್ಲಿ ಯಾವುದೇ ಕೆಲಸ ಆಗಿಲ್ಲ ಎಂಬುದನ್ನೂ ಮಾಹಿತಿ ಪಡೆದುಕೊಂಡಂತಿದ್ದಾರೆ ಸಿಎಂ ಯಡಿಯೂರಪ್ಪ. ಹೀಗಾಗಿ ದೆಹಲಿಗೆ ಹೋಗಿ ಚಟುವಟಿಕೆ ನಡೆಸಿದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಅವರು ಪರೋಕ್ಷವಾಗಿ ಹೇಳಿದ್ದಾರೆ.

ಇನ್ನು ಸಚಿವ ಸಂಪಟ ಸಭೆಗೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಕೆಲ ಸಚಿವರು ಮತ್ತು ಶಾಸಕರು ಉಳಿದ ಇನ್ನೆರಡು ವರ್ಷ ಕಾಲ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾತೇ ಇಲ್ಲ. ಬಿ ಎಸ್​ ಯಡಿಯೂರಪ್ಪ ಅವರೇ ಕರ್ನಾಟಕದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ರಾಜ್ಯ ನಾಯಕತ್ವದಲ್ಲಿ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಾಡುವುದಾಗಿ ಹಿರಿಯ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಇನ್ನು ಮತ್ತೊಬ್ಬ ಸಚಿವ ಸಿಪಿ ಯೋಗೀಶ್ವರ್​ ಸಂಪುಟ ಸಭೆಗೆ ಪಾಲ್ಗೊಳ್ಳಲು ಆಗಮಿಸಿದ್ದಾರೆ. ಆದರೆ ಸುದ್ದಿಗಾರರೊಂದಿಗೆ ಮಾತನಾಡಲು ಹಿಂಜರಿದ ಯೋಗೀಶ್ವರ್​ ಅವರು ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ, ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಸವಿಸ್ತಾರವಾಗಿ ಮಾತನಾಡುವುದಾಗಿ ಹೇಳಿದ್ದಾರೆ.

ನಿನಗೆ ತಾಕತ್ತಿದ್ದರೆ ನಾಯಕತ್ವ ಬದಲಾವಣೆ ಮಾಡು: ಸಿ.ಪಿ.ಯೋಗೇಶ್ವರ್‌ಗೆ ಶಾಸಕ ರೇಣುಕಾಚಾರ್ಯ ಸವಾಲ್

ದಾವಣಗೆರೆ ವರದಿ: ನಿನಗೆ ತಾಕತ್ತಿದ್ದರೆ ನಾಯಕತ್ವ ಬದಲಾವಣೆ ಮಾಡು ಎಂದು ಸಿ.ಪಿ.ಯೋಗೇಶ್ವರ್‌ಗೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಶಾಸಕ ರೇಣುಕಾಚಾರ್ಯ ಸವಾಲು ಹಾಕಿದ್ದಾರೆ.

ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ 420. ಮೆಗಾ ಸಿಟಿಯಲ್ಲಿ ಏನೇನು ಹಗರಣ ಮಾಡಿದ್ದಾರೆ ಗೊತ್ತು. ಯಾರು ಈ ಯೋಗೇಶ್ವರ್ ಎಂದು ರೇಣುಕಾಚಾರ್ಯ ಕಿಡಿಕಾರಿದ್ದಾರೆ. ನಾಯಕತ್ವ ಬದಲಾವಣೆ ಆದ್ರೆ ಬೆಂಕಿ ಹೊತ್ತಿ ಉರಿಯುತ್ತದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಇಂತಹ ಸಮಯದಲ್ಲಿ ನಾನು ರಾಜಕಾರಣ ಮಾಡುವುದಿಲ್ಲ. ಸಚಿವ ಸಿ.ಪಿ.ಯೋಗೇಶ್ವರ್ ಒಬ್ಬ ಕಳ್ಳ ಎಂದು ಟಿವಿ9 ಜೊತೆ ಮಾತನಾಡುತ್ತಾ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಸಂಪುಟ ಸಭೆಗೆ ಸಚಿವ ಆನಂದ್ ಸಿಂಗ್ ಆಬ್ಸೆಂಟ್: ಇನ್ನು, ಜಿಂದಾಲ್‌ಗೆ ಭೂಮಿ ಪರಭಾರೆ ವಿಚಾರದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಹೇಳಿದ್ದ ಸಚಿವ ಆನಂದ್ ಸಿಂಗ್ ಸಚಿವ ಸಂಪುಟ ಸಭೆಗೆ ಆಬ್ಸೆಂಟ್ ಆಗಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

(BS Yediyurappa reacts to change in leadership talks in karnataka before cabinet meeting in bengaluru)

Published On - 11:31 am, Thu, 27 May 21

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ