AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಥಿತಿಗತಿ ನೋಡಿಕೊಂಡು ಲಾಕ್​ಡೌನ್​ ಬಗ್ಗೆ ತೀರ್ಮಾನ, ಜೂನ್ 7ರವರೆಗೆ ಎಂದಿನಂತೆ ಲಾಕ್​ಡೌನ್​ ಇರುತ್ತದೆ: ಸಿಎಂ ಬಿ.ಎಸ್.ಯಡಿಯೂರಪ್ಪ

ಪಿಎಂ ಕೇರ್ಸ್ ವೆಂಟಿಲೇಟರ್​ನಲ್ಲಿ ಕೆಲವೊಂದು ಸಮಸ್ಯೆಯಿದೆ. ಸಮಸ್ಯೆ ಸರಿಪಡಿಸುವ ಕೆಲಸ ನಡೆಯುತ್ತಿದೆ ಎಂದು ವಿಡಿಯೋ ಕಾನ್ಫರೆನ್ಸ್ ಬಳಿಕ ಸಿಎಂ ಯಡಿಯೂರಪ್ಪ ತಿಳಿಸಿದರು. ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಲಸಿಕೆ ಪೂರೈಕೆ ಬಗ್ಗೆ ಮಾತಾಡಿರುವೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಜೊತೆ ಮಾತನಾಡಿದ್ದೇವೆ.

ಸ್ಥಿತಿಗತಿ ನೋಡಿಕೊಂಡು ಲಾಕ್​ಡೌನ್​ ಬಗ್ಗೆ ತೀರ್ಮಾನ, ಜೂನ್ 7ರವರೆಗೆ ಎಂದಿನಂತೆ ಲಾಕ್​ಡೌನ್​ ಇರುತ್ತದೆ: ಸಿಎಂ ಬಿ.ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Follow us
sandhya thejappa
|

Updated on:May 29, 2021 | 2:41 PM

ಬೆಂಗಳೂರು: ರಾಜ್ಯದ ಸ್ಥಿತಿಗತಿ ನೋಡಿಕೊಂಡು ಲಾಕ್​ಡೌನ್​ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜೂನ್ 7ರವರೆಗೆ ಎಂದಿನಂತೆ ಲಾಕ್​ಡೌನ್​ ಇರುತ್ತದೆ. ಜೂನ್ 7ರ ನಂತರ ಲಾಕ್​ಡೌನ್​ ಪ್ರಶ್ನೆ ಉದ್ಭವಿಸಲ್ಲ ಅನಿಸುತ್ತೆ. ಆದರೆ ರಾಜ್ಯದ ಜನರು ಸಹಕಾರ ನೀಡಬೇಕು. ಜೂನ್ 7 ರ ವರೆಗೆ ರಾಜ್ಯದಲ್ಲಿ ಬಿಗಿ ಕ್ರಮ ಮುಂದುವರಿಯುತ್ತದೆ. ಕೊರೊನಾ ನಿಯಂತ್ರಣ ನೋಡಿಕೊಂಡು ಲಾಕ್​ಡೌನ್​ ಬಗ್ಗೆ ತೀರ್ಮಾನಿಸುತ್ತೇವೆ ಎಂದು ತಿಳಿಸಿದರು.

ಪಿಎಂ ಕೇರ್ಸ್ ವೆಂಟಿಲೇಟರ್​ನಲ್ಲಿ ಕೆಲವೊಂದು ಸಮಸ್ಯೆಯಿದೆ. ಸಮಸ್ಯೆ ಸರಿಪಡಿಸುವ ಕೆಲಸ ನಡೆಯುತ್ತಿದೆ ಎಂದು ವಿಡಿಯೋ ಕಾನ್ಫರೆನ್ಸ್ ಬಳಿಕ ಸಿಎಂ ಯಡಿಯೂರಪ್ಪ ತಿಳಿಸಿದರು. ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಲಸಿಕೆ ಪೂರೈಕೆ ಬಗ್ಗೆ ಮಾತಾಡಿರುವೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಜೊತೆ ಮಾತನಾಡಿದ್ದೇವೆ. ಆದಷ್ಟು ಬೇಗ ಲಸಿಕೆ ಪೂರೈಕೆ ಮಾಡುವುದಾಗಿ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಳಸಂತೆಯಲ್ಲಿ ಬ್ಲ್ಯಾಕ್ ಫಂಗಸ್ ಔಷಧ ಮಾರಾಟ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಅಲ್ಲೊಂದು ಇಲ್ಲೊಂದು ಮಾರಾಟ ಪ್ರಕರಣ ಕಂಡುಬರುತ್ತಿದೆ. ಕಾಳಸಂತೆಯಲ್ಲಿ ಔಷಧ ಮಾರುವವರ ವಿರುದ್ಧ ಕ್ರಮ ನಿಶ್ಚಿತ ಎಂದು ಹೇಳಿದರು.

ಮುಖ್ಯಮಂತ್ರಿ ಸೂಚನೆ 2ನೇ ಅಲೆಯಲ್ಲಿ ನಿರೀಕ್ಷೆಗೂ ಮೀರಿ ಕೊವಿಡ್ ಪ್ರಕರಣ ಹೆಚ್ಚಳವಾಗಿದೆ. ಈಗ ಕೊರೊನಾ ಕೇಸ್ ಕಡಿಮೆಯಾಗಿರುವುದು ನೆಮ್ಮದಿ ವಿಚಾರ. ಕೊರೊನಾ ಕಡಿಮೆಯಾಯಿತು ಎಂದು ಸುಮ್ಮನಿರುವಂತಿಲ್ಲ. ಹಳ್ಳಿಗಳಲ್ಲಿ ಹೆಚ್ಚು ಕೊವಿಡ್ ಟೆಸ್ಟ್ ಮಾಡಬೇಕು. ಕೆಲವೊಂದು ಹಳ್ಳಿಗಳಲ್ಲಿ ಒಂದೇ ಒಂದು ಕೇಸ್ ಪತ್ತೆಯಾಗಿಲ್ಲ. ಅಂತಹ ಹಳ್ಳಿಗಳಿಗೆ ಕೊರೊನಾ ಹರಡದಂತೆ ನಿಗಾವಹಿಸಬೇಕು ಎಂದು ಜಿಲ್ಲಾಡಳಿತಗಳ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಸೂಚನೆ ನೀಡಿದರು.

ಇದನ್ನೂ ಓದಿ

ಬಿಜೆಪಿಯಲ್ಲಿ ಬಿಎಸ್​ವೈ ಬಿಟ್ಟರೆ ಸಿಎಂ ಆಗಲು ಸಮರ್ಥರಿಲ್ಲ ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ಪ್ರಹ್ಲಾದ್ ಜೋಶಿ ತಿರುಗೇಟು

ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನಲ್ಲಿ ಆರೋಪಿಗಳಾದ ನರೇಶ್, ಶ್ರವಣ್ ಗೆ ಬೇಲ್ ನೀಡದಂತೆ ಎಸ್​ಐಟಿಯಿಂದ ಮನವಿ

(BS Yediyurappa said would take a look situation and take a decision on lockdown)

Published On - 2:35 pm, Sat, 29 May 21