BS Yediyurappa Birthday: 79ನೇ ವಸಂತಕ್ಕೆ ಕಾಲಿಟ್ಟ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ; ಟ್ವೀಟ್ ಮೂಲಕ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ 79ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಸಿಎಂ ಬಿಎಸ್​ವೈಗೆ ಸಚಿವರು, ಶಾಸಕರು ಸೇರಿದಂತೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಂದ ಶುಭಾಶಯಗಳ ಮಹಾಪೂರ ಹರಿದುಬಂದಿದೆ.

BS Yediyurappa Birthday: 79ನೇ ವಸಂತಕ್ಕೆ ಕಾಲಿಟ್ಟ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ; ಟ್ವೀಟ್ ಮೂಲಕ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ಬಿ.ಎಸ್.ಯಡಿಯೂರಪ್ಪ
Follow us
ಪೃಥ್ವಿಶಂಕರ
| Updated By: Digi Tech Desk

Updated on:Mar 02, 2021 | 5:55 PM

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ತಮ್ಮ 79ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಸಿಎಂ ಬಿಎಸ್​ವೈಗೆ ಸಚಿವರು, ಶಾಸಕರು ಸೇರಿದಂತೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಂದ ಶುಭಾಶಯಗಳ ಮಹಾಪೂರ ಹರಿದುಬಂದಿದೆ. ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಹುಟ್ಟುಹಬ್ಬದ ಸಂಭ್ರಮ ಮನೆಮಾಡಿದ್ದು, ಸಿಎಂ ನಿವಾಸ ಕಾವೇರಿ ಸುತ್ತ ಬಿಗಿ ಪೊಲೀಸ್​ ಬಂದೋಬಸ್ತ್ ಆಯೋಜಿಸಲಾಗಿದೆ. ಹುಟ್ಟುಹಬ್ಬದ ಸಂಭ್ರಮಲ್ಲಿರುವ ಬಿಎಸ್​ವೈ, ಸಂಜಯ ನಗರದ ರಾಧಾಕೃಷ್ಣ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ಟ್ವೀಟ್ ಮೂಲಕ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ.. ಮುಖ್ಯಮಂತ್ರಿ ಯಡಿಯೂರಪ್ಪನವರ 79ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ಪ್ರಧಾನಿ ಮೋದಿ ಶುಭಾಶಯ ತಿಳಿಸಿದ್ದಾರೆ. B.S.ಯಡಿಯೂರಪ್ಪ ನಮ್ಮ ಹಿರಿಯ ಅನುಭವಿ ನಾಯಕ, ಸಿಎಂ B.S.ಯಡಿಯೂರಪ್ಪ ತಮ್ಮ ಜೀವನವನ್ನು ರೈತರು, ಬಡವರ ಅಭಿವೃದ್ಧಿಗಾಗಿ ಮುಡಿಪಾಗಿಟ್ಟಿದ್ದಾರೆ. ಯಡಿಯೂರಪ್ಪ ಅವರಿಗೆ ದೇವರು ಆರೋಗ್ಯ ಆಯಸ್ಸು ನೀಡಲಿ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಬಿಎಸ್​ವೈ ಆರಂಭಿಕ ದಿನಗಳು.. ಮಂಡ್ಯ ಜಿಲ್ಲೆಯ ಬೂಕನಕೆರೆ ಗ್ರಾಮದ ಸಿದ್ದಲಿಂಗಯ್ಯ ಹಾಗೂ ಶ್ರೀಮತಿ ಪುಟ್ಟ ತಾಯಮ್ಮನವರಿಗೆ 1943ರ ಫೆಬ್ರವರಿ 27ರಂದು ಜನಿಸಿದ ಸುಪುತ್ರ ಬಿ.ಎಸ್. ಯಡಿಯೂರಪ್ಪ, ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ತಮ್ಮ ವ್ಯಾಸಂಗ ಮುಗಿಸಿ, 1965ರಲ್ಲಿ ಸರ್ಕಾರಿ ಉದ್ಯೋಗಕ್ಕೆ ಸೇರಿಕೊಂಡರು. ಆ ಉದ್ಯೋಗವನ್ನು ತ್ಯಜಿಸಿ ಶಿಕಾರಿಪುರದ ವೀರಭದ್ರ ಶಾಸ್ತ್ರೀ ಶಂಕರ್ ರೈಸ್ ಮಿಲ್​ನಲ್ಲಿ ಗುಮಾಸ್ತರಾಗಿ ಕೆಲಸ ಮಾಡಿದರು. ಈ ಕೆಲಸವೇ ಅವರ ವೈವಾಹಿಕ ಜೀವನ ಪ್ರಾರಂಭವಾಗುವ ಸೇತುವೆಯಾಯಿತು. 1967ರಲ್ಲಿ ರೈಸ್ ಮಿಲ್ ಮಾಲೀಕರ ಸುಪುತ್ರಿ ಮೈತ್ರಾ ದೇವಿಯವರನ್ನು ಬಿಎಸ್‌ವೈ ವಿವಾಹವಾದರು. 1972 ರಲ್ಲಿ ಇದೇ ಶಿಕಾರಿಪುರದ ಜನಸಂಘದ ಅಧ್ಯಕ್ಷರಾಗಿ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟರು.

ಪ್ರಾರಂಭಿಕ ದಿನಗಳ ಪ್ರಮುಖ ಹೋರಾಟಗಳು.. 1975ರ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಬಿಎಸ್‌ವೈ, 45 ದಿನಗಳ ಕಾಲ ಸೆರೆವಾಸವನ್ನು ಬಳ್ಳಾರಿ ಹಾಗೂ ಶಿವಮೊಗ್ಗದಲ್ಲಿ ಅನುಭವಿಸಿದರು. ನಂತರ 1700ಮಂದಿಯನ್ನು ಜೀತ ಪದ್ಧತಿಯಿಂದ ವಿಮುಕ್ತಿ ಗೊಳಿಸಿದರು. ಬಗರ್ ಹುಕುಂ ರೈತರ ಪರವಾಗಿ ಹೋರಾಟ ನಡೆಸಿದರು. 1987 ರಲ್ಲಿ ಸೈಕಲ್ ಜಾಥಾ ಮುಖಾಂತರ ಶಿಕಾರಿಪುರ ತಾಲ್ಲೂಕಿನಾದ್ಯಂತ ಸಂಚರಿಸಿ ಬರ ಪರಿಸ್ಥಿತಿ ಅಧ್ಯಯನ ಮಾಡಿ ಸರ್ಕಾರದ ಗಮನಕ್ಕೆ ತಂದರಲ್ಲದೇ ಸಂತ್ರಸ್ತರಿಗೆ ನ್ಯಾಯ ದೊರಕಿಸುವಲ್ಲಿ ಸಫಲರಾದರು.

ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ.. ಧರಂಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು 2006ರಲ್ಲಿ ಜೆಡಿಎಸ್ ವಾಪಸ್ ಪಡೆಯಿತು. ನಂತರ ರಚನೆಗೊಂಡ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಯಡಿಯೂರಪ್ಪನವರು ಉಪ ಮುಖ್ಯಮಂತ್ರಿಯಾದರು. ಮೊದಲ 20 ತಿಂಗಳು ಕುಮಾರಸ್ವಾಮಿಯವರು ಮುಖ್ಯಮಂತ್ರಿ ಮತ್ತು ನಂತರದ 20 ತಿಂಗಳು ಯಡಿಯೂರಪ್ಪನವರು ಮುಖ್ಯಮಂತ್ರಿ ಎಂದು ಸರ್ಕಾರ ರಚನೆ ಸಂದರ್ಭದಲ್ಲಿ ಉಭಯ ಪಕ್ಷಗಳ ನಡುವೆ ಒಪ್ಪಂದವಾಗಿತ್ತು.

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಉಪಮುಖ್ಯಮಂತ್ರಿ ಯಡಿಯೂರಪ್ಪನವರು ಹಣಕಾಸು ಖಾತೆಗೂ ಸಚಿವರಾಗಿದ್ದರು. ಒಪ್ಪಂದದಂತೆ 2007ರ ಅಕ್ಟೋಬರ್​ನಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಬೇಕಾದಾಗ, ಕುಮಾರಸ್ವಾಮಿಯವರು ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಲು ನಿರಾಕರಿಸಿದರು. ಜೆಡಿಎಸ್ ನಡೆ ವಿರೋಧಿಸಿ ಯಡಿಯೂರಪ್ಪ ಮತ್ತು ಬಿಜೆಪಿಯ ಎಲ್ಲ ಸಚಿವರು ರಾಜೀನಾಮೆ ನೀಡಿದರು. ಸಮ್ಮಿಶ್ರ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು ಅಕ್ಟೋಬರ್ 5ರಂದು ಬಿಜೆಪಿ ಹಿಂಪಡೆಯಿತು. ನಂತರ ರಾಷ್ಟ್ರಪತಿ ಆಡಳಿತ ಶುರುವಾಯಿತು.

ನವೆಂಬರ್ 7ರಂದು ಬಿಜೆಪಿ ಮತ್ತು ಜೆಡಿಎಸ್ ನಡುವಿನ ಭಿನ್ನಮತ ಶಮನಗೊಂಡು ರಾಷ್ಟ್ರಪತಿ ಆಳ್ವಿಕೆ ಅಂತ್ಯಗೊಂಡಿತು. ನ. 12, 2007ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಿದರು. ಆದರೆ ಸಚಿವರಿಗೆ ಖಾತೆ ಹಂಚಿಕೆ ವೇಳೆ ಭಿನ್ನಮತ ಉಲ್ಬಣಗೊಂಡಿತು. ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಶ್ರ ಸರ್ಕಾರ ಅಂತ್ಯಗೊಂಡು, ಯಡಿಯೂರಪ್ಪನವರು ನವೆಂಬರ್ 19, 2007ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದರು.

ರಾಜಕೀಯ ಜೀವನದಲ್ಲಿ ನಡೆದುಬಂದ ಹಾದಿ.. 1972ರಲ್ಲಿ ಜನಸಂಘದ ಶಿಕಾರಿಪುರ ತಾಲೂಕು ಅಧ್ಯಕ್ಷರಾಗಿ ಬಿಎಸ್‌ವೈ ನೇಮಕಗೊಂಡರು. 1975ರಲ್ಲಿ ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟದಲ್ಲಿ 45 ದಿನಗಳ ಜೈಲುವಾಸ. 1977ರಲ್ಲಿ ಶಿಕಾರಿಪುರ ಪುರಸಭಾ ಅಧ್ಯಕ್ಷರಾಗಿ ಆಯ್ಕೆ. 1980ರಲ್ಲಿ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷರಾಗಿ ಆಯ್ಕೆ. 1981ರಲ್ಲಿ ಜೀತಾದಾಳು ವಿಮುಕ್ತಿ ಹೋರಾಟದ ನಾಯಕತ್ವ ಪಾದಯಾತ್ರೆ. 1983ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ವಿಧಾನ ಸಭೆಗೆ ಪ್ರವೇಶ. 1985ರಲ್ಲಿ ಬಿಜೆಪಿಯ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ. 1988ರಲ್ಲಿ ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ. 1988ರಲ್ಲಿ ಬಸವ ಕಲ್ಯಾಣದಿಂದ ಬೆಂಗಳೂರು ವರೆಗೆ ರೈತ ಜಾಥಾ ಹಾಗೂ ಬನವಾಸಿಯಿಂದ ಬೆಂಗಳೂರು ವರೆಗೆ ರೈತ ಜಾಥಾದ ನೇತೃತ್ವ. 1991ರಲ್ಲಿ ಡಾ. ಮುರಳೀ ಮನೋಹರ ಜೋಶಿ ನೇತೃತ್ವದಲ್ಲಿ ನಡೆದ ಏಕತಾ ಯಾತ್ರೆಯಲ್ಲಿ ಭಾಗಿ. ಶ್ರೀನಗರದ ಲಾಲ್ ಚೌಕದಲ್ಲಿ ತ್ರಿವರ್ಣ ಧ್ವಜಾರೋಹಣ. 1992ರಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನಿಯೋಜನೆ. 1994ರಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆಯ್ಕೆ. 1998 ತಲಕಾವೇರಿಯಿಂದ ಕೆ.ಆರ್.ಎಸ್ ವರೆಗೆ ರೈತ ಜಾಥಾ. 2000ರಲ್ಲಿ ವಿಧಾನ ಪರಿಷತ್​ಗೆ ಆಯ್ಕೆ. 2003 ಬಗರ್ ಹುಕುಂ ರೈತರ ಜಮೀನು ಸಕ್ರಮಕ್ಕೆ ಆಗ್ರಹಿಸಿ ಶಿಕಾರಿಪುರದಿಂದ ಬೆಂಗಳೂರಿಗೆ ಪಾದಯಾತ್ರೆ. 2004ರಲ್ಲಿ 5ನೇ ಬಾರಿ ವಿಧಾನಸಭೆಗೆ ಪ್ರವೇಶ, ಪ್ರತಿಪಕ್ಷದ ನಾಯಕನಾಗಿ ಆಯ್ಕೆ. 2006 ಉಪಮುಖ್ಯಮಂತ್ರಿ, ಹಣಕಾಸು ಮತ್ತು ಅಬಕಾರಿ ಖಾತೆ ನಿರ್ವಹಣೆ. 2007ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ, ಜೆಡಿಎಸ್ ನಿಂದ ಅಧಿಕಾರ ನಿರಾಕರಣೆ. 2008 ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ. 2011 ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ. 2014 ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆ ಪ್ರವೇಶ. 2014ರಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿ ನೇಮಕ. 2016ರಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ನೇಮಕ. 2017 ನವಂಬರ್ 2ರಿಂದ 2018ರ ಜನವರಿ 28ರ ವರೆಗೆ “ನವ ಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ”. ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರದಲ್ಲಿ ವ್ಯಾಪಕ ಪ್ರವಾಸ. 2018ರಲ್ಲಿ ಮೇ 13ರಂದು 3ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ. 2018ರಲ್ಲಿ ಮೇ 25ರಿಂದ 2019ರ ಜುಲೈ 25ರವರೆಗೆ ವಿಧಾನಸಭೆ ವಿಪಕ್ಷ ನಾಯಕರಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು 104 ಸ್ಥಾನಗಳನ್ನು ಗೆಲ್ಲುವಂತೆ ಮುನ್ನೆಡೆಸಿದ ಬಿಎಸ್‌ವೈ, ಸಿಎಂ ಆಗಿ ಬಹುಮತ ಸಾಬೀತುಪಡಿಸುವುದಕ್ಕೂ ಮುಂಚೆಯೇ ರಾಜೀನಾಮೆ ನೀಡಿದ್ದರು. ಇದರಿಂದ ಮೂರೇ ದಿನಕ್ಕೆ ಅವರ ಸರಕಾರ ಪತನವಾಯಿತು. 2019 ರ ಜೂಲೈ 26ರಂದು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ.

Published On - 9:37 am, Sat, 27 February 21

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ