Karnataka ByElection 2021; ನಾಳೆಯಿಂದ ಬೆಳಗಾವಿಯಲ್ಲಿ ಪ್ರಚಾರ ನಡೆಸಲಿರುವ ಬಿ.ಎಸ್​ ಯಡಿಯೂರಪ್ಪ

ಏಪ್ರಿಲ್ 17 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ 6.45ರ ವೇಳೆಗೆ ಬೆಳಗಾವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರಳಲಿದ್ದಾರೆ.

Karnataka ByElection 2021; ನಾಳೆಯಿಂದ ಬೆಳಗಾವಿಯಲ್ಲಿ ಪ್ರಚಾರ ನಡೆಸಲಿರುವ ಬಿ.ಎಸ್​ ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ
Follow us
shruti hegde
| Updated By: preethi shettigar

Updated on: Apr 06, 2021 | 9:44 AM

ಬೆಳಗಾವಿ: ಏಪ್ರಿಲ್ 17 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ 6.45ರ ವೇಳೆಗೆ ಬೆಳಗಾವಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೆರಳಲಿದ್ದಾರೆ. ಬಿಜೆಪಿ ನಾಯಕರೊಂದಿಗೆ ಸಭೆ ನಡೆಸುವ ನಿಟ್ಟಿನಲ್ಲಿ ಬಿ.ಎಸ್​ ಯಡಿಯೂರಪ್ಪ ತೆರಳಲಿದ್ದು, ಸಚಿವರಾದ ಜಗದೀಶ್ ಶೆಟ್ಟರ್, ಉಮೇಶ್ ಕತ್ತಿ ಸೇರಿ ಹಲವು ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರೆ. ಇಂದು ಖಾಸಗಿ ಹೊಟೆಲ್​ ಒಂದರಲ್ಲಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ವಾಸ್ತವ್ಯ ಹೂಡಲಿದ್ದಾರೆ.

ನಾಳೆ ರಾಮದುರ್ಗ, ಸವದತ್ತಿ, ಬೈಲಹೊಂಗಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತಯಾಚನೆ ಮಾಡಲಿದ್ದು, ಲಿಂಗಾಯತ ಸಮುದಾಯ ಹೆಚ್ಚಾಗಿರುವ ಕ್ಷೇತ್ರದ ಕಡೆ ಮತ ಪ್ರಚಾರ ಮಾಡುವ ನಿಟ್ಟಿನಲ್ಲಿ ಬಿ.ಎಸ್​ ಯಡಿಯೂರಪ್ಪ ಪ್ರಚಾರ ಸಭೆ ಕೈಗೊಂಡಿದ್ದಾರೆ.

ಸಾಲಹಳ್ಳಿ ಬಬಲಾದಿ ಮಠದ ಆವರಣದಲ್ಲಿ ಸಮಾವೇಶ ನಡೆಯಲಿದೆ. ಬಳಿಕ ಸವದತ್ತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯರಗಟ್ಟಿಗೆ ತೆರಳಲಿದ್ದಾರೆ. ನಾಳೆ ಮಧ್ಯಾಹ್ನ 1.30ಕ್ಕೆ ಯರಗಟ್ಟಿಯಲ್ಲಿ ಚುನಾವಣಾ ಪ್ರಚಾರ ಮಾಡಿದ ಬಳಿಕ ಬೈಲಹೊಂಗಲ ತಾಲೂಕಿನ ಇಂಚಲಕ್ಕೆ ಪ್ರಯಾಣ ನಡೆಸಲಿದ್ದಾರೆ. ಸಂಜೆ 4.30ರ ವೇಳೆಯಲ್ಲಿ ಇಂಚಲದ ಶಿವಯೋಗೇಶ್ವರ ಪಿಯು ಕಾಲೇಜು ಆವರಣದಲ್ಲಿ ಪ್ರಚಾರ ಸಭೆ ಕೈಗೊಳ್ಳಲಿದ್ದು, ಬಳಿಕ ನಾಳೆ ಸಂಜೆ 7.20ಕ್ಕೆ ಸಾಂಬ್ರಾ ವಿಮಾನ‌‌ ನಿಲ್ದಾಣದಿಂದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

ಇದನ್ನೂ ಓದಿ: Karnataka ByElection 2021: ಕಾಂಗ್ರೆಸ್​ಗೆ ಬೈ ಬೈ, ಬಿಜೆಪಿಗೆ ಜೈಜೈ ಎಂದ ಕಾಂಗ್ರೆಸ್​ ಮುಖಂಡ ಲಖನ್ ಜಾರಕಿಹೊಳಿ

Karnataka ByElection 2021: ಕರ್ನಾಟಕ ಉಪ ಚುನಾವಣೆಗೆ ಮುಹೂರ್ತ ಫಿಕ್ಸ್ ; ಏಪ್ರಿಲ್ 17ರಂದು ನಡೆಯಲಿದೆ ಚುನಾವಣೆ

(BS Yediyurappa will participate in Karnataka ByElection 2021 campaign in Belagavi)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್