ಕಾವಲಭೈರಸಂದ್ರ ಗಲಭೆ ತನಿಖೆಯ ಹಾದಿ ತಪ್ಪಿಸುವ ಕೆಲಸ ಸರಕಾರ ಮಾಡುತ್ತಿದೆ: ಸಿದ್ದರಾಮಯ್ಯ
ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ನಡೆದ ಗಲಭೆಯ ತನಿಖೆಯನ್ನು ರಾಜ್ಯ ಸರಕಾರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್ಗಳ ಮೂಲಕ ಆರೋಪಿಸಿದ್ದಾರೆ. “ಕಾವಲಭೈರಸಂದ್ರ ಗಲಭೆ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು @BJP4Karnataka ಸರಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ. ದಿನಕ್ಕೊಬ್ಬ ಸಚಿವರು, ಶಾಸಕರು ಸ್ಥಳಕ್ಕೆ ಭೇಟಿ ನೀಡಿ, ಗಲಭೆಗೆ ಎಸ್ ಡಿ ಪಿ ಐ, ಕಾಂಗ್ರೆಸ್ ಭಯೋತ್ಪಾದಕರು ಎಂದು ನೀಡುತ್ತಿರುವ ಹೇಳಿಕೆಗಳೇ ಇದಕ್ಕೆ ಸಾಕ್ಷಿ@siddaramaiah” ಎಂದು ಹಿರಿಯ ಕಾಂಗ್ರೆಸ್ ನಾಯಕ […]

ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ನಡೆದ ಗಲಭೆಯ ತನಿಖೆಯನ್ನು ರಾಜ್ಯ ಸರಕಾರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಟ್ವೀಟ್ಗಳ ಮೂಲಕ ಆರೋಪಿಸಿದ್ದಾರೆ.
“ಕಾವಲಭೈರಸಂದ್ರ ಗಲಭೆ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು @BJP4Karnataka ಸರಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ. ದಿನಕ್ಕೊಬ್ಬ ಸಚಿವರು, ಶಾಸಕರು ಸ್ಥಳಕ್ಕೆ ಭೇಟಿ ನೀಡಿ, ಗಲಭೆಗೆ ಎಸ್ ಡಿ ಪಿ ಐ, ಕಾಂಗ್ರೆಸ್ ಭಯೋತ್ಪಾದಕರು ಎಂದು ನೀಡುತ್ತಿರುವ ಹೇಳಿಕೆಗಳೇ ಇದಕ್ಕೆ ಸಾಕ್ಷಿ@siddaramaiah” ಎಂದು ಹಿರಿಯ ಕಾಂಗ್ರೆಸ್ ನಾಯಕ ಹೇಳಿದ್ದಾರೆ.
ಮುಂದುವರಿದು ಹೇಳಿರುವ ಸಿದ್ದರಾಮಯ್ಯನವರು, ಪ್ರಕರಣಕ್ಕೆ ಮತೀಯ ಗಲಭೆಯ ಬಣ್ಣ ಬಳಿಯಲಾಗುತ್ತಿದೆ ಎಂದಿದ್ದಾರೆ.
‘‘ಗಲಭೆಯ ಹಿಂದಿನ ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತ ಹೆಚ್ಚು ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ? ಇದನ್ನು ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ ಎನ್ನುವ ಬಗ್ಗೆ @BJP4Karnataka ನಾಯಕರು ತಲೆಕೆಡಿಸಿಕೊಂಡಿದ್ದಾರೆ @siddaramaiah”
ರಾಜ್ಯ ಬಿಜಿಪಿ ಎರಡು ಗುಂಪುಗಳಲ್ಲಿ ಒಡೆದು ಹೋಗಿದೆಯೆಂದು ಸಹ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
‘‘@BJP4Karnatakaಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. @BSYBJP ಅವರ ಪದಚ್ಯುತಿಗೆ ಕೆಲವು ಆರ್ ಎಸ್ ಎಸ್ ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಕ್ಕೆ ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣವನ್ನು ಯಥೇಚ್ಛವಾಗಿ ಬಳಸಲಾಗುತ್ತಿದೆ@siddaramaiah.”

ಕಾವಲಭೈರಸಂದ್ರದಲ್ಲಿ ಕಾಂಗ್ರೆಸ್ ನಾಯಕರೇ ಆಯ್ಕೆಯಾಗಿರಬೇಕಾದರೆ ಅವರಿಗೆ ಗಲಭೆ ಮಾಡಿಸುವ ಅವಶ್ಯಕತೆಯಾದರೂ ಯಾಕಿರುತ್ತದೆ ಎಂದು ಸಿದ್ದು ಪ್ರಶ್ನಿಸಿದ್ದಾರೆ.
‘‘ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೊರೇಟರ್ಗಳು ಇರುವಾಗ, ಕಾವಲಭೈರಸಂದ್ರದ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕಿರುವ ಆಸಕ್ತಿಯಾದರೂ ಏನು? ಅಲ್ಲಿ ಚುನಾವಣೆ ಎದುರಿಸಲಾಗದ ರಾಜಕಿಯ ಪಕ್ಷಗಳೇ ಪ್ರಕರಣದ ಲಾಭ ಪಡೆಯಲು ಹೊರಟಿರುವುದು ಸ್ಪಷ್ಟ@siddaramaiah”
ಪ್ರಕರಣದ ತನಿಖೆ ಗುಪ್ತಚರ ಇಲಾಖೆಯ ವೈಫಲ್ಯದಿಂದ ಆರಂಭಗೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ
‘‘ಕಾವಲಭೈರಸಂದ್ರದ ಗಲಭೆಯ ನಿಜವಾದ ತನಿಖೆ @BJP4Karnataka ಸರಕಾರದ ವೈಫಲ್ಯದಿಂದ ಶುರುವಾಗಬೇಕು. ಸರಕಾರದ ಪ್ರಕಾರ ಇದು ಪೂರ್ವನಿಯೋಜಿತ ಕೃತ್ಯವಾಗಿದ್ದರೆ ಅದು ಯಾಕೆ ಪೊಲೀಸರ ಗಮನಕ್ಕೆ ಬರಲಿಲ್ಲ? ಪ್ರಚೋದನಕಾರಿ ಪೋಸ್ಟ್ ಹಾಕಿರುವ ನವೀನ್ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬಕ್ಕೆ ಕಾರಣ ಯಾರು@siddaramaiah’’
ಎಸ್ ಡಿ ಪಿ ಐ ಸಂಘಟನೆಯನ್ನು ಬ್ಯಾನ್ ಮಾಡುವ ತಾಕತ್ತು ಬಿಜೆಪಿಗಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಸರಕಾರವನ್ನು ಛೇಡಿಸಿದ್ದಾರೆ.
‘‘ಎಸ್ ಡಿ ಪಿ ಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ, ಆ ಸಂಘಟನೆ ತಪ್ಪು ಮಾಡಿದ್ದರೆ ಅದರ ವಿರುದ್ಧ ಕ್ರಮ ಕೈಗೊಳ್ಳಿ. ಮುಸ್ಲಿಂ ಮತಗಳನ್ನು ಒಡೆಯಲು ಎಸ್ ಡಿ ಪಿ ಐಯನ್ನು ಯೋಜಿತ ರೀತಿಯಲ್ಲಿ ಬಳಸಿಕೊಳ್ಳುತ್ತಾ ಬಂದಿರುವ ಬಿಜೆಪಿಗೆ ಅದನ್ನು ನಿಷೇಧಿಸುವ ಧೈರ್ಯ ಇದೆಯೇ? @siddaramaiah’’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
.
Published On - 8:41 pm, Tue, 18 August 20




