Bakrid 2021: ಬಕ್ರೀದ್ ಹಬ್ಬದ ಖರೀದಿ; ಹಣೆ ಮೇಲೆ ನಕ್ಷತ್ರ ಹಾಗೂ ಚಂದ್ರನ ಗುರುತಿನ ಮೇಕೆಗಳಿಗೆ ಭರ್ಜರಿ ಬೇಡಿಕೆ

ಇಡೀ ಮಾರುಕಟ್ಟೆಯಲ್ಲಿ ಸಾವಿರಾರು ಜನರು ಜಮಾಯಿಸಿದ್ದು, ಕೊರೊನಾ ಮುಂಜಾಗೃತಾ ಕ್ರಮಗಳನ್ನು ಅನುಸರಿಸಲಾಗುತ್ತಿಲ್ಲ. ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವಿಲ್ಲದೇ ಮಾರಾಟ ಮತ್ತು ಖರೀದಿ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಆದರೂ ಎಪಿಎಂಸಿ ಆಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

Bakrid 2021: ಬಕ್ರೀದ್ ಹಬ್ಬದ ಖರೀದಿ; ಹಣೆ ಮೇಲೆ ನಕ್ಷತ್ರ ಹಾಗೂ ಚಂದ್ರನ ಗುರುತಿನ ಮೇಕೆಗಳಿಗೆ ಭರ್ಜರಿ ಬೇಡಿಕೆ
ಸಾಂಕೇತಿಕ ಚಿತ್ರ
TV9kannada Web Team

| Edited By: guruganesh bhat

Jul 18, 2021 | 3:18 PM

ವಿಜಯಪುರ: ಜುಲೈ 21ರಂದು ಆಚರಿಸಲ್ಪಡುವ ಬಕ್ರೀದ್ ಹಬ್ಬಕ್ಕಾಗಿ ಮೇಕೆ, ಕುರಿ ಟಗರುಗಳ ಮಾರಾಟ ಜೋರಾಗಿದೆ. ವಿಜಯಪುರ ನಗರದ ಎಪಿಎಂಸಿಯ ಜಾನುವಾರು ಮಾರುಕಟ್ಟೆಯಲ್ಲಿ ಮಾರಾಟ ಪ್ರಕ್ರಿಯೆ ನಡೆಯುತ್ತಿದೆ. ಹಣೆ ಮೇಲೆ ನಕ್ಷತ್ರ ಹಾಗೂ ಚಂದ್ರನ ಗುರುತಿನ ಮೇಕೆಗಳಿಗೆ ಗ್ರಾಹಕರಿಂದ ಭಾರಿ ಡಿಮ್ಯಾಂಡ್ ಕೇಳಿಬರುತ್ತಿದೆ. ಒಂದರಿಂದ ಒಂದೂವರೆ ಲಕ್ಷದವರೆಗೂ ಇಂತಹ ಕುರಿ, ಮೇಕೆ ಮತ್ತು ಟಗರುಗಳು ಮಾರಾಟವಾಗುತ್ತಿವೆ. ಹೀಗಾಗಿ ಇಂತಹ ಕುರಿಗಳಿರುವ ಮಾಲೀಕರು ಭಾರಿ ಉತ್ಸಾಹದಲ್ಲಿ ಇರುವುದು ಮಾರುಕಟ್ಟೆಯಲ್ಲಿ ಕಂಡುಬರುತ್ತಿದೆ.

ಬಕ್ರೀದ್ ಹಬ್ಬಕ್ಕಾಗಿ (Bakrid 2021) ಕುರಿ,ಮೇಕೆಗಳನ್ನು ಖರೀದಿಸಿ ಕೊಂಡೊಯ್ಯಲು ವಿವಿಧ ಜಿಲ್ಲೆ ಹಾಗೂ ಮಹಾರಾಷ್ಟ್ರದಿಂದಲೂ ಮಾರಾಟಗಾರರು ಹಾಗೂ ಖರೀದಿದಾರರು ವಿಜಯಪುರ ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಇಡೀ ಮಾರುಕಟ್ಟೆಯಲ್ಲಿ ಸಾವಿರಾರು ಜನರು ಜಮಾಯಿಸಿದ್ದು, ಕೊರೊನಾ ಮುಂಜಾಗೃತಾ ಕ್ರಮಗಳನ್ನು ಅನುಸರಿಸಲಾಗುತ್ತಿಲ್ಲ. ಮಾಸ್ಕ್ ಧರಿಸದೇ, ಸಾಮಾಜಿಕ ಅಂತರವಿಲ್ಲದೇ ಮಾರಾಟ ಮತ್ತು ಖರೀದಿ ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ. ಆದರೂ ಎಪಿಎಂಸಿ ಆಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.

Bakrid 2021: ಬಕ್ರೀದ್ ವೇಳೆ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ; ಪರಿಷ್ಕೃತ ಆದೇಶ ಹೊರಡಿಸಿದ ಸರ್ಕಾರ ಬಕ್ರೀದ್ ವೇಳೆ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಕುರಿತು ಮಸೀದಿ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮುನ್ನ 50 ಜನರಿಗಷ್ಟೇ ಅವಕಾಶ ಎಂಬ ಆದೇಶದಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ಆಯಾ ಮಸೀದಿಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಶೇ. 50ರಷ್ಟು ಜನರಿಗಿಂತ ಹೆಚ್ಚಾಗದೇ ಪ್ರಾರ್ಥನೆ ಸಲ್ಲಿಸಬೇಕು ಎಂದು ನಿಯಮ ಪರಿಷ್ಕರಿಸಲಾಗಿದೆ.

ಜುಲೈ 21 ರಂದು ಬಕ್ರೀದ್ ಹಬ್ಬ ಆಚರಿಸಲ್ಪಡುವ ಹಿನ್ನೆಲೆಯಲ್ಲಿ ಈದ್ಗಾ ಮೈದಾನಗಳಲ್ಲಿ (Eidgah) ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ನಿನ್ನೆ (ಜುಲೈ 16) ಆದೇಶಿಸಿದೆ. ಆದರೆ ಮಸೀದಿಗಳಲ್ಲಿ (Mosques) ಷರತ್ತುಗಳೊಂದಿಗೆ ಸಾಮೂಹಿಕ ಪ್ರಾರ್ಥನೆ ಅವಕಾಶ ಕಲ್ಪಿಸಲಾಗಿತ್ತು. ರಾಜ್ಯದಲ್ಲಿ ಕೊವಿಡ್ ಸೋಂಕು ಸದ್ಯ ಕಡಿಮೆಯಾಗಿದ್ದು, ಮತ್ತೊಮ್ಮೆ ಕೊವಿಡ್ ಸೋಂಕು ಹೆಚ್ಚಳವಾಗುವ ಭೀತಿಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.  ಈಗಾಗಲೇ ಜುಲೈ 21ರಂದು ಬಕ್ರೀದ್ ಹಬ್ಬ ಆಚರಿಸುವ ಕುರಿತು ಅಧಿಕೃತ ಘೋಷಣೆ ಮಾಡಲಾಗಿದ್ದು, ಮಸೀದಿಗಳಲ್ಲಿ 50 ಜನರೊಂದಿಗೆ ಮಾತ್ರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಈ ಆದೇಶವನ್ನು ಪರಿಷ್ಕರಿಸುವ ರಾಜ್ಯ ಸರ್ಕಾರ ಮಸೀದಿಗಳ ಸಾಮರ್ಥ್ಯದ ಶೇಕಡಾ 50ರಷ್ಟು ಜನರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿದೆ.

ಇದನ್ನೂ ಓದಿ: 

Bakrid Special 2021: ಬಕ್ರೀದ್ ಹಬ್ಬಕ್ಕೆ ರುಚಿ ರುಚಿಯಾದ ಅಡುಗೆ ಮಾಡಿ

(Buckrid 2021 Festival very good demand demand for star and lunar identification goats Vijayapura)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada