
ಬೆಂಗಳೂರು, ಅಕ್ಟೋಬರ್ 01: ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆ ಹಾಗೂ ಫಾರ್ಮ್-7 ಸಲ್ಲಿಕೆ ವಿಚಾರವಾಗಿ ಸಿಎಂ ಡಿಕೆ ಶಿವಕುಮಾರ್ ಕೆಲ ಗಂಭೀರ ಆರೋಪ ಮಾಡಿದ್ದಾರೆ. ಸೆ.22, 23, 24ರಂದು ಬಲ್ಕ್ ಆಗಿ ಫಾರ್ಮ್-7 ಸಲ್ಲಿಸಲಾಗಿದೆ. ಹೀಗಾಗಿ ಬಲ್ಕ್ ಆಗಿ ಫಾರ್ಮ್-7 ಸಲ್ಲಿಸಿದವರ ವಿರುದ್ಧ ತನಿಖೆ ಮಾಡಿ, ಅರ್ಹ ಮತದಾರರ ಹಕ್ಕು ರಕ್ಷಣೆ ಮಾಡುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಡಿಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ಬೆಳಗಾವಿ ಉತ್ತರ ಕ್ಷೇತ್ರದಲ್ಲಿ 3,000, ಮೂಡಿಗೆರೆ ಕ್ಷೇತ್ರದಲ್ಲಿ 6,259, ಬಬಲೇಶ್ವರ ಕ್ಷೇತ್ರದಲ್ಲಿ 1,373, ನರಸಿಂಹರಾಜ ಕ್ಷೇತ್ರದಲ್ಲಿ 1,200, ನರಸಿಂಹರಾಜ ಕ್ಷೇತ್ರದಲ್ಲಿ 1,200 ಮತ್ತು ಭಾಲ್ಕಿ ಕ್ಷೇತ್ರದಲ್ಲಿ 2,285 ಫಾರ್ಮ್-7 ಸಲ್ಲಿಸಲಾಗಿದೆ. ಅಲ್ಪಸಂಖ್ಯಾತ, SC-ST, ಒಬಿಸಿ ಮತದಾರರನ್ನು ಗುರಿಯಾಗಿಸಿದ್ದಾರೆ. ರಾಜ್ಯದ ಇತರೆ ಕ್ಷೇತ್ರಗಳಲ್ಲಿ ಫಾರ್ಮ್-7 ಸಲ್ಲಿಸಲಾಗಿದೆ. ಹೀಗಾಗಿ ಕೂಡಲೇ ತನಿಖೆ ಮಾಡುವಂತೆ ಸಿಎಂ ಡಿಕೆ ಶಿವಕುಮಾರ್ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
As the Chief Minister of Karnataka, it is my bounden duty to protect the right of every eligible voter and ensure that the SIR process is free, fair, transparent and legally compliant.
I have written to the Chief Electoral Officer seeking an immediate and thorough investigation… pic.twitter.com/h7XbZedgJD
— DK Shivakumar (@DKShivakumar) October 1, 2026
ಅಕ್ರಮವಾಗಿ ಫಾರ್ಮ್-7 ಸಲ್ಲಿಸಿದವರ ಮತ್ತು ನೀಡಿದವರು ವಿರುದ್ಧ ಕೇಸ್ ಹಾಕಿ. ಎಫ್ಐಆರ್ ದಾಖಲಾದ ನಂತರ ಕ್ರಿಮಿನಲ್ ಆ್ಯಕ್ಷನ್ ಆಗಬೇಕು ಎಂದಿದ್ದಾರೆ. ಇನ್ನು ಇದೇ ವೇಳೆ ಹಲವು ಕ್ಷೇತ್ರಗಳಲ್ಲಿ ನಡೆದ ಅಕ್ರಮಗಳ ಬಗ್ಗೆಯೂ ಚುನಾವಣಾ ಆಯೋಗಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ದಾಖಲೆ ಸಲ್ಲಿಸಿದರು.
ಇನ್ನು ಕೇಸ್ ದಾಖಲಿಸುವ ತನಕ ತೆರಳಲ್ಲ ಎಂದು ಚುನಾವಣಾ ಆಯೋಗದ ಕಚೇರಿಯಲ್ಲಿ ಸಿಎಂ ಡಿಕೆ ಶಿವಕುಮಾರ್ ಪಟ್ಟು ಹಿಡಿದರು. FIR ದಾಖಲಿಸುವ ತನಕ ಹೋಗಲ್ಲ ಎಂದು ತೀರ್ಮಾನಿಸಿದ ಅವರು, ಕಚೇರಿಯಲ್ಲೇ ಸಚಿವರೊಂದಿಗೆ ಉಪಾಹಾರ ಸೇವಿಸಿದರು. ಈ ವೇಳೆ ದಾಖಲೆಗಳನ್ನು ಪರಿಶೀಲಿಸಿ ಕ್ರಮಕೈಗೊಳ್ಳಲು 2-3 ದಿನ ಆಯೋಗ ಕಾಲಾವಕಾಶ ಕೇಳಿದೆ. ‘ಎಫ್ಐಆರ್ ಪ್ರತಿಗಳನ್ನು ನಿಮಗೆ ನೀಡಿದ್ದೇನೆ. ನಮ್ಮ ಜಿಲ್ಲಾಧಿಕಾರಿಗಳ ಜೊತೆಗೂ ಮಾತನಾಡಿಸುತ್ತೇನೆ. ತಕ್ಷಣ ಎಫ್ಐಆರ್ ಮಾಡಿ ಎಂದು ಡಿಕೆ ಶಿವಕುಮಾರ್ ಪಟ್ಟು ಹಿಡಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:54 pm, Thu, 1 October 26