AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆ.. ಪಟಾಕಿ ಹಚ್ಚೋಕ್ಕೆ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಿ

ಇದೇ ನವೆಂಬರ್ ಮಾಹೆಯಲ್ಲಿ ಆಚರಿಸುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪಟಾಕಿ ಹಚ್ಚುವಾಗ ಕೆಲವು ಮುಂಜಾಗ್ರತಾ ಕ್ರಮಗಳ ತೆಗೆದುಕೊಳ್ಳಬೇಕಾಗಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯು ಸೂಚಿಸಿದೆ. ಮಕ್ಕಳಿಗೆ ದೊಡ್ಡವರ ಸಮ್ಮುಖದಲ್ಲಿ ಪಟಾಕಿ ಹಚ್ಚಲು ತಿಳಿಸತಕ್ಕದ್ದು. ತೆರೆದ ಪ್ರದೇಶದಲ್ಲಿ ಪಟಾಕಿ ಹಚ್ಚುವುದು ಸುರಕ್ಷಿತ. ಯಾವುದೇ ಸಂದರ್ಭದಲ್ಲಿ ಮನೆಯೊಳಗೆ ಪಟಾಕಿ ಹಚ್ಚಬಾರದು. ಆದಷ್ಟು ಮಟ್ಟಿಗೆ ಶರೀರಕ್ಕೆ ಹೊಂದಿಕೊಳ್ಳುವಂತಹ ಬಟ್ಟೆಗಳನ್ನು ಧರಿಸತಕ್ಕದ್ದು. ಸುರ ಸುರ ಬತ್ತಿ ಇತ್ಯಾದಿಗಳನ್ನು ಶರೀರದಿಂದ ಆದಷ್ಟು ದೂರ ಹಿಡಿಯಬೇಕು. ಪಟಾಕಿ ಹಚ್ಚುವಾಗ ಅದರ ಮೇಲೆ […]

ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನೆಲೆ.. ಪಟಾಕಿ ಹಚ್ಚೋಕ್ಕೆ ಈ ಮುಂಜಾಗ್ರತಾ ಕ್ರಮ ಕೈಗೊಳ್ಳಿ
ಸಾಧು ಶ್ರೀನಾಥ್​
|

Updated on: Nov 03, 2020 | 5:59 PM

Share

ಇದೇ ನವೆಂಬರ್ ಮಾಹೆಯಲ್ಲಿ ಆಚರಿಸುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪಟಾಕಿ ಹಚ್ಚುವಾಗ ಕೆಲವು ಮುಂಜಾಗ್ರತಾ ಕ್ರಮಗಳ ತೆಗೆದುಕೊಳ್ಳಬೇಕಾಗಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯು ಸೂಚಿಸಿದೆ.

ಮಕ್ಕಳಿಗೆ ದೊಡ್ಡವರ ಸಮ್ಮುಖದಲ್ಲಿ ಪಟಾಕಿ ಹಚ್ಚಲು ತಿಳಿಸತಕ್ಕದ್ದು. ತೆರೆದ ಪ್ರದೇಶದಲ್ಲಿ ಪಟಾಕಿ ಹಚ್ಚುವುದು ಸುರಕ್ಷಿತ. ಯಾವುದೇ ಸಂದರ್ಭದಲ್ಲಿ ಮನೆಯೊಳಗೆ ಪಟಾಕಿ ಹಚ್ಚಬಾರದು. ಆದಷ್ಟು ಮಟ್ಟಿಗೆ ಶರೀರಕ್ಕೆ ಹೊಂದಿಕೊಳ್ಳುವಂತಹ ಬಟ್ಟೆಗಳನ್ನು ಧರಿಸತಕ್ಕದ್ದು. ಸುರ ಸುರ ಬತ್ತಿ ಇತ್ಯಾದಿಗಳನ್ನು ಶರೀರದಿಂದ ಆದಷ್ಟು ದೂರ ಹಿಡಿಯಬೇಕು. ಪಟಾಕಿ ಹಚ್ಚುವಾಗ ಅದರ ಮೇಲೆ ಬಾಗಬಾರದು. ಸಾಧ್ಯವಾದಷ್ಟು ಮಟ್ಟಿಗೆ ಪಕ್ಕದಿಂದ ಹಚ್ಚತಕ್ಕದ್ದು. ಯಾವುದೇ ಪಾತ್ರೆಯೊಳಗೆ ಅಥವಾ ಇಕ್ಕಟ್ಟಾದ ಸ್ಥಳಗಳಲ್ಲಿ ಪಟಾಕಿ ಹಚ್ಚಬಾರದು. ಪಟಾಕಿಗಳನ್ನು ಜೇಬಿನಲ್ಲಿಡಬಾರದು.

ಯಾವುದೇ ಸಂದರ್ಭದಲ್ಲಿ ಪಟಾಕಿಗಳನ್ನು ಬೆಂಕಿಯ ಅಥವಾ ಉಷ್ಣತೆ ಹೆಚ್ಚಿರುವ ಸ್ಥಳಗಳಲ್ಲಿ ಇಡಬಾರದು ಹಾಗೂ ಪೊಟ್ಟಣಗಳನ್ನು ತೆರೆಯಬಾರದು. ಹಚ್ಚಿರುವ ಪಟಾಕಿ ಸಿಡಿಯದಿದ್ದರೆ ಅದನ್ನು ಪುನರ್ ಪರೀಕ್ಷಿಸಲು ಪ್ರಯತ್ನಿಸಬಾರದು.

ಹೂ ಕುಂಡಗಳನ್ನು ಕೈಯಲ್ಲಿ ಹಿಡಿದುಕೊಂಡು ಹಚ್ಚಬಾರದು. ರಾಕೆಟ್‍ಗಳನ್ನು ಬಳಸುವುದನ್ನು ಪೂರ್ಣವಾಗಿ ತಪ್ಪಿಸುವುದು ಉತ್ತಮ. ಬೇರೆಯವರಿಗೆ ತೋರಿಸಿಕೊಳ್ಳಲು ಪಟಾಕಿ ಹಚ್ಚುವಾಗ ಅಪಾಯಕ್ಕೆ ಅವಕಾಶ ಕೊಡಬಾರದು. ಪಕ್ಕದಲ್ಲಿ ಯಾವಾಗಲೂ ನೀರನ್ನು ಇಟ್ಟುಕೊಳ್ಳುವುದು ಸುರಕ್ಷಿತ. ಆಕಸ್ಮಿಕವಾಗಿ ಸುಟ್ಟ ಗಾಯಗಳಾದರೆ ಕೂಡಲೇ ತಣ್ಣೀರನ್ನು ಸುರಿಯತಕ್ಕದ್ದು.

ಸಾಧ್ಯವಾದಷ್ಟು ಮಟ್ಟಿಗೆ ಸ್ನೇಹಿತರ ಜೊತೆ ಸೇರಿ ಸಾರ್ವಜನಿಕ ತೆರೆದ ಪ್ರದೇಶಗಳಲ್ಲಿ ಪಟಾಕಿ ಹಚ್ಚುವುದು ಸೂಕ್ತ. ಇದರಿಂದ ಎಲ್ಲರೂ ಸಂತೋಷಪಡಬಹುದು ಹಾಗೂ ಸುರಕ್ಷಿತ. ಮಕ್ಕಳು ವಯಸ್ಸಾದವರು, ಖಾಯಿಲೆ ಇರುವವರು ಹಾಗು ಪ್ರಾಣಿಗಳನ್ನು ಗಮನಿಸಿ, ಅವರಿಗೆ ಆಗುವ ತೊಂದರೆಗಳನ್ನು ತಪ್ಪಿಸಲು ಪ್ರಯತ್ನಿಸಿ. ಹೆಚ್ಚು ಶಬ್ದ ಬರುವ ಪಟಾಕಿಗಳನ್ನು ಆಸ್ಪತ್ರೆ ಮತ್ತು ಇತರೆ ಸೂಕ್ಷ್ಮ ಪ್ರದೇಶಗಳಲ್ಲಿ ಬಳಸುವುದನ್ನು ತಪ್ಪಿಸಿ.

ದೇಶದಾದ್ಯಂತ ಹರಡಿರುವ ಕೋವಿಡ್-19 ಸಾಂಕ್ರಾಮಿಕ ರೋಗದ ಬಗ್ಗೆ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಿ ಸುರಕ್ಷಿತ ದೀಪಾವಳಿ ಆಚರಿಸುವಂತೆ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್