ಬೆಂಗಳೂರು: ಕೋಡಿಹಳ್ಳಿ ಚಂದ್ರಶೇಖರ್ ನಮ್ಮ ನೌಕರರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ನಮ್ಮ ನೌಕರರಿಗೆ ಯಾವುದೇ ಉಪಯೋಗ ಆಗಲ್ಲ ಎಂದು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕಂಡಕ್ಟರ್ ಉಮಾ ಸಿಡಿದೆದ್ದಿದ್ದಾರೆ.
ನೌಕರರ ಬೇಡಿಕೆ ಈಡೇರೋದೆ ಇಲ್ಲ ಅಂತ ಗೊತ್ತಿದೆ. ಆದರೂ ನಮ್ಮ ನೌಕರರ ದಾರಿ ತಪ್ಪಿಸೋ ಕೆಲಸ ಮಾಡುತ್ತಿದ್ದಾರೆ. ಕೋಡಿಹಳ್ಳಿ ಯಾರು? ಅವರಿಗೆ ನಮ್ಮ ಸಂಸ್ಥೆ ಬಗ್ಗೆ ಏನೂ ಗೊತ್ತಿದೆ? ಮುಂದೆ ನಮ್ಮ ನೌಕರರು ಬೀದಿಗೆ ಬರಬೇಕಾಗುತ್ತದೆ. ಮುಂದೆ ಖಾಸಗಿಯವರಿಗೆ ಸಾರಿಗೆ ಹಂಚೋ ಹುನ್ನಾರವೂ ಇರಬಹುದು. ನಮಗೆ ಉಪಯೋಗ ಆಗೋ ಬೇರೆ ಕೆಲಸಗಳಿವೆ ಅದನ್ನು ಮಾಡಲಿ. ನೌಕರರು ಅಮಾಯಕರು, ಅವರಿಗೆ ಏನು ಗೊತ್ತಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಿಟ್ಟಿಗೆದ್ದಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಮುಂದೆ ಕಣ್ಣೀರಿಟ್ಟ ಕೆಎಸ್‌ಆರ್‌ಟಿಸಿ ಸಿಬ್ಬಂದಿ
ನಾನೊಬ್ಬ ಬಡವ ಕೆಎಸ್ಆರ್ಟಿಸಿಯನ್ನೇ ನಂಬಿಕೊಂಡು ಜೀವನ ಮಾಡುತ್ತಿದ್ದೇನೆ. ಮ್ಯಾನೇಜರ್ ನನ್ನನ್ನು ಬೆಳಗ್ಗೆ ಲಾಕ್ ಮಾಡಿ ಹೊರಗೆ ಹೋಗದಂತೆ ತಡೆದಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಸಿಬ್ಬಂದಿ ಶ್ರೀಕಾಂತ್ ರೆಡ್ಡಿ ಮಾಧ್ಯಮದ ಮುಂದೆ ಕಣ್ಣೀರಿಟ್ಟಿದ್ದಾರೆ.
ನನ್ನನ್ನು ಇಲ್ಲಿ ಬ್ಲಾಕ್ ಮಾಡಿ ಡ್ಯೂಟಿ ಮಾಡಿಸಲಾಗುತ್ತಿದೆ. ಸ್ಟ್ರೈಕ್ ದಿನವೂ ನಾನು ಯಾಕೆ ಡ್ಯೂಟಿ ಮಾಡುತ್ತಿದ್ದೇನೆ ಎಂದು ಯಾರೂ ಪ್ರಶ್ನಿಸುತ್ತಿಲ್ಲ ಯಾಕೆ? ಮ್ಯಾನೇಜರ್ ನನ್ನನ್ನು ಬೆಳಗ್ಗೆ ಲಾಕ್ ಮಾಡಿ ಹೊರಗೆ ಹೋಗದಂತೆ ತಡೆದಿದ್ದಾರೆ. ಕೇಸ್ ಕ್ಲಿಯರ್ ಆಗೋವರೆಗೆ ಡ್ಯೂಟಿ ಮಾಡಬೇಕು ಎಂದು ಭಯ ಹುಟ್ಟಿಸಿದ್ದಾರೆ. ನನಗೆ ಭಯ ಹುಟ್ಟಿಸಿದ್ದರಿಂದ ನಾನು ಇಲ್ಲಿ ಡ್ಯೂಟಿ ಮಾಡುತ್ತಿದ್ದೇನೆ. ನನಗೆ ಈ ಸಂಸ್ಥೆ ಬಿಟ್ಟು ಬೇರೆ ಏನು ಗೊತ್ತಿಲ್ಲ. ನಮಗೆ ಆರನೇ ವೇತನ ಆಯೋಗದ ಸೌಲಭ್ಯ ಯಾಕೆ ಬೇಕು ಗೊತ್ತಾ? ನಿಮ್ಮ ಬಳಿ ಹಣವಿದೆ ನಮ್ಮ ಬಳಿ ಹಣವಿಲ್ಲ ಅದಕ್ಕಾಗಿ ಸಂಬಳ ಏರಿಕೆ ಕೇಳುತ್ತಿದ್ದೇವೆ. ರಾಜಕಾರಣಿಗಳಿಗೆ ನಮ್ಮ ಕಷ್ಟ ಅರ್ಥವಾಗುವುದಿಲ್ಲ. ನಾವು ಮತ ಹಾಕಿರುವುದರಿಂದ ಇವರೆಲ್ಲ ರಾಜಕಾರಣ ಮಾಡುತ್ತಿದ್ದಾರೆ. ನನ್ನ ಹತ್ತಿರ ಹಣವಿದ್ದರೆ ನಾನೇ ರಾಜಕಾರಣ ಮಾಡುತ್ತಿದ್ದೆ ಎಂದು ನೋವು ಹಂಚಿಕೊಂಡಿದ್ದಾರೆ.
ಅರ್ಚಕರಿಗೆ ಆರನೇ ವೇತನ ಆಯೋಗದಂತೆ ವೇತನ ಕೊಡುತ್ತಾರೆ ನಾವೇನು ಸತ್ತಿದ್ದೀವಾ? ನಿಮ್ಮ ಸ್ವಂತಕ್ಕೆ ನೀವು ರಾಜಕಾರಣ ಮಾಡುವುದಲ್ಲ ಜನರ ಸೇವೆ ಮಾಡಿ. ಜಾತಿ- ಜಾತಿ ಎಂದು ಬಡಿದಾಡಿಕೊಳ್ಳುವವರು ನೀವು ಎಂಎಲ್ಎಗಳು. ನಿಮ್ಮ ಜಾತಿ ರಾಜಕೀಯ ಸುಡುಗಾಡು ಸೇರಲಿ ಎಂದು ತಮ್ಮ ನೋವನ್ನು ಸಿಟ್ಟಿನ ರೂಪದಲ್ಲಿ ಹೊರಹಾಕಿದ್ದಾರೆ.
KSRTC BMTC Strike: ಮುಷ್ಕರಕ್ಕೆ ಬೆಂಬಲ ನೀಡದೆ ಬಸ್ ಚಲಾಯಿಸಿದ ಚಾಲಕನ ವಿರುದ್ಧ ಸಹೋದ್ಯೋಗಿಗಳಿಂದ ಗಂಭೀರ ಆರೋಪ