ಬೆಂಗಳೂರು: ಸಾರಿಗೆ ಸಿಬ್ಬಂದಿ ಪ್ರತಿಭಟನೆ, ಚಾಲಕರ ಮೇಲೆ ಹಲ್ಲೆ, ಸರ್ಕಾರಿ ಬಸ್ಗಳ ಮೇಲೆ ಕಲ್ಲು ತೂರಾಟ ಹಿನ್ನೆಲೆ ಬೆಂಗಳೂರಿನಲ್ಲಿ ಸಾರಿಗೆ ನೌಕರರ ಮುಖಂಡ ಚಂದ್ರು ಬಂಧನವಾಗಿದೆ. ಗಾಂಧಿನಗರದ ಸಾರಿಗೆ ನೌಕರರ ಮುಖಂಡ ಚಂದ್ರು ಅವರ ಕಚೇರಿಯಲ್ಲಿಯೇ ಬಂಧಿಸಲಾಗಿದೆ. ಪಶ್ಚಿಮ ವಿಭಾಗ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಚಂದ್ರು ಸೇರಿದಂತೆ ಇನ್ನೂ 15 ಜನರನ್ನು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:08 pm, Mon, 19 April 21