AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ಮುಷ್ಕರಕ್ಕೆ ಕುಮ್ಮಕ್ಕು ನೀಡಿದ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಯಲ್ಲಿ ಪೊಲೀಸರ ವಶಕ್ಕೆ

Bus Strike Kodihalli Chandrashekar Arrested ಬೆಳಗಾವಿಯ ಸುವರ್ಣಸೌಧ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಸಭೆಗೆ ನಿರ್ಧರಿಸಿದ್ದರು. ಆದರೆ ಸಭೆಗೂ ಮುನ್ನವೇ ಖಾಸಗಿ ಹೋಟೆಲ್‌ನಲ್ಲಿದ್ದ ಕೋಡಿಹಳ್ಳಿ ಚಂದ್ರಶೇಖರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬೆಳಗಾವಿಯ ಹಿರೇಬಾಗೇವಾಡಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಬಸ್ ಮುಷ್ಕರಕ್ಕೆ ಕುಮ್ಮಕ್ಕು ನೀಡಿದ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಯಲ್ಲಿ ಪೊಲೀಸರ ವಶಕ್ಕೆ
ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶ
ಆಯೇಷಾ ಬಾನು
ಆಯೇಷಾ ಬಾನು|

Updated on:Apr 10, 2021 | 12:01 PM

Share

ಬೆಳಗಾವಿ: ಇಂದು ರೈತ ಮುಖಂಡರು, ಸಾರಿಗೆ ನೌಕರರ ಜತೆ ಸಭೆ ನಡೆಸಲಿದ್ದ ಕೋಡಿಹಳ್ಳಿ ಚಂದ್ರಶೇಖರನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಸುವರ್ಣಸೌಧ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಸಭೆಗೆ ನಿರ್ಧರಿಸಿದ್ದರು. ಆದರೆ ಸಭೆಗೂ ಮುನ್ನವೇ ಖಾಸಗಿ ಹೋಟೆಲ್‌ನಲ್ಲಿದ್ದ ಕೋಡಿಹಳ್ಳಿ ಚಂದ್ರಶೇಖರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬೆಳಗಾವಿಯ ಹಿರೇಬಾಗೇವಾಡಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಸತತ ನಾಲ್ಕನೇ ದಿನವೂ ಕರ್ನಾಟಕದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದೆ. ಸರ್ಕಾರಕ್ಕೆ ಮತ್ತಷ್ಟು ಬಿಸಿ ಮುಟ್ಟಿಸಲು ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರವನ್ನು ಮತ್ತಷ್ಟು ತೀವ್ರಗೊಳಿಸಲು ತಯಾರಿ ನಡೆಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಏಪ್ರಿಲ್ 10 ಅಂದರೆ ಇಂದು ಬೆಳಗಾವಿಗೆ ಕೋಡಿಹಳ್ಳಿ ಚಂದ್ರಶೇಖರ್ ಪ್ರಯಾಣ ಬೆಳೆಸಿದ್ದು ಬೆಳಗಾವಿ ಹಾಗೂ ಗುಲ್ಬರ್ಗದಲ್ಲಿ ಸಾರಿಗೆ ಮುಖಂಡರು ಹಾಗೂ ನೌಕರರ ಸಭೆ ನಡೆಸಲಿದ್ದರು. ಆದರೆ ಮುಂಜಾಗ್ರತಾ ಕ್ರಮವಾಗಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಬಾರದೆಂದು ಬೆಳಗಾವಿ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರನ್ನು ವಶಕ್ಕೆ ಪಡೆದಿದ್ದಾರೆ.

ಸರ್ಕಾರ ಚಳವಳಿಗಳನ್ನು ಹತ್ತಿಕ್ಕುವ ನೀತಿ ಅನುಸರಿಸುತ್ತಿದೆ ಇನ್ನು ಬಂಧನಕ್ಕೊಳಗಾದ ಬಳಿಕ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನನ್ನು ವಶಕ್ಕೆ ಪಡೆದಿರುವುದು ತಪ್ಪು. ನನ್ನನ್ನು ಅಕ್ರಮವಾಗಿ ಬಂಧಿಸಿದ್ದಾರೆ. ಸರ್ಕಾರ ಚಳವಳಿಗಳನ್ನು ಹತ್ತಿಕ್ಕುವ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಸಾರಿಗೆ ನಿಗಮಗಳ ಯಾವ ನೌಕರರು ಆತ್ಮಹತ್ಯೆ ಮಾಡಿಕೊಳ್ಳಬಾರದು: ಕೋಡಿಹಳ್ಳಿ ಚಂದ್ರಶೇಖರ್ (Bus Strike Kodihalli Chandrashekar Arrested in Belagavi)

Published On - 11:47 am, Sat, 10 April 21

Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ