ಬೆಂಗಳೂರಲ್ಲಿ ನೀರು ಪೋಲು ಮಾಡಿದವರಿಗೆ ದಂಡ ವಿಧಿಸಿದ ಜಲಮಂಡಳಿ: 1 ಲಕ್ಷಕ್ಕೂ ಹೆಚ್ಚು ವಸೂಲಿ

ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಹಿನ್ನೆಲೆ ಕುಡಿಯುವ ನೀರನ್ನು ಬೇರೆ ಉದ್ದೇಶಕ್ಕೆ ಬಳಸಿದವರಿಗೆ ಮತ್ತು ಪೋಲು ಮಾಡಿದವರಿಗೆ ದಂಡ ವಿಧಿಸುವುದಾಗಿ ಜಲಮಂಡಳಿ ಈಗಾಗಲೇ ಎಚ್ಚರಿಕೆ ನೀಡಲಾಗಿತ್ತು. ಅದೇ ರೀತಿಯಾಗಿ ನೀರು ವ್ಯರ್ಥ ಮಾಡಿದ್ರೆ 5 ಸಾವಿರ ರೂ. ದಂಡ ನಿಗದಿ ಮಾಡಲಾಗಿತ್ತು. ಇದೀಗ ನಗರದಲ್ಲಿ ಈವರೆಗೆ ಬರೋಬ್ಬರಿ 1 ಲಕ್ಷದ 10 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ.

ಬೆಂಗಳೂರಲ್ಲಿ ನೀರು ಪೋಲು ಮಾಡಿದವರಿಗೆ ದಂಡ ವಿಧಿಸಿದ ಜಲಮಂಡಳಿ: 1 ಲಕ್ಷಕ್ಕೂ ಹೆಚ್ಚು ವಸೂಲಿ
ಜಲಮಂಡಳಿ
Follow us
ಗಂಗಾಧರ​ ಬ. ಸಾಬೋಜಿ
|

Updated on: Mar 24, 2024 | 10:00 PM

ಬೆಂಗಳೂರು, ಮಾರ್ಚ್​ 24: ನಗರದಲ್ಲಿ ಕುಡಿಯುವ ನೀರಿಗಾಗಿ (water) ಹಾಹಾಕಾರ ಹಿನ್ನೆಲೆ ಕುಡಿಯುವ ನೀರನ್ನು ಬೇರೆ ಉದ್ದೇಶಕ್ಕೆ ಬಳಸಿದವರಿಗೆ ಮತ್ತು ಪೋಲು ಮಾಡಿದವರಿಗೆ ದಂಡ ವಿಧಿಸುವುದಾಗಿ ಜಲಮಂಡಳಿ ಈಗಾಗಲೇ ಎಚ್ಚರಿಕೆ ನೀಡಲಾಗಿತ್ತು. ಅದೇ ರೀತಿಯಾಗಿ ನೀರು ವ್ಯರ್ಥ ಮಾಡಿದ್ರೆ 5 ಸಾವಿರ ರೂ. ದಂಡ ನಿಗದಿ ಮಾಡಲಾಗಿತ್ತು. ಇದೀಗ ನಗರದಲ್ಲಿ ಈವರೆಗೆ ಬರೋಬ್ಬರಿ 1 ಲಕ್ಷದ 10 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ. ಬೋರ್​ವೆಲ್, ನಲ್ಲಿ ನೀರು ವಾಹನ ತೊಳೆಯಲು, ರಸ್ತೆಗೆ ಸುರಿದವರು, ಗಿಡಗಳಿಗೆ ಕುಡಿಯುವ ನೀರು ಬಳಸಿದವರಿಗೂ ದಂಡ ವಿಧಿಸಲಾಗಿದೆ. ಜಲಮಂಡಳಿ ಅಧಿಕಾರಿಗಳಿಂದ ವಿವಿಧ ವಲಯಗಳಲ್ಲಿ ದಂಡ ಸಂಗ್ರಹ ಮಾಡಲಾಗಿದೆ. ದಂಡ ಪ್ರಯೋಗದ ಮೂಲಕ ಜಲಮಂಡಳಿಯಿಂದ ನೀರಿನ ಮಿತಬಳಕೆ ಪಾಠ ಮಾಡಲಾಗಿದೆ.

ನೀರು ಪೋಲು ತಡೆಗೆ ಮಾರ್ಚ್‌ 21 ರಿಂದ ಮಾರ್ಚ್ 31ರ ಒಳಗೆ ನಲ್ಲಿಗಳಿಗೆ ವಾಟರ್‌ ಟ್ಯಾಪ್ ಮಾಸ್ಕ್‌ ಅಂದ್ರೆ ಏರಿಯೇಟರ್‌ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನಗರದಲ್ಲಿ ಪರವಾನಗಿ ಹೊಂದಿದ 1,500 ಪ್ಲಂಬರ್‌ಗಳಿದ್ದು, ಏರಿಯೇಟರ್ ಅಳವಡಿಕೆಗೆ ಜಾಗೃತಿ ಮೂಡಿಸಬೇಕಿದೆ. ಏರಿಯೇಟರ್‌ ಅಳವಡಿಸುವುದರಿಂದ ಶೇಕಡಾ 60 ರಿಂದ 85 ರಷ್ಟು ನೀರಿನ ಉಳಿತಾಯ ಮಾಡಬಹುದಾಗಿದೆ.

ಇದನ್ನೂ ಓದಿ: Bengaluru Water Crisis: 24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ ವಾಟರ್​ ಟ್ಯಾಂಕರ್​ಗಳಿಗೂ ದರ ನಿಗದಿ

ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ಅಪಾರ್ಟ್‌ಮೆಂಟ್‌ಗಳು, ಐಷಾರಾಮಿ ಹೋಟೆಲ್​​ಗಳು ಮತ್ತು ರೆಸ್ಟೋರೆಂಟ್​ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ಕಡ್ಡಾಯ. ಮನೆಗಳಲ್ಲಿ ಸ್ವಯಂ ಪ್ರೇರಿತವಾಗಿ ಏರಿಯೇಟರ್‌ ಅಳವಡಿಕೆ ಮಾಡಿಕೊಳ್ಳಬಹುದು. ಈ ಬಗ್ಗೆ ಜಲಮಂಡಳಿ ಇತ್ತೀಚೆಗೆ ಅಧಿಕೃತ ಆದೇಶ ಹೊರಡಿಸಿತ್ತು.

ಟ್ಯಾಂಕರ್​ ಮಾಫಿಯಾಕ್ಕೆ ಕಡಿವಾಣ

ಟ್ಯಾಂಕರ್​ ಮಾಫಿಯಾಕ್ಕೆ ಕಡಿವಾಣ ಹಾಕುವ ಸಂಬಂಧ ಇತ್ತೀಚೆಗಷ್ಟೇ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆ ಸಭೆಯಲ್ಲಿ, ನೀರಿನ ಟ್ಯಾಂಕರ್‌ಗಳ ಮಾಲೀಕರು ಮಾರ್ಚ್​ 7ರ ಗಡುವಿನ ಒಳಗೆ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ದರ ನಿಗದಿ ಸಂಬಂಧ ಈ ಸೂಚನೆ ನೀಡಲಾಗಿತ್ತು.

ವರದಿ: ಶಾಂತಮೂರ್ತಿ ಎಂ

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್