ರಾಹುಲ್ ಗಾಂಧಿ ಸಲಹೆ ಮೇರೆಗೆ ಕರ್ನಾಟಕದ ತೆರಿಗೆದಾರರ ಹಣ ದುರುಪಯೋಗ: ವಿಜಯೇಂದ್ರ ಆಕ್ರೋಶ

ಕಾಂಗ್ರೆಸ್​​ನ ವಯನಾಡ್ ಸಂಸದ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸುವುದಕ್ಕಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ರಾಜ್ಯದ ಜನರ ತೆರಿಗೆ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಯನಾಡ್​ನಲ್ಲಿ ಆನೆ ದಾಳಿಗೆ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ರಾಜ್ಯ ಸರ್ಕಾರ ಹಣಕಾಸು ನೆರವು ಘೋಷಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಬೇಕಿದ್ದರೆ ಕಾಂಗ್ರೆಸ್ ಪಕ್ಷದ ವತಿಯಿಂದ ನೀಡಲಿ ಎಂದಿದ್ದಾರೆ.

ರಾಹುಲ್ ಗಾಂಧಿ ಸಲಹೆ ಮೇರೆಗೆ ಕರ್ನಾಟಕದ ತೆರಿಗೆದಾರರ ಹಣ ದುರುಪಯೋಗ: ವಿಜಯೇಂದ್ರ ಆಕ್ರೋಶ
ರಾಹುಲ್ ಗಾಂಧಿ & ವಿಜಯೇಂದ್ರ
Follow us
| Updated By: ಗಣಪತಿ ಶರ್ಮ

Updated on: Feb 20, 2024 | 9:53 AM

ಬೆಂಗಳೂರು, ಫೆಬ್ರವರಿ 20: ಕಾಡಾನೆ ದಾಳಿಯಿಂದ (Wild Elephant Attack) ಮೃತಪಟ್ಟಿದ್ದ ಕೇರಳ ವ್ಯಕ್ತಿಯ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ (Rahul Gandhi) ಸಲಹೆ ಆಧರಿಸಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ. ಈ ವಿಚಾರವಾಗಿ ಸೋಮವಾರವೇ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದ ಅವರು, ಇಂದು (ಮಂಗಳವಾರ) ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. 15 ಲಕ್ಷ ರೂಪಾಯಿ ಪರಿಹಾರ ನೀಡುವ ಕಾಂಗ್ರೆಸ್ ಸರ್ಕಾರದ ತೀರ್ಮಾನ ಖಂಡನೀಯ ಎಂದು ಅವರು ಹೇಳಿದ್ದಾರೆ.

ಕಾಡಾನೆ ದಾಳಿಯಿಂದ ಕೇರಳದ ವಯನಾಡು ಜಿಲ್ಲೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದರು. ಮೃತನ ಕುಟುಂಬಕ್ಕೆ ನೆರವಾಗುವಂತೆ ‘ಕೈ’ ನಾಯಕ ರಾಹುಲ್‌ ಗಾಂಧಿ ಸಲಹೆ ನೀಡಿದ್ದರು. ಅದರ ಮೇರೆಗೆ ಕರ್ನಾಟಕದ ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಸಂಪೂರ್ಣವಾಗಿ ಅವಮಾನಕರ. ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಅಕ್ರಮವಾಗಿ ಹಣ ಮಂಜೂರು ಮಾಡಿದ್ದು ರಾಜ್ಯದ ಜನರಿಗೆ ಮಾಡಿದ ದ್ರೋಹವಲ್ಲವೇ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಬರಗಾಲದಿಂದ ನೂರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ, ಸ್ವಲ್ಪವೂ ನಾಚಿಕೆಯಿಲ್ಲದೆ ರಾಜ್ಯದ ತುರ್ತು ಅಗತ್ಯಗಳತ್ತ ಗಮನಹರಿಸುವ ಬದಲು ರಾಹುಲ್ ಗಾಂಧಿಯನ್ನು ಸಂತೋಷಪಡಿಸಲು ಆದ್ಯತೆ ನೀಡುತ್ತಿರುವುದು ಖೇದಕರ. ಕಾಂಗ್ರೆಸ್ ಹೈಕಮಾಂಡ್‌ ಮೆಚ್ಚಿಸಲು ಕರ್ನಾಟಕದ ತೆರಿಗೆದಾರರ ಹಣವನ್ನು ಅನೈತಿಕವಾಗಿ ಬಳಸಿಕೊಳ್ತಿರೋದಕ್ಕೆ ಸಿಎಂ ಹಾಗೂ ಸಚಿವರು ಹೊಣೆ ಹೊರಬೇಕು ಎಂದು ಅವರು ಆಗ್ರಹಿಸಿದ್ದಾರೆ.

15 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದೇವೆಂದು ಅರಣ್ಯ ಸಚಿವರು ಪತ್ರ ಬರೆದಿದ್ದಾರೆ. ರಾಹುಲ್ ಗಾಂಧಿ ಸೂಚನೆ ಬೆನ್ನಲ್ಲೇ ಅರಣ್ಯ ಸಚಿವರು ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆ ಪರಿಹಾರ ನೀಡಲಾಗಿದೆ ಎಂದಿದ್ದಾರೆ. ಮಾನವೀಯ ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪರಿಹಾರ ನೀಡಲಿ ಎಂದು ವಿಜಯೇಂದ್ರ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆಯಿಂದಲೇ ವಯನಾಡ್​ಗೆ ಭೇಟಿ ನೀಡಿದ್ದ ರಾಹುಲ್

ವಯನಾಡಿನಲ್ಲಿ ಇತ್ತೀಚೆಗೆ ಆನೆ ದಾಳಿಗೆ ಬಲಿಯಾದ ಇಬ್ಬರು ಸಂತ್ರಸ್ತರ ಮನೆಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಭೇಟಿ ನೀಡಿದ್ದರು. ಮೃತರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದರು. ಮಾನವ-ಪ್ರಾಣಿ ಸಂಘರ್ಷಕ್ಕೆ ಪರಿಹಾರ ಕೋರಿ ಸ್ಥಳೀಯರು ವ್ಯಾಪಕ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ವಯನಾಡ್ ಸಂಸದರು ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ವಾರಣಾಸಿಯಲ್ಲಿ ಸ್ಥಗಿತಗೊಳಿಸಿ ಕ್ಷೇತ್ರಕ್ಕೆ ಧಾವಿಸಿದ್ದರು.

ಇದನ್ನೂ ಓದಿ: ಆನೆ ದಾಳಿಗೆ ಬಲಿಯಾದ ವಯನಾಡ್ ವ್ಯಕ್ತಿಗೆ ಕರ್ನಾಟಕದ ಪರಿಹಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಸೂಕ್ಷ್ಮದ ವಿಚಾರವೆಂದರೆ, ವಯನಾಡಿನಲ್ಲಿ ಆನೆ ದಾಳಿಗೆ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕೇರಳ ಸರ್ಕಾರ ಪರಿಹಾರ ಘೋಷಿಸಿದೆಯೇ ಎಂಬುದು ಇನ್ನೂ ತಿಳಿದುಬಂದಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು