ಬಿಜೆಪಿ-ಜೆಡಿಎಸ್​ನಿಂದ ಮೈಸೂರು ಪಾದಯಾತ್ರೆ: ಎಲ್ಲಿಂದ, ಎಷ್ಟು ಗಂಟೆಗೆ ಆರಂಭ? ವಿವರ ನೀಡಿದ ವಿಜಯೇಂದ್ರ

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ, ಮುಡಾ ನಿವೇಶನ ಹಗರಣ ಹಾಗೂ ಪರಿಶಿಷ್ಟರ ಉಪಯೋಜನೆ ಹಣ ದುರ್ಬಳಕೆ ಮುಂದಿಟ್ಟುಕೊಂಡು ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದ ಬಿಜೆಪಿ -ಜೆಡಿಎಸ್‌ ಪ್ರತಿಪಕ್ಷ ಮೈತ್ರಿಕೂಟ ಈಗ ಬಹಿರಂಗ ಹೋರಾಟಕ್ಕೆ ಆಗಸ್ಟ್‌ 3 ರಂದು ಮುಹೂರ್ತ ಫಿಕ್ಸ್‌ ಮಾಡಿದ್ದು, ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ. ಇನ್ನು ಪಾದಯಾತ್ರೆ ಬೆಂಗಳೂರಿನಿಂದ ಎಷ್ಟು ಗಂಟೆಗೆ? ಎಲ್ಲಿಂದ ಆರಂಭವಾಗಲಿದೆ? ಎನ್ನುವ ಸಂಪೂರ್ಣ ವಿವರವನ್ನು ಬಿವೈ ವಿಜಯೇಂದ್ರ ನೀಡಿದ್ದಾರೆ.

ಬಿಜೆಪಿ-ಜೆಡಿಎಸ್​ನಿಂದ ಮೈಸೂರು ಪಾದಯಾತ್ರೆ: ಎಲ್ಲಿಂದ, ಎಷ್ಟು ಗಂಟೆಗೆ ಆರಂಭ? ವಿವರ ನೀಡಿದ ವಿಜಯೇಂದ್ರ
ಬಿಜೆಪಿ ಪಾದಯಾತ್ರೆ
Follow us
ಕಿರಣ್​ ಹನಿಯಡ್ಕ
| Updated By: ರಮೇಶ್ ಬಿ. ಜವಳಗೇರಾ

Updated on: Jul 29, 2024 | 5:10 PM

ಬೆಂಗಳೂರು, (ಜುಲೈ 29): ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ, ಮುಡಾ ನಿವೇಶನ ಹಗರಣ ಹಾಗೂ ಪರಿಶಿಷ್ಟರ ಉಪಯೋಜನೆ ಹಣ ದುರ್ಬಳಕೆ ಮುಂದಿಟ್ಟುಕೊಂಡು ಬಿಜೆಪಿ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ. ಇದೇ ಆಗಸ್ಟ್ 3ರಂದು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಲು ನಿರ್ಧರಿಸಿದ್ದು, ಆಗಸ್ಟ್ 10ರಂದು ಮೈಸೂರಿನಲ್ಲಿಅಂತ್ಯಗೊಳ್ಳಲಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಇಂದು (ಜುಲೈ 29) ಪಕ್ಷದ ನಾಯಕರ ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದರು. ಅಲ್ಲದೇ ಪಾದಯಾತ್ರೆಗೆ ಸಹಕಾರ ಪಡೆದುಕೊಂಡರು.

ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಬಿಜೆಪಿ-ಜೆಡಿಎಸ್ ಸಮಾಲೋಚಿಸಿ ಆಗಸ್ಟ್ 03ರಂದು ಮೈಸೂರಿಗೆ ಪಾದಯಾತ್ರೆ ಮಾಡಿಡುತ್ತೇವೆ. ಶನಿವಾರ ಬೆಳಗ್ಗೆ 8.30ಕ್ಕೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆ ಆರಂಭವಾಗಲಿದೆ. ಇಂದು ಸಭೆ ನಡೆಸಿ ಎಲ್ಲರ ಸಹಕಾರ ಪಡೆದಿದ್ದೇವೆ. ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಹೆಚ್.ಡಿ. ಕುಮಾರಸ್ವಾಮಿ, ವಿಪಕ್ಷ ನಾಯಕರಾದ ಆರ್‌. ಅಶೋಕ್, ಛಲವಾದಿ ನಾರಾಯಣಸ್ವಾಮಿ ಉಪಸ್ಥಿತಿಯಲ್ಲಿ ಪಾದಯಾತ್ರೆಗೆ ಚಾಲನೆ ಸಿಗಲಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ: ರೂಪುರೇಷ ಸಿದ್ಧ, ಇಲ್ಲಿದೆ ರೂಟ್​​ಮ್ಯಾಪ್

ಕೆಂಗೇರಿಯ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆ ಆರಂಭವಾಗಲಿದ್ದು, ಪ್ರತಿನಿತ್ಯ 20 ಕಿ.ಮೀಟರ್​ನಷ್ಟು ಪಾದಯಾತ್ರೆ ನಡೆಯಲಿದೆ. ಮೊದಲ ದಿನ 8 ವಿಧಾನಸಭೆ ಕ್ಷೇತ್ರಗಳ ಕಾರ್ಯಕರ್ತರು ಭಾಗವಹಿಸುತ್ತಾರೆ. 224 ವಿಧಾನಸಭೆ ಕ್ಷೇತ್ರಗಳ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ ವಿಜಯೇಂದ್ರ, ಮೊದಲ ದಿನ 8 ವಿಧಾನಸಭೆ ಕ್ಷೇತ್ರಗಳ ಕಾರ್ಯಕರ್ತರು ಭಾಗವಹಿಸುತ್ತಾರೆ. ಒಂದೊಂದು ದಿನ ಒಂದೊಂದು ಮೋರ್ಛಾ ಕಾರ್ಯಕರ್ತರು ಭಾಗವಹಿಸುತ್ತಾರೆ. ಬೆಳಗ್ಗಿನಿಂದ ಮಧ್ಯಾಹ್ನ ಒಂದು ತಂಡ, ಮಧ್ಯಾಹ್ನದಿಂದ ಸಂಜೆಯವರೆಗೆ ಮತ್ತೊಂದು ತಂಡ ಭಾಗವಹಿಸುತ್ತದೆ. ಪಾದಯಾತ್ರೆ ಯಶಸ್ವಿಗೆ ಬಿಜೆಪಿ ಮತ್ತು ಜೆಡಿಎಸ್ ನಿಂದ ಸಮನ್ವಯ ತಂಡ ಕೂಡಾ ರಚಿಸುತ್ತೇವೆ. ಇನ್ನು ಪಾದಯಾತ್ರೆ ಆಗಸ್ಟ್ 10 ರಂದು ಮುಕ್ತಾಯ ಆಗಲಿದ್ದು, ಸಮಾರೋಪ ಸಮಾವೇಶದಲ್ಲಿ ರಾಷ್ಟ್ರೀಯ ನಾಯಕರು ಪಾಲ್ಗೊಳ್ಳುತ್ತಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ