ಬಿಜೆಪಿ ರಾಜ್ಯಾಧ್ಯಕ್ಷರ ತಲೆದಂಡ: ಸಿದ್ದರಾಮಯ್ಯ ಹೇಳಿಕೆಗೆ ವಿಜಯೇಂದ್ರ ತಿರುಗೇಟು

ದೀಪ ಆರುವ ಮುನ್ನ ಜೋರಾಗಿ ಹೊತ್ತಿ ಉರಿಯುತ್ತದೆ, ಕಾಲವೇ ನಿಮಗೆ ಉತ್ತರ ಹೇಳಲಿದೆ. ಯಾರು ಯಾರ ವಿರುದ್ಧ ಮುಗಿ ಬೀಳುತ್ತಾರೆ? ಯಾರು ಎಲ್ಲಿರುತ್ತಾರೆ? ಎಂಬುದನ್ನು ಕೆಲವೇ ದಿನಗಳು ಕಾದುನೋಡಿ ನಿಮ್ಮ ಕಾಂಗ್ರೆಸ್ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್​ಗೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರ ತಲೆದಂಡ: ಸಿದ್ದರಾಮಯ್ಯ ಹೇಳಿಕೆಗೆ ವಿಜಯೇಂದ್ರ ತಿರುಗೇಟು
ವಿಜಯೇಂದ್ರ, ಸಿದ್ದರಾಮಯ್ಯ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: May 15, 2024 | 4:35 PM

ಬೆಂಗಳೂರು, ಮೇ 15: ಭಾರತೀಯ ಜನತಾ ಪಾರ್ಟಿ ತತ್ವ, ಸಿದ್ದಾಂತ ಆಧರಿಸಿದ ಶಿಸ್ತಿನ ಪಕ್ಷ. ಕಳೆಯಿಲ್ಲದೆ ಬೆಳೆದು ನಿಂತಿರುವ ಸಮೃದ್ಧ ತೋಟ, ನಿಮ್ಮ ಕಾಂಗ್ರೆಸ್​​ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B. Y. Vijayendra) ಕಿಡಿಕಾರಿದ್ದಾರೆ. ಯಡಿಯೂರಪ್ಪ ಮತ್ತವರ ಕುಟುಂಬದ ವಿರುದ್ಧ ಬಿಜೆಪಿ ಪಕ್ಷದೊಳಗೆ ಚಕ್ರವ್ಯೂಹ ಹೆಣೆಯಲಾಗುತ್ತಿದೆ. ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿಯ ಒಳಜಗಳ ಬೀದಿಜಗಳವಾಗಲಿದೆ. ಕೆಲವು ದಿನಗಳಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಲೆದಂಡ ಆಗಲೂಬಹುದು ಎಂಬ ಸಿಎಂ ಟ್ವೀಟ್​ಗೆ ತಿರುಗೇಟು ನೀಡಿದ್ದಾರೆ.

ಅಧಿಕಾರಕ್ಕಾಗಿ ಹಪಾಹಪಿಸುವ ಕಳ್ಳಿ ಗಿಡಗಳಾವುವೂ ನಮ್ಮ ಪಕ್ಷದಲ್ಲಿ ತಲೆಯೆತ್ತಲು ಸಾಧ್ಯವಿಲ್ಲ. ತಲೆ ಎತ್ತಲು ಹೋದರೆ ಅದಕ್ಕೆ ಮದ್ದು ನೀಡುವಷ್ಟು ನಮ್ಮ ವರಿಷ್ಠ ಮಂಡಳಿಯು ಸಶಕ್ತವಾಗಿದೆ.

ಬಿ.ವೈ. ವಿಜಯೇಂದ್ರ ಟ್ವೀಟ್​

ಭಾರತದ ರಾಜಕೀಯ ಭೂಪಟದಲ್ಲಿ ಮಾಸಿ ಹೋಗುತ್ತಿರುವ ನಿಮ್ಮ ಕಾಂಗ್ರೆಸ್ ಪಕ್ಷ ಅಧಿಕಾರ ಕಬಳಿಸುವುದನ್ನಷ್ಟೇ ಕೇಂದ್ರೀಕರಿಸಿ ಸುಳ್ಳು ಭರವಸೆಗಳು ಹಾಗೂ ಆಮಿಷಗಳ ಬಲೆ ಹೆಣೆದು ಕರ್ನಾಟಕದಲ್ಲಿ ಅಧಿಕಾರ ದಕ್ಕಿಸಿಕೊಂಡಿದೆ. ಲೋಕಸಭಾ ಚುನಾವಣೆಯ ನಂತರ ಈ ಟೊಳ್ಳು ಬಲೆಯನ್ನು ಜನರೇ ತುಂಡರಿಸಲಿದ್ದಾರೆ, ನಿಮ್ಮ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆ ನಂತರ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಪಕ್ಷದ ಶಾಸಕರೇ ಉರುಳಿಸಲಿದ್ದಾರೆ: ಆರ್ ಅಶೋಕ

ದೀಪ ಆರುವ ಮುನ್ನ ಜೋರಾಗಿ ಹೊತ್ತಿ ಉರಿಯುತ್ತದೆ, ಕಾಲವೇ ನಿಮಗೆ ಉತ್ತರ ಹೇಳಲಿದೆ. ಯಾರು ಯಾರ ವಿರುದ್ಧ ಮುಗಿ ಬೀಳುತ್ತಾರೆ? ಯಾರು ಎಲ್ಲಿರುತ್ತಾರೆ? ಎಂಬುದನ್ನು ಕೆಲವೇ ದಿನಗಳು ಕಾದುನೋಡಿ ನಿಮ್ಮ ಕಾಂಗ್ರೆಸ್ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಬಹುಮತ ಸರ್ಕಾರವನ್ನ ಅಭದ್ರ ಮಾಡಲ್ಲ, ಆದ್ರೆ…ಸುಮ್ನೆ ಕೂರಲ್ಲ ಎಂದ ಬಿಜೆಪಿ ನಾಯಕ

ನೀವು ಮುಖ್ಯಮಂತ್ರಿಯಾಗುವ ವೇಳೆ ಡಿಕೆ ಶಿವಕುಮಾರ್​ ಅವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆ ಬದಿಗೊತ್ತಿ ಹೈಕಮಾಂಡ್ ಸೂತ್ರ ಧಿಕ್ಕರಿಸುವ ನಿಮ್ಮ ತಂತ್ರದ ಜಾಡು ಹಿಡಿದಿರುವ ನಿಮ್ಮ ವಿರೋಧಿ ಬಣ ಸುಮ್ಮನೆ ಕುಳಿತಿಲ್ಲ, ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಕಾಲ ಸನ್ನಿಹಿತವಾಗುವುದರೊಳಗೇ ಪರಿಸ್ಥಿತಿ ಯಾವ ರೀತಿ ಬಿಗಡಾಯಿಸುತ್ತದೆ ಎನ್ನುವುದನ್ನು ಕಾಂಗ್ರೆಸ್​​ನಲ್ಲಿ ವ್ಯೂಹ ರಚಿಸುವ ಬಂಡೆಯೊಂದು ಈಗಾಗಲೇ ಸದ್ದು ಮಾಡುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು