ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ

| Updated By: ರಮೇಶ್ ಬಿ. ಜವಳಗೇರಾ

Updated on: Oct 29, 2024 | 7:32 PM

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಬಿಜೆಪಿಯಲ್ಲಿ ಹೊಂದಾಣಿಕೆ ವಾಕ್ಸಮರ ತಾರಕಕ್ಕೇರಿತ್ತು. ಚುನಾವಣೆಯಲ್ಲಿ ಹೀನಾಯ ಸೋಲಿಗೆ ಹೊಂದಾಣಿಕೆ ರಾಜಕಾರಣವೇ ಮುಖ್ಯ ಕಾರಣ ಎಂಬ ಸ್ವಪಕ್ಷೀಯರ ಬಹಿರಂಗ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಪಕ್ಷದ ಹೊಂದಾಣಿಕೆ ರಾಜಕಾರಣಿಗಳ ವಿರುದ್ಧ ವಿಜಯೇಂದ್ರ ಗುಡುಗಿದ್ದಾರೆ.

ಹೊಂದಾಣಿಕೆ ರಾಜಕೀಯ ಮಾಡುವವರನ್ನು ಹೊರ ಹಾಕ್ತಿದ್ದೇವೆ: ವಿಜಯೇಂದ್ರ
ವಿಜಯೇಂದ್ರ
Follow us on

ಹಾಸನ, (ಅಕ್ಟೋಬರ್ 29): ಕರ್ನಾಟಕ ಬಿಜೆಪಿ ಕೆಲವರು ಹೊಂದಾಣಿಕೆ ರಾಜಕಾರಣ ಮಾಡುತ್ತಾರೆ ಎನ್ನುವ ಆರೋಪಗಳು ಇವೆ. ಸ್ವಕ್ಷದ ನಾಯಕರಾದ ಬಸನಗೌಡ ಪಾಟೀಲ್, ಪ್ರತಾಪ್ ಸಿಂಹ ಸೇರಿದಂತೆ ಇತರೆ ನಾಯಕರು ಸಹ ಹೊಂದಾಣಿಕೆ ರಾಜಕೀಯ ಬಗ್ಗೆ ಬಹಿರಂಗವಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಇದೀಗ ಇದೇ ಹೊಂದಾಣಿಕೆ ರಾಜಕಾರಣದಲ್ಲಿ ಬಗ್ಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯಿಸಿದ್ದು, ಯಾರ್ಯಾರು ಅಡ್ಜಸ್ಟ್‌ಮೆಂಟ್ ಪಾಲಿಟಿಕ್ಸ್ ಮಾಡುತ್ತಾರೆ ಒಬ್ಬೊಬ್ಬರನ್ನೇ ಪಕ್ಷದಿಂದ ಹೊರ ಹಾಕುವ ಕೆಲಸವನ್ನು ಯಶಸ್ವಿಯಾಗಿ ಮಾಡುತ್ತಿದ್ದೇವೆ. ನಮ್ಮ ಪಕ್ಷ ಶುದ್ದೀಕರಣ ಅಗಬೇಕೆಂದು ಅನೇಕ ಹಿರಿಯರ ಆಸೆ ಇತ್ತು. ಅವರ ಆಸೆಗೆ ತಕ್ಕಂತೆ ಶುದ್ದೀಕರಣ ಕೂಡ ಆಗುತ್ತಿದೆ ಎಂದು ಹೇಳಿದ್ದಾರೆ.

ಇಂದು (ಅಕ್ಟೋಬರ್ 29) ಹಾಸನಾಂಬೆ ದೇವಿ ದರ್ಶನ ಪಡೆದು ಸುದ್ದಿಗಾರರಿಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಯಾರ್ಯಾರು ಹೊಂದಾಣಿಕೆ ರಾಜಕೀಯ ಮಾಡುತ್ತಾರೆ ಅವರನ್ನ ಹೊರ ಹಾಕುವ ಕೆಲಸವನ್ನು ಯಶಸ್ವಿಯಾಗಿ ಮಾಡುತ್ತಿದ್ದೇವೆ. ನಮ್ಮ ಪಕ್ಷ ಶುದ್ದೀಕರಣ ಅಗಬೇಕೆಂದು ಅನೇಕ ಹಿರಿಯರ ಆಸೆ ಇತ್ತು. ಅವರ ಆಸೆಗೆ ತಕ್ಕಂತೆ ಶುದ್ದೀಕರಣ ಕೂಡ ಆಗುತ್ತಿದೆ. ಬರುವ ದಿನಗಳಲ್ಲಿ ಎಲ್ಲವೂ ಕೂಡ ಸರಿ ಹೋಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ: ಕಾಂಗ್ರೆಸ್​​ನಿಂದ ಮತ್ತೆ ಬಿಗ್ ಆಪರೇಷನ್

ಇದೇ ವೇಳೆ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೋಳಿ ಅಸಮಾಧಾನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ಅವರ ಅಸಮಾಧಾನ ಹೊರಹಾಕಲು ಬೇರೆ ವ್ಯವಸ್ಥೆ ಮಾಡಿಕೊಡಬೇಕು. ಆ ದಿಕ್ಕಿನಲ್ಲಿ ಯೋಚನೆ ಮಾಡುತ್ತಿದ್ದೇವೆ. ನಾನಂತೂ ಅದರ ಬಗ್ಗೆ ಏನು ತಲೆಕೆಡಿಸಿಕೊಳ್ಳುವ ಪ್ರಶ್ನೆ ಇಲ್ಲ. ಮಾಡಲು ಬೇಕಾದಷ್ಟು ಕೆಲಸವಿದೆ. ಸಂಘಟನೆ ಕೆಲಸ ಇದೆ, ಉಪಚುನಾವಣೆ ಇದೆ. ಇವತ್ತು ವಕ್ಫ್ ವಿಚಾರವಾಗಿ ಹೋರಾಟವನ್ನು ಕೈಗೊಳ್ಳಬೇಕಾಗುತ್ತದೆ. ಆ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ ಎಂದು ಹೇಳುವ ಮೂಲಕ ಸ್ವಪಕ್ಷದ ವಿರೋಧಿಗಳಿಗೆ ಟಾಂಗ್ ಕೊಟ್ಟರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಬಿಜೆಪಿಯಲ್ಲಿ ಹೊಂದಾಣಿಕೆ ವಾಕ್ಸಮರ ತಾರಕಕ್ಕೇರಿತ್ತು. ಈ ಬಗ್ಗೆ ಕೆಲ ನಾಯಕರು ಬಹಿರಂಗವಾಗಿಯೇ ಸ್ವಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ವತಃ ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಹಲವು ನಾಯಕರು ಪಕ್ಷದಲ್ಲಿನ ಹೊಂದಾಣಿಕೆ ರಾಜಕಾರಣದ ಬಗ್ಗೆ ಬಹಿರಂಗವಾಗಿಯೇ ಹೇಳಿಕೆ ನೀಡಿ ಆಕ್ರೋಶ ಹೊರಹಾಕಿದ್ದರು. ವಿಜಯೇಂದ್ರ, ಯಡಿಯೂರಪ್ಪ, ಬೊಮ್ಮಾಯಿ ಸೇರಿದಂತೆ ಇತರೆ ನಾಯಕರ ವಿರುದ್ಧ ಹೊಂದಾಣಿಕೆ ರಾಜಕೀಯ ಆರೋಪ ಕೇಳಿಬಂದಿದ್ದವು.

ಅದರಲ್ಲೂ ಪ್ರಮುಖವಾಗಿ ವಿಜಯಪುರ ಶಾಸಜ ಬಸನಗೌಡ ಪಾಟೀಲ್ ಯತ್ನಾಳ್ ಅಂತೂ ಬಹಿರಂಗವಾಗಿಯೇ ಬಿಎಸ್​ ಯಡಿಯೂರಪ್ಪ, ವಿಜಯೇಂದ್ರ ಸೇರಿದಂತೆ ಕೆಲ ನಾಯಕರ ವಿರುದ್ಧ ವಾಗ್ದಾಳಿ ನಡೆಸಿಕೊಂಡು ಬರುತ್ತಲೇ ಇದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ