AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗೇಂದ್ರ ರಾಜೀನಾಮೆ ಕೊಟ್ರೆ ಬಿಜೆಪಿ ಪಾದಯಾತ್ರೆ ಮಾಡುತ್ತೋ ಇಲ್ವೋ? ವಿಜಯೇಂದ್ರ ಹೇಳಿದ್ದೇನು?

ನಾಗೇಂದ್ರ ರಾಜೀನಾಮೆ ಕೊಟ್ರೆ ಬಿಜೆಪಿ ಪಾದಯಾತ್ರೆ ಮಾಡುತ್ತೋ ಇಲ್ವೋ? ವಿಜಯೇಂದ್ರ ಹೇಳಿದ್ದೇನು?

ಕಿರಣ್​ ಹನಿಯಡ್ಕ
| Edited By: |

Updated on: Aug 26, 2026 | 2:57 PM

Share

ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕೆಂದು ವಿಪಕ್ಷ ಬಿಜೆಪಿ ಆಗ್ರಹಿಸುತ್ತಿದ್ದು, ಈ ಸಂಬಂಧ ರಾಜೀನಾಮೆಗೆ ಒತ್ತಾಯಿ ಈಗಾಲಗೇ ಅಧಿವೇಶನದಲ್ಲೂ ತೀವ್ರ ಪ್ರಮಾಣದಲ್ಲಿ ಪ್ರತಿಭಟನೆ ಮಾಡಿ ಗಮನಸೆಳೆದಿದ್ದು, ಇದೀಗ ರಾಯಚೂರಿನಿಂದ ಬಳ್ಳಾರಿ ತನಕ ಪಾದಯಾತ್ರೆ ಮಾಡಲು ತೀರ್ಮಾನಿಸಿದೆ. ಇದೇ ಸೆಪ್ಟೆಂಬರ್ 1ರಂದು ರಾಯಚೂರಿನ ಲಿಂಗಸ್ಗೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಯಲಿದೆ. ಇದರ ಮಧ್ಯೆ ಇತ್ತ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಒಂದು ವೇಳೆ ನಾಗೇಂದ್ರ ರಾಜೀನಾಮೆ ನೀಡಿದರೆ ಬಿಜೆಪಿ ಪಾದಾಯತ್ರೆ ಕಥೆ ಏನು ಎನ್ನುವ ಪ್ರಶ್ನೆ ಎದುರಾಗಿದ್ದು, ಇದೀಗ ಇದಕ್ಕೆ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಉತ್ತರಿಸಿದ್ದಾರೆ.

ಬೆಂಗಳೂರು. (ಆಗಸ್ಟ್ 26): ವಾಲ್ಮೀಕಿ ಹಗರಣ ಪ್ರಕರಣ (Valmiki Scam Case) ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಆರೋಪಿ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕೆಂದು ವಿಪಕ್ಷ ಬಿಜೆಪಿ ಆಗ್ರಹಿಸುತ್ತಿದ್ದು, ಈ ಸಂಬಂಧ ರಾಜೀನಾಮೆಗೆ ಒತ್ತಾಯಿ ಈಗಾಲಗೇ ಅಧಿವೇಶನದಲ್ಲೂ ತೀವ್ರ ಪ್ರಮಾಣದಲ್ಲಿ ಪ್ರತಿಭಟನೆ ಮಾಡಿ ಗಮನಸೆಳೆದಿದ್ದು, ಇದೀಗ ರಾಯಚೂರಿನಿಂದ ಬಳ್ಳಾರಿ ತನಕ ಪಾದಯಾತ್ರೆ ಮಾಡಲು ತೀರ್ಮಾನಿಸಿದೆ. ಇದೇ ಸೆಪ್ಟೆಂಬರ್ 1ರಂದು ರಾಯಚೂರಿನ ಲಿಂಗಸ್ಗೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಯಲಿದೆ. ಇದರ ಮಧ್ಯೆ ಇತ್ತ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಒಂದು ವೇಳೆ ನಾಗೇಂದ್ರ ರಾಜೀನಾಮೆ ನೀಡಿದರೆ ಬಿಜೆಪಿ ಪಾದಾಯತ್ರೆ ಕಥೆ ಏನು ಎನ್ನುವ ಪ್ರಶ್ನೆ ಎದುರಾಗಿದ್ದು, ಇದೀಗ ಇದಕ್ಕೆ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಉತ್ತರಿಸಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇಂದ್ರ, ಬಿ.ನಾಗೇಂದ್ರ ಯಾವಾಗ ರಾಜೀನಾಮೆ ಕೊಡುತ್ತಾರೋ ಗೊತ್ತಿಲ್ಲ. ವಾಲ್ಮೀಕಿ ನಿಗಮದ ಹಗರಣದಲ್ಲಿ ನಾಗೇಂದ್ರ ಪ್ರಮುಖ ಆರೋಪಿ .ಇಡಿ ಚಾರ್ಜ್​ಶೀಟ್​ನಲ್ಲಿ ಕೂಡ ಅವರ ಹೆಸರು ಉಲ್ಲೇಖ ಆಗಿದೆ. ಚಂದ್ರಶೇಖರ್ ಡೆತ್​ನೋಟ್​ನಲ್ಲಿ‌ ಕೂಡ ನಾಗೇಂದ್ರ ಹೆಸರು‌ ಇದೆ. ನಿರಪರಾಧಿ ಅಂತಾ ಸಾಬೀತಾದ್ರೆ ಸಿಎಂ ಬೇಕಾದರೂ ಮಾಡಲಿ. ನಾಗೇಂದ್ರ ಬಹಳ ಸಣ್ಣ ಮೀನು. ಹಗರಣದಲ್ಲಿ ದೊಡ್ಡ ಮೀನುಗಳು, ತಿಮಿಂಗಿಲಗಳು ಹಿಂದೆ ಉಳಿದಿವೆ. ಅವುಗಳನ್ನ ಬಯಲಿಗೆಳೆಯುತ್ತೇವೆ. ದನಿಯಿಲ್ಲದವರ ದನಿಯಾಗಿ ಬಿಜೆಪಿ ಹೋರಾಟ ಮಾಡುತ್ತದೆ ಎದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us