ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರ ಕಿರುಕುಳ: ಕಾನೂನು ನೆರವಿಗಾಗಿ ಕಂಟ್ರೋಲ್ ರೂಂ ತೆರೆಯಲು ಚಿಂತನೆ: ವಿಜಯೇಂದ್ರ
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿದ ನಂತರ ತಮ್ಮ ಕಾರ್ಯಕರ್ತರಿಗೆ ಪೊಲೀಸರು ಕಿರುಕುಳ ನೀಡುತ್ತಿದ್ದಾರೆ ಎಂದು ಬಿಜೆಪಿ ಆರೋಪ ಮಾಡುತ್ತಲೇ ಇದೆ. ಇದೀಗ, ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರಿಂದ ರಕ್ಷಿಸಲು ಹಾಗೂ ಅವರಿಗೆ ಕಾನೂನು ನೆರವು ನೀಡಲು ಕಂಟ್ರೋಲ್ ರೂಂ ತೆರೆಯಲು ಬಿಜೆಪಿ ನಿರ್ಧರಿಸಿದೆ.
ಬೆಂಗಳೂರು, ನ.26: ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಬಿಜೆಪಿ (BJP) ಕಾರ್ಯಕರ್ತರನ್ನು ಪೊಲೀಸರ ಕಿರುಕುಳಿಂದ ರಕ್ಷಿಸಲು ಹಾಗೂ ಕಾನೂನಿನ ನೆರವು ನೀಡಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ವಿಜಯೇಂದ್ರ, ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೋಲಿಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ ಎಂದಿದ್ದಾರೆ.
ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಭೇಟಿಯಾದ ವಿಜಯೇಂದ್ರ: ಲೋಕಸಭೆ ಚುನಾವಣೆಗೆ ಒಗ್ಗಟ್ಟಿನ ಮಂತ್ರ
ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ ಎಂದರು.
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು…
— Vijayendra Yediyurappa (@BYVijayendra) November 26, 2023
ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ನೆರವಿಗೆ ಬರಲಿದೆ. ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಛೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದು ವಿಜಯೇಂದ್ರ ಹೇಳಿದ್ದಾರೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ