ಪೋಕ್ಸೋ ಬಂಧನದ ಸುಳಿಯಿಂದ ಯಡಿಯೂರಪ್ಪ ಪಾರು: ಪುತ್ರ ಬಿವೈ ವಿಜಯೇಂದ್ರ ಟ್ವೀಟ್‌

ಬಿಎಸ್​ ಯಡಿಯೂರಪ್ಪ ಅವರ ಮೇಲಿನ ಕರುನಾಡ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ. ಷಡ್ಯಂತ್ರ, ಪಿತೂರಿ ರಾಜಕಾರಣ ಯಡಿಯೂರಪ್ಪ ಅವರ ಹಿಂಬಾಲಿಸಿಕೊಂಡು ಬರುತ್ತಲೇ ಇದೆ, ಎದೆಗುಂದದ ಅವರು ನ್ಯಾಯದ ಹಾದಿಯಲ್ಲಿ ಷಡ್ಯಂತ್ರಗಳನ್ನು ಜಯಿಸಿದ್ದಾರೆ. ಮುಂದಿನ ದಿನಗಳಲ್ಲಿ ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

ಪೋಕ್ಸೋ ಬಂಧನದ ಸುಳಿಯಿಂದ ಯಡಿಯೂರಪ್ಪ ಪಾರು: ಪುತ್ರ ಬಿವೈ ವಿಜಯೇಂದ್ರ ಟ್ವೀಟ್‌
ಪೋಕ್ಸೋ ಬಂಧನದ ಸುಳಿಯಿಂದ ಯಡಿಯೂರಪ್ಪ ಪಾರು: ಪುತ್ರ ಬಿವೈ ವಿಜಯೇಂದ್ರ ಟ್ವೀಟ್‌
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Jun 14, 2024 | 6:54 PM

ಬೆಂಗಳೂರು, ಜೂನ್​ 14: ಪೋಕ್ಸೋ ಕೇಸ್‌ನಲ್ಲಿ (POCSO Case) ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಯಡಿಯೂರಪ್ಪಗೆ (BS Yediyurappa) ಹೈಕೋರ್ಟ್‌ ತಾತ್ಕಾಲಿಕ ರಿಲೀಫ್ ಕೊಟ್ಟಿದೆ. ಬಂಧನಕ್ಕೆ ತಡೆ ನೀಡಿರುವ ಕೋರ್ಟ್‌, ಸೋಮವಾರ ವಿಚಾರಣೆಗೆ ಹಾಜರಾಗಲು ಬಿಎಸ್​ವೈಗೆ ಸೂಚಿಸಿದೆ. ಯಡಿಯೂರಪ್ಪ ಅವರ ಮೇಲಿನ ಕರುನಾಡ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ವಿಜಯೇಂದ್ರ, ಬಿಎಸ್​ ಯಡಿಯೂರಪ್ಪ ಅವರ ಮೇಲಿನ ಕರುನಾಡ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ. ಷಡ್ಯಂತ್ರ, ಪಿತೂರಿ ರಾಜಕಾರಣ ಯಡಿಯೂರಪ್ಪ ಅವರ ಹಿಂಬಾಲಿಸಿಕೊಂಡು ಬರುತ್ತಲೇ ಇದೆ, ಎದೆಗುಂದದ ಅವರು ನ್ಯಾಯದ ಹಾದಿಯಲ್ಲಿ ಷಡ್ಯಂತ್ರಗಳನ್ನು ಜಯಿಸಿದ್ದಾರೆ.

ಬಿ.ವೈ.ವಿಜಯೇಂದ್ರ ಟ್ವೀಟ್

ಇಂದು ಉಚ್ಚ ನ್ಯಾಯಾಲಯದಲ್ಲಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಘನ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿ “ಯಡಿಯೂರಪ್ಪನವರು ವಿಚಾರಣೆಗಳಿಗೆ ಬೆನ್ನು ತೋರಿಸುವ ಜಾಯಮಾನದವರಲ್ಲ” ಎನ್ನುವ ಮಾತನ್ನು ಉಲ್ಲೇಖಿಸಿರುವುದು ಬಿ.ಎಸ್ ಯಡಿಯೂರಪ್ಪನವರು ಈ ನೆಲದ ಕಾನೂನಿಗೆ ಗೌರವ ಕೊಡುವ ಪರಿಯನ್ನು ಸಾಕ್ಷೀಕರಿಸಿದೆ. ಮುಂದಿನ ದಿನಗಳಲ್ಲಿ ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದಾಗಿದೆ ಎಂದು ಹೇಳಿದ್ದಾರೆ.

ಯಡಿಯೂರಪ್ಪನವರಿಗೆ ಸನ್ನಡತೆಯಿದೆ: ಬೊಮ್ಮಾಯಿ 

ಹಾವೇರಿಯಲ್ಲಿ ಸಂಸದ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಯಡಿಯೂರಪ್ಪನವರು ಆ ತರಹದ ವಿಚಾರದಲ್ಲಿ ಭಾಗಿಯಾಗಿಲ್ಲ, ಷಡ್ಯಂತ್ರ ಮಾಡಿದ್ದು, ಅಧಿಕಾರಿಗಳು ಕರೆದಾಗ ಹೋಗಿ ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ. ಯಡಿಯೂರಪ್ಪನವರಿಗೆ ಸನ್ನಡತೆಯಿದೆ. ಕೋಟ್೯ ಇದನ್ನ ಒಪ್ಪಿಕೊಂಡು ಸದ್ಯ ರಿಲೀಪ್ ಕೊಟ್ಟಿದ್ದು ನ್ಯಾಯಸಮ್ಮತವಾಗಿದೆ. ನಾವು ಸ್ವಾಗತ ಮಾಡುತ್ತೇವೆ. ಮುಂದೆಯು ಕಾನೂನು ಹೋರಾಟದಲ್ಲಿ ಯಡಿಯೂರಪ್ಪ ನವರು ವಿಜಯಶಾಲಿಯಾಗುವ ವಿಶ್ವಾಸವಿದೆ ಎಂದಿದ್ದಾರೆ.

ಇದನ್ನೂ ಓದಿ: POCSO Case: ಪೋಕ್ಸೋ ಪ್ರಕರಣದಲ್ಲಿ ಬಿಎಸ್​ ಯಡಿಯೂರಪ್ಪಗೆ ಬಿಗ್​ ರಿಲೀಫ್​: ಬಂಧಿಸದಂತೆ ಹೈಕೋರ್ಟ್ ಆದೇಶ

ಬೆಂಗಳೂರಿನಲ್ಲಿ ಬಿಜೆಪಿಯ ಮಾಜಿ ಶಾಸಕ ಎ.ಎಸ್​.ನಡಹಳ್ಳಿ ಮಾತನಾಡಿ, ಯಡಿಯೂರಪ್ಪ ವಿರುದ್ಧ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ಪೋಕ್ಸೋ ಕೇಸ್​​ ಹಾಕಿ ಮಾನಸಿಕವಾಗಿ ಕುಗ್ಗಿಸುವ ಷಡ್ಯಂತ್ರ ಮಾಡಲಾಗಿದೆ. ಹೈಕೋರ್ಟ್​ ಆದೇಶವನ್ನು ಸ್ವಾಗತ ಮಾಡುತ್ತೇವೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರ ದೀರ್ಘ ರಾಜಕಾರಣಕ್ಕೆ ಸಂದ ಜಯ: ಎನ್​.ರವಿಕುಮಾರ್

ಬಿ.ಎಸ್.ಯಡಿಯೂರಪ್ಪರನ್ನು ಬಂಧಿಸದಂತೆ ಹೈಕೋರ್ಟ್ ಆದೇಶವನ್ನು ಭಾರತೀಯ ಜನತಾ ಪಕ್ಷ ಸ್ವಾಗತಿಸುತ್ತೆ. ಇದು ಯಡಿಯೂರಪ್ಪ ಅವರ ದೀರ್ಘ ರಾಜಕಾರಣಕ್ಕೆ ಸಂದ ಜಯ. ಬಿಎಸ್​ವೈಗೆ 82 ವರ್ಷ ವಯಸ್ಸಾಗಿದೆ, ಓಡಿ‌ಹೋಗುವ ವ್ಯಕ್ತಿ ಅಲ್ಲ. ಬಿಎಸ್​ವೈಗೆ ಕೆಟ್ಟ ಹೆಸರು ತರಲು ಮಹಿಳೆ ಕೇಸ್​ ದಾಖಲಿಸಿದ್ದಾರೆ. 3 ತಿಂಗಳು ಯಾವುದೇ ಚಾರ್ಜ್​​ಶೀಟ್ ಮಾಡಿಲ್ಲ. ಸರ್ಕಾರ ತನ್ನ ಹುಳುಕನ್ನು ಮುಚ್ಚಿ ಹಾಕಿಕೊಳ್ಳುವ ಕೆಲಸ ಮಾಡಿದೆ ಎಂದು ಪರಿಷತ್​ನ ಬಿಜೆಪಿ ಸದಸ್ಯ ಎನ್​.ರವಿಕುಮಾರ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ