AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾದ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

ಕರ್ನಾಟಕದ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಬಿಜೆಪಿಯ ಕೋಟಾ ಶ್ರೀನಿವಾಸ್ ಪೂಜಾರಿ ಅವರ ರಾಜೀನಾಮೆಯಿಂದಾಗಿ ತೆರವಾಗಿರುವ ಸ್ಥಾನಕ್ಕೆ ಕೇಂದ್ರ ಚುನಾವಣಾ ಆಯೋಗವು ಬೈ ಎಲೆಕ್ಷನ್​ ಘೋಷಣೆ ಮಾಡಿದ್ದು, ನಾಮಪತ್ರ ಸಲ್ಲಿಕೆ ಯಾವಾಗ? ಮತದಾನ, ಫಲಿತಾಂಶ ಯಾವಾಗ ಎನ್ನುವ ವಿವರ ಇಲ್ಲಿದೆ.

ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾದ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ
ವಿಧಾನಸೌಧ
ರಮೇಶ್ ಬಿ. ಜವಳಗೇರಾ
|

Updated on:Sep 19, 2024 | 7:06 PM

Share

ಬೆಂಗಳೂರು, (ಸೆಪ್ಟೆಂಬರ್ 19): ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ. ಈ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾಗಿದ್ದರಿಂದ ವಿಧಾನ ಷರಿಷತ್​ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯಿಂದಾಗಿ ಇದೀಗ ಉಪ ಚುನಾವಣೆ ಎದುರಾಗಿದೆ.

ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್​ಗೆ ಆಯ್ಕೆಯಾಗಿದ್ದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರು ತಮ್ಮ ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನ ಪರಿಷತ್‌ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣಾ ಆಯೋಗ ಇಂದು (ಸೆ.19) ಉಪ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿದ್ದು, ಸೆಪ್ಟೆಂಬರ್ 26ರಂದು ಅಧಿಸೂಚನೆ ಪ್ರಕಟವಾಗಲಿದೆ. ಇನ್ನು ಅಕ್ಟೋಬರ್ 28ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ.

ಚುನಾವಣೆಯ ಪ್ರಮುಖ ದಿನಾಂಕಗಳು

ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು 3 ಅಕ್ಟೋಬರ್ ಕೊನೆಯ ದಿನ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಅಕ್ಟೋಬರ್ 7 ಕೊನೆಯ ದಿನ. ಅಕ್ಟೋಬರ್ 21ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.

ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವಧಿ 5/1/2028ರ ತನಕ ಇತ್ತು. ಜೂನ್ 24ರಂದು ಅವರು ರಾಜೀನಾಮೆ ನೀಡಿದ್ದರು. ಅವರ ಸದಸ್ಯತ್ವದ ಅವಧಿ ಪೂರ್ಣಗೊಳ್ಳದ ಕಾರಣ ಈಗ ಉಪ ಚುನಾವಣೆ ಎದುರಾಗಿದೆ. ಇದೀಗ ಈ ಉಪಚುನಾವಣೆಯಲ್ಲಿ ಗೆದ್ದವರ ಅಧಿಕಾರವಧಿ 5/1/2028ರ ವರೆಗೆ ಇರಲಿದೆ.

Published On - 6:48 pm, Thu, 19 September 24

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್