Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​

Kambala Record ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆಯಾಗಿದ್ದು, ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿ ಹೊಸ ದಾಖಲೆ ಸೃಷ್ಟಿಸಿದೆ.

Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​
ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆ ಸೃಷ್ಟಿಸಿದ ಬೈಂದೂರು ವಿಶ್ವನಾಥ್
Follow us
| Updated By: Digi Tech Desk

Updated on:Jun 23, 2021 | 1:34 PM

ಮಂಗಳೂರು: ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿ ಹೊಸ ದಾಖಲೆ ಸೃಷ್ಟಿಸಿವೆ.

ಮಂಗಳೂರಿನ ಕಿನ್ನಿಗೋಳಿ ಸಮೀಪದ ಐಕಳದಲ್ಲಿ ಕಂಬಳ ಏರ್ಪಡಿಸಲಾಗಿತ್ತು. ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿವೆ. ಕಂಬಳದ ಉಸೇನ್ ಬೋಲ್ಟ್ ಎಂದು ಖ್ಯಾತರಾಗಿದ್ದ ಶ್ರೀನಿವಾಸ್ ಗೌಡರು ಕಳೆದ ವರ್ಷ 9.55 ಸೆಕೆಂಡ್​ನಲ್ಲಿ ದಾಖಲೆ ಮಾಡಿದ್ದರು. ಈ ಬಾರಿ ವಿಶ್ವನಾಥ್,​ ಶ್ರೀನಿವಾಸ​ ಗೌಡರ ದಾಖಲೆ ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟಪುಷ್ಟವಾಗಿ ಆರೈಕೆ ಮಾಡಿ ಸಾಕಿ, ಬೆಳೆಸಿದ ಕೋಣವನ್ನು ಕ್ರೀಡೆಗಾಗಿ ಸಿದ್ಧಗೊಳಿಸಿರುತ್ತಾರೆ. ಈ ಕೋಣಗಳನ್ನು ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಹಗಲಿರುಳು ದುಡಿದ ರೈತರು ಮನರಂಜನೆಗಾಗಿ ಮೊದಲಿಗೆ ಪ್ರಾರಂಭಿಸಿದ ಸ್ಪರ್ಧೆ ಇದು. ನಂತರ ಜಾನಪದ ಕ್ರೀಡೆಯಾಗಿ ಜನಪ್ರಿಯವಾಗಿದೆ. ಸ್ಪರ್ಧೆಯಲ್ಲಿ ಓಡುವ ಕೋಣಗಳ ಜೊತೆಗೆ ಓಡಿಸುವ ಸಾರಥಿಯ ಪಾತ್ರವೂ ಮಹತ್ವದ್ದಾಗಿದೆ.

Published On - 4:10 pm, Sun, 7 February 21