ಯಡಿಯೂರಪ್ಪ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಭೈರತಿ ಸುರೇಶ್​ ಆರೋಪಕ್ಕೆ ವಿಜಯೇಂದ್ರ ಆಕ್ರೋಶ

ಸಚಿವ ಸ್ಥಾನದಲ್ಲಿರುವ ಭೈರತಿ ಸುರೇಶ್‌ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ನಾನು ಶಿವಮೊಗ್ಗ ಜಿಲ್ಲೆಯವಳು. ಯಡಿಯೂರಪ್ಪಜೀ ಮತ್ತು ಮೈತ್ರಾದೇವಿ ಹಾಗೂ ಶೋಭಾ ಕರಂದ್ಲಾಜೆ ಅವರನ್ನು ಹತ್ತಿರದಿಂದ ಬಲ್ಲವಳು. ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದನ್ನು ಖಂಡಿಸುತ್ತೇನೆ. ಮಾನನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಹೇಳಿದ್ದಾರೆ.

ಯಡಿಯೂರಪ್ಪ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಭೈರತಿ ಸುರೇಶ್​ ಆರೋಪಕ್ಕೆ ವಿಜಯೇಂದ್ರ ಆಕ್ರೋಶ
ಯಡಿಯೂರಪ್ಪ ಪತ್ನಿ ಸಾವಿನಲ್ಲಿ ಶೋಭಾ ಕರಂದ್ಲಾಜೆ ಕೈವಾಡ: ಭೈರತಿ ಸುರೇಶ್​ ಆರೋಪಕ್ಕೆ ವಿಜಯೇಂದ್ರ ಆಕ್ರೋಶ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 20, 2024 | 11:08 PM

ಬೆಂಗಳೂರು, ಅಕ್ಟೋಬರ್​ 20: ನಮ್ಮ ತಾಯಿಯವರ ಆಕಸ್ಮಿಕ ಸಾವಿನ ವಿಚಾರಗಳನ್ನು ಮುಂದೆ ತಂದು ಮಾತನಾಡುತ್ತಿರುವುದು ನಿಮ್ಮ ಅಸಭ್ಯ ಹಾಗೂ ಸಂಸ್ಕೃತಿ ಹೀನ ನಡವಳಿಕೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಸುರೇಶ್ (Byrathi Suresh) ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮಿಸ್ಟರ್ ಭೈರತಿ ಸುರೇಶ್​ ಅವರೇ, ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎನ್ನುವುದು ಗಾದೆ ಮಾತು, ಆದರೆ ನೀವು ಹಾಗೂ ನಿಮ್ಮ ಮುಖ್ಯಮಂತ್ರಿಗಳ ಮೈಯೆಲ್ಲಾ ಭ್ರಷ್ಟತೆಯ ಹುಣ್ಣು ತುಂಬಿಕೊಂಡು ನಾರುತ್ತಿದೆ. ಒಂದರ ಮೇಲೊಂದು ತನಿಖೆಗಳು ನಡೆಯುತ್ತಲೇ ಇವೆ, ಕರ್ನಾಟಕದ ಇತಿಹಾಸದಲ್ಲಿ ಅನೈತಿಕತೆಯನ್ನು ಕತ್ತಿಗೆ ಕಟ್ಟಿಕೊಂಡು ಸರ್ಕಾರ ನಡೆಸುತ್ತಿರುವ ಇತಿಹಾಸ ನಿರ್ಮಿಸಿದ ದಾಖಲೆ ನಿಮಗೆ ಹಾಗೂ ನಿಮ್ಮ ಮುಖ್ಯಮಂತ್ರಿಗೇ ಸಲ್ಲುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ನವರೊಂದಿಗೆ ಸೇರಿ ನನ್ನ ವರ್ಚಸ್ಸು ಹಾಳು ಮಾಡಲು ಯತ್ನ: ಬಿಜೆಪಿ ನಾಯಕರ ಮೇಲೆ ಕುಮಾರಸ್ವಾಮಿ ಗರಂ

ನೀವು ನಡೆಸಿದ ಕಡು ಭ್ರಷ್ಟ ಹಗರಣಗಳಿಗೆ ಕನಸು ಮನಸ್ಸಿನಲ್ಲೂ ಎಣಿಸದ ರೀತಿಯಲ್ಲಿ ತನಿಖೆಗಳು ನಿಮ್ಮ ಕೊರಳು ಸುತ್ತಿ ಕೊಳ್ಳುತ್ತಿವೆ ಇದರಿಂದ ತೀವ್ರ ಹತಾಶಗೊಂಡಿದ್ದೀರಿ. ಮಾನ್ಯ ಶೋಭಾ ಕರಂದ್ಲಾಜೆ ಅವರು ಮಾಡಿರುವ ಆರೋಪಗಳಿಗೆ ಉತ್ತರಿಸಲಾಗದ ನೀವು ಹೇಡಿಯಂತೆ ಕಪೋಲ ಕಲ್ಪಿತ ಆರೋಪಗಳನ್ನು ಮಾಡಿ ವಿಷಯಾಂತರ ಮಾಡಲು ಹೊರಟಿರುವ ನಿಮ್ಮ ನಡೆ “ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಗುಣವ ಬಿಡು ನಾಲಿಗೆ” ಎಂಬ ದಾಸರ ಪದವನ್ನು ನಿಮಗೆ ನೆನಪಿಸಿ ಹೇಳಬೇಕಾಗಿದೆ. ಮಾಡಿದ್ದುಣ್ಣೋ ಮಹರಾಯ ಎಂಬ ಮಾತಿನಂತೆ ಅತೀ ಶೀಘ್ರದಲ್ಲೇ ನಿಮ್ಮ ಹಾದಿ ಕೃಷ್ಣನ ಜನ್ಮಸ್ಥಾನದತ್ತ ಸಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮೊಕದ್ದಮೆ ಹೂಡುವ ಬಗ್ಗೆ ಬಿಜೆಪಿ ನಾಯಕರು ಎಚ್ಚರಿಕೆ

ಸಚಿವ ಭೈರತಿ ಸುರೇಶ್ ಮಹಿಳೆಯರ ಮಾನಹಾನಿ ಮಾಡುವಂತ ಹೇಳಿಕೆ ನೀಡಿದ್ದು ಸದ್ಯ ಚರ್ಚೆಗೆ ಗ್ರಾಸವಾಗಿದೆ. ಸದ್ಯ ಈ ವಿಚಾರವಾಗಿ ವಿಧಾನಪರಿಷತ್ ಸದಸ್ಯೆ ಭಾರತಿ ಶೆಟ್ಟಿ ತೀವ್ರವಾಗಿ ಖಂಡಿಸಿದ್ದು, ಸುರೇಶ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸಚಿವ ಸ್ಥಾನದಲ್ಲಿರುವ ಭೈರತಿ ಸುರೇಶ್‌ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ನಾನು ಶಿವಮೊಗ್ಗ ಜಿಲ್ಲೆಯವಳು. ಯಡಿಯೂರಪ್ಪಜೀ ಮತ್ತು ಮೈತ್ರಾದೇವಿ ಹಾಗೂ ಶೋಭಾ ಕರಂದ್ಲಾಜೆ ಅವರನ್ನು ಹತ್ತಿರದಿಂದ ಬಲ್ಲವಳು. ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದನ್ನು ಖಂಡಿಸುತ್ತೇನೆ. ಮಾನನಷ್ಟ ಮೊಕದ್ದಮೆ ಹಾಕುತ್ತೇವೆ ಎಂದು ತಿಳಿಸಿದ್ದಾರೆ.

ಒಬ್ಬ ಸಚಿವರಾಗಿ ಸಾಮಾಜಿಕ ಮತ್ತು ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದನ್ನು ಬಿಟ್ಟು ಬೇರೆಯವರ ವೈಯಕ್ತಿಕ ಬದುಕಿನ ಬಗ್ಗೆ ಕೆಟ್ಟದಾಗಿ ಮಾತನಾಡುವುದು ಸರಿಯಲ್ಲ. ಮಹಿಳೆಯರ ತೇಜೋವಧೆ ಮಾಡುವುದನ್ನು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ತಮ್ಮ ಮೇಲೆ ಅಪವಾದ ಬಂದ ತಕ್ಷಣ ಮಹಿಳೆಯರ ಗುಣನಡತೆ ಕುರಿತು ಆರೋಪ ಮಾಡುವುದು ಇವರಿಗೆ ಅಭ್ಯಾಸವಾಗಿದೆ. ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುವವರ ಗುಣನಡತೆ ಬಗ್ಗೆ ಮಾತನಾಡುವುದು ಅಕ್ಷಮ್ಯ ಎಂದಿದ್ದಾರೆ.

ಮೈತ್ರಾದೇವಿ ಅವರು ತಾಯಿ ಸಮಾನ. ಅವರು ಸಾವನ್ನಪ್ಪಿ ಹಲವಾರು ವರ್ಷಗಳು ಕಳೆದಿದ್ದು, ಈಗ ಅದರ ಕುರಿತು ಮಾತನಾಡುವುದು ಎಷ್ಟು ಸರಿ? ಅವರು ಮೃತಪಡುವ ವೇಳೆ ಭೈರತಿ ಸುರೇಶ್‌ ಅವರು ಎಲ್ಲಿದ್ದರು? ಯಾವ ಹುದ್ದೆಯಲ್ಲಿದ್ದರು? ಇಂಥ ಬೇಜವಾಬ್ದಾರಿ ಹೇಳಿಕೆಗಳನ್ನು ನಿಲ್ಲಿಸದಿದ್ದಲ್ಲಿ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತೆ. ಉನ್ನತ ಸ್ಥಾನದಲ್ಲಿರುವ ಮಹಿಳೆಯರು ನಿಮ್ಮ ತಪ್ಪುಗಳನ್ನು ತೋರಿಸುವುದು ಅಪರಾಧವೇ? ಹಾಗೆ ಹೇಳಿಕೆ ಕೊಟ್ಟು ಆಗ್ರಹಿಸಿದರೆ ಅವರ ಗುಣನಡತೆಯ ಕುರಿತು ಮಾತನಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿಗಳು ಪ್ರೇರೇಪಣೆ ಕೊಟ್ಟಿದ್ದಾರಾ? ಛಲವಾದಿ ನಾರಾಯಣಸ್ವಾಮಿ

ಇನ್ನು ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಧಾನಪರಿಷತ್​ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಚಿವ ಭೈರತಿ ಸುರೇಶ್​ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ನೀಡಿರುವ ಹೇಳಿಕೆ ಖಂಡನಾರ್ಹ. ಇವರಿಗೆ ಅಧಿಕಾರದ ಮದ ತಲೆಗೇರಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ವಿಜಯೇಂದ್ರ ದಿಲ್ಲಿಗೆ ಹೋಗುವ ಮೊದಲೇ ಅಭ್ಯರ್ಥಿಗಳ ಘೋಷಣೆ: ಅಚ್ಚರಿ ಮೂಡಿಸಿದ ಹೈಕಮಾಂಡ್ ನಡೆ

ಒಂದು ಹೆಣ್ಣಿನ ಬಗ್ಗೆ ನಿಮಗೆ ಇರುವಂತಹ ಧೋರಣೆ ಇಂದು ಎದ್ದು ಕಾಣುತ್ತಿದೆ. ಇದು ಕಾಂಗ್ರೆಸ್​ ಸಂಸ್ಕೃತಿ. ಈ ರೀತಿ ಹೇಳುವಂತೆ ಮುಖ್ಯಮಂತ್ರಿಗಳು ಪ್ರೇರೇಪಣೆ ಕೊಟ್ಟಿದ್ದಾರಾ? ಹೇಳಿಕೆ ನೀಡಿರುವ ನಿಮ್ಮ ಮನಸ್ಥಿತಿಗೆ ಏನು ಹೇಳಬೇಕು. ಈ ಬಗ್ಗೆ ಮುಖಂಡರಲ್ಲಿ ಚರ್ಚಿಸಿದ್ದು, ನಿಮ್ಮ ವಿರುದ್ಧ ಮೊಕದ್ದಮೆ ಹಾಕುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವೃದ್ಧೆಯನ್ನು ದರದರನೆ ಎಳೆದುಕೊಂಡು ಹೋಗಿ ಕಚ್ಚಿ ಕೊಂದ 7 ಬೀದಿ ನಾಯಿಗಳು
ವೃದ್ಧೆಯನ್ನು ದರದರನೆ ಎಳೆದುಕೊಂಡು ಹೋಗಿ ಕಚ್ಚಿ ಕೊಂದ 7 ಬೀದಿ ನಾಯಿಗಳು
ಚೊಚ್ಚಲ ಏಕದಿನ ಶತಕ ಸಿಡಿಸಿದ ಹರ್ಲೀನ್ ಡಿಯೋಲ್
ಚೊಚ್ಚಲ ಏಕದಿನ ಶತಕ ಸಿಡಿಸಿದ ಹರ್ಲೀನ್ ಡಿಯೋಲ್
ಉಗ್ರಾವತಾರ ತೋರಿಸಿ ಬಿಗ್ ಬಾಸ್ ಮನೆಯ ಗ್ಲಾಸ್ ಒಡೆದು ಹಾಕಿದ ಮಂಜು
ಉಗ್ರಾವತಾರ ತೋರಿಸಿ ಬಿಗ್ ಬಾಸ್ ಮನೆಯ ಗ್ಲಾಸ್ ಒಡೆದು ಹಾಕಿದ ಮಂಜು
ನೋವಿನಲ್ಲೂ ಅಭಿಮಾನಿಗಳನ್ನು ನೋಡಿ ನಗುತ್ತಾ ಕೈ ಬೀಸಿದ ದರ್ಶನ್
ನೋವಿನಲ್ಲೂ ಅಭಿಮಾನಿಗಳನ್ನು ನೋಡಿ ನಗುತ್ತಾ ಕೈ ಬೀಸಿದ ದರ್ಶನ್
2 ಸಮುದಾಯಗಳ ನಡುವೆ ಭೂಪಾಲ್​ನಲ್ಲಿ ಹಿಂಸಾತ್ಮಕ ಘರ್ಷಣೆ; 6 ಜನರಿಗೆ ಗಾಯ
2 ಸಮುದಾಯಗಳ ನಡುವೆ ಭೂಪಾಲ್​ನಲ್ಲಿ ಹಿಂಸಾತ್ಮಕ ಘರ್ಷಣೆ; 6 ಜನರಿಗೆ ಗಾಯ
ವಿನೋದ್ ಕಾಂಬ್ಳಿಗೆ ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ..!
ವಿನೋದ್ ಕಾಂಬ್ಳಿಗೆ ಜೀವನ ಪರ್ಯಂತ ಉಚಿತ ಚಿಕಿತ್ಸೆ ಘೋಷಿಸಿದ ಆಸ್ಪತ್ರೆ..!
ಕಲಬುರಗಿ ಬಂದ್​: ಕಿಡಿಗೇಡಿಗಳಿಂದ ಗೂಂಡಾ ವರ್ತನೆ; ಬೈಕ್ ಜಖಂ
ಕಲಬುರಗಿ ಬಂದ್​: ಕಿಡಿಗೇಡಿಗಳಿಂದ ಗೂಂಡಾ ವರ್ತನೆ; ಬೈಕ್ ಜಖಂ
ಬೀದರ್‌ನ ಜಾನುವಾರು ಸಂಶೋಧನೆ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ
ಬೀದರ್‌ನ ಜಾನುವಾರು ಸಂಶೋಧನೆ ಕೇಂದ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ
ಅಶ್ಲೀಲ ಪದ ಬಳಕೆ ವಿಚಾರ: CT ರವಿ ಧರ್ಮಸ್ಥಳದಲ್ಲಿ ಪ್ರಮಾಣ ಮಾಡ್ಲಿ: ಲಕ್ಷ್ಮೀ
ಅಶ್ಲೀಲ ಪದ ಬಳಕೆ ವಿಚಾರ: CT ರವಿ ಧರ್ಮಸ್ಥಳದಲ್ಲಿ ಪ್ರಮಾಣ ಮಾಡ್ಲಿ: ಲಕ್ಷ್ಮೀ
ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಂದ ವಿಶೇಷ ಪೂಜೆ
ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ: ಅಭಿಮಾನಿಗಳಿಂದ ವಿಶೇಷ ಪೂಜೆ