ಅಲ್ಪಸಂಖ್ಯಾತ ವೈದ್ಯಕೀಯ ವಿದ್ಯಾರ್ಥಿಗಳ ಸಾಲದ ಮೊತ್ತ 3 ಲಕ್ಷ ರೂ.ನಿಂದ 5 ಲಕ್ಷಕ್ಕೆ ಹೆಚ್ಚಳ; ಜಮೀರ್ ಅಹ್ಮದ್ ಖಾನ್ ಸುಳಿವು

ಸಾಗರೋತ್ತರ ಅಧ್ಯಯನಕ್ಕಾಗಿ ಮೀಸಲಾದ ಶೈಕ್ಷಣಿಕ ಸಾಲದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಮತ್ತೊಂದು ಪ್ರಸ್ತಾವನೆ ಇದೆ. ಕೆಎಂಡಿಸಿ ನೀಡುತ್ತಿರುವ ಸಾಲದ ಮೊತ್ತವನ್ನು ಈಗಿರುವ 20 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಖಾನ್ ಹೇಳಿದ್ದಾರೆ.

ಅಲ್ಪಸಂಖ್ಯಾತ ವೈದ್ಯಕೀಯ ವಿದ್ಯಾರ್ಥಿಗಳ ಸಾಲದ ಮೊತ್ತ 3 ಲಕ್ಷ ರೂ.ನಿಂದ 5 ಲಕ್ಷಕ್ಕೆ ಹೆಚ್ಚಳ; ಜಮೀರ್ ಅಹ್ಮದ್ ಖಾನ್ ಸುಳಿವು
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Aug 24, 2023 | 10:13 PM

ಬೆಂಗಳೂರು, ಆಗಸ್ಟ್ 24: ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು (KMDC) ವೈದ್ಯಕೀಯ (MBBS) ಓದುತ್ತಿರುವ ಅರ್ಹ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಸಾಲದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಕರ್ನಾಟಕ ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಸುಳಿವು ನೀಡಿದ್ದಾರೆ. ಪ್ರಸ್ತುತ 3 ರೂಪಾಯಿ ವರೆಗೆ ಸಾಲ ನೀಡಲಾಗುತ್ತಿದ್ದು, ಇದನ್ನು 5 ಲಕ್ಷ ರೂ.ಗೆ ಹೆಚ್ಚಿಸುವ ಯೋಜನೆ ಇದೆ. ಸಾಲದ ಮೊತ್ತದ ಹೆಚ್ಚಳವು ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ ಎನ್ನಲಾಗಿದೆ.

ಸಾಗರೋತ್ತರ ಅಧ್ಯಯನಕ್ಕಾಗಿ ಮೀಸಲಾದ ಶೈಕ್ಷಣಿಕ ಸಾಲದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಮತ್ತೊಂದು ಪ್ರಸ್ತಾವನೆ ಇದೆ. ಕೆಎಂಡಿಸಿ ನೀಡುತ್ತಿರುವ ಸಾಲದ ಮೊತ್ತವನ್ನು ಈಗಿರುವ 20 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಖಾನ್ ಹೇಳಿದ್ದಾರೆ.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಹೊರೆಯಾಗುತ್ತಿರುವ ಸಾಲ ವಸೂಲಿ

ಅರ್ಹ ವಿದ್ಯಾರ್ಥಿಗಳಿಗೆ ಸಾಲದ ಮೊತ್ತವನ್ನು ಹೆಚ್ಚಿಸುವ ಮತ್ತು ಅವರಿಗೆ ಆರ್ಥಿಕ ಸಹಾಯವನ್ನು ಒದಗಿಸುವ ಕ್ರಮವು ವೈದ್ಯಕೀಯ ಸಂಸ್ಥೆಗಳಲ್ಲಿ ಶಿಕ್ಷಣದ ವೆಚ್ಚದ ಹೆಚ್ಚಳದ ದೃಷ್ಟಿಯಿಂದ ಉತ್ತಮವಾಗಿದ್ದರೂ, ಕೆಎಂಡಿಸಿಯ ಹಣಕಾಸಿನ ಕಳಪೆ ಸ್ಥಿತಿಯು ಇದಕ್ಕೆ ಅಡಚಣೆಯಾಗಬಹುದು ಎನ್ನಲಾಗಿದೆ. ಸಾಲ ವಸೂಲಾತಿ ವಿಚಾರದಲ್ಲಿ ಕೆಎಂಡಿಸಿ ಕಳಪೆ ನಿರ್ವಹಣೆಯ ಹಿನ್ನೆಲೆ ಹೊಂದಿದೆ. ಅಲ್ಲದೆ, ಹೊಸ ಅನುದಾನ ಇಲ್ಲದೆ ಸಚಿವರ ಯೋಜನೆ ಅನುಷ್ಠಾನಕ್ಕೆ ಬರುವುದು ಕಷ್ಟ ಎನ್ನಲಾಗಿದೆ.

2023 ರ ಜುಲೈನಲ್ಲಿ ಸಚಿವರು ಕೆಎಂಡಿಸಿಯ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ್ದಾಗ, ಸಾಲ ವಸೂಲಾತಿಗೆ ಸಂಬಂಧಿಸಿದಂತೆ ವಿಳಂಬವಾದ ಪ್ರಗತಿಯನ್ನು ಗಮನಿಸಿ ಅವರು ಆಘಾತ ವ್ಯಕ್ತಪಡಿಸಿದ್ದರು. ನಿಗಮದ ಸಾಲ ವಸೂಲಾತಿಯು 2021 ರಲ್ಲಿ ಶೇ 15 ರಷ್ಟಿದ್ದರೆ, 2022 ರಲ್ಲಿ ಶೇ 25 ರಷ್ಟಿತ್ತು.

ಇದನ್ನೂ ಓದಿ: ಜೆಡಿಎಸ್​ ಶಾಸಕನಿಗೆ ಕಾಂಗ್ರೆಸ್ ಗಾಳವಾ? ಸಮೃದ್ದಿಯಾಗಿ ಸತ್ಯ ಬಿಚ್ಚಿಟ್ಟ ಜೆಡಿಎಸ್ ಶಾಸಕ ಮಂಜುನಾಥ್​!

ಸಾಲದ ಮೊತ್ತ ಮರುಪಾವತಿ ಆಗದಿದ್ದರೆ, ನಿಗಮದ ಸಾಲದ ಹಣಕಾಸು ಸ್ಥಿತಿಗತಿ ಕುಗ್ಗಲಿದೆ. ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಮೀಸಲಾದ ಸಂಸ್ಥೆಯ ಉದ್ದೇಶಕ್ಕೆ ಸೋಲಾಗಲಿದೆ ಎಂದು ‘ನ್ಯೂಸ್ 9’ ವರದಿ ಮಾಡಿದೆ.

ನಿಗಮದ ಬಾಕಿ ಸಾಲದ ಮೊತ್ತವು 582 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:13 pm, Thu, 24 August 23

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್