ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯಿಂದ ಇಂದು ಸಾಯಂಕಾಲ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಕರ್ನಾಕದಲ್ಲಿ ಇಂದು ಕೊರೊನಾ ಸೋಂಕಿನಿಂದ 75 ಜನ ಮರಣವನ್ನಪ್ಪಿದ್ದಾರೆ ಮತ್ತು ಹೊಸದಾಗಿ 9,265 ಜನರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 7,35,371ಕ್ಕೇರಿದ್ದು ಇದುವರೆಗೆ ಬಲಿಯಾದವರ ಸಂಖ್ಯೆ 10,198 ತಲುಪಿದೆ. ಸೋಂಕಿತರ ಪೈಕಿ 6,11,167 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು ಮಿಕ್ಕಿದ 1,13,987 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಗೆಯೇ, ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 27 ಜನರ ಬಲಿಯಾಗಿದ್ದಾರೆ ಮತ್ತು ಕಳೆದ 24 ಗಂಟೆಗಳಲ್ಲಿ 4,574 ಜನರಲ್ಲಿ ಸೋಂಕು ಪತ್ತಯಾಗಿದೆ. ನಗರದಲ್ಲಿ ಮಹಾಮಾರಿಯಿಂದ ಈವರೆಗೆ 3,417 ಸಾವನ್ನಪ್ಪಿದ್ದು ಸೋಂಕಿತರ ಸಂಖ್ಯೆ 2,93,405ಕ್ಕೇರಿದೆ.
ಸೋಂಕಿತರ ಪೈಕಿ 2,24,942 ಜನ ಗುಣಮುಖರಾಗಿದ್ದಾರೆ ಮತ್ತು ಉಳಿದ 65,045 ಜನರಿಗೆ ಕೊವಿಡ್ ಕೇರ್ ಸೆಂಟರ್ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.