ಶಿಕ್ಷಕರ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ವಿವಾದಾತ್ಮಕ ಹೇಳಿಕೆ
ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆದ ಅಭಿನಂದನಾ ಸಭೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಕರೋರ್ವರ ಪ್ರಶ್ನೆಗೆ ಉತ್ತರಿಸುವ ವೇಳೆ ರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯ ವಿಡಿಯೋ ವೈರಲ್ ಆಗಿದ್ದು, ಭಾರಿ ಆಕ್ರೋಶ ಕೇಳಿಬಂದಿದೆ.
ಕೊಪ್ಪಳ, ಡಿಸೆಂಬರ್ 01: ಟೀಚರ್ಸ್ಗೆ ಜ್ಞಾನ ಇರಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಿನ್ನೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆದ ಅಭಿನಂದನಾ ಸಭೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪ್ರಶ್ನೆಗೆ ಉತ್ತರಿಸುವ ವೇಳೆ ಷಡಕ್ಷರಿ ಅವರು ಆಡಿರುವ ಮಾತುಗಳೀಗ ಭಾರಿ ಚರ್ಚೆಗೆ ಗ್ರಾಸವಾಗಿವೆ. ಶಿಕ್ಷಕ ಬಾಳಪ್ಪ ಕಾಳೆ ಕೇಳಿದ್ದ ಪ್ರಶ್ನೆಗೆ ಉತ್ತರಿಸುವ ವೇಳೆ ಶಿಕ್ಷಕರಿಗೆ ನಾಲೆಡ್ಜ್ ಇರಲ್ಲ ಎಂದು ಷಡಕ್ಷರಿ ಅವರು ಹೇಳಿದ್ದು, ಇದಕ್ಕೆ ಬಾಳಪ್ಪ ಕಾಳೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ನಾನು ಹೇಳೋದು ಕೇಳಿಸಿಕೊಳ್ಳಿ. ಅಕಾಡೆಮಿಕ್ ನಾಲೆಡ್ಜ್ ಬೇರೆ, ಅಡ್ಮಿನಿಸ್ಟೇಶನ್ ನಾಲೆಡ್ಜ್ ಬೇರೆ. ನಾನು ಅಡ್ಮಿನಿಸ್ಟ್ರೇಶನ್ ಬಗ್ಗೆ ಮಾತನಾಡುತ್ತಿದ್ದು, ಕೆಲವರಿಗೆ ಕಂಪ್ಯೂಟರ್ ನಾಲೆಡ್ಜ್ ಇರಲ್ಲ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Dec 01, 2025 04:36 PM