ಸಹಾಯಧನ ಪಡೆಯಲು ಆಟೋ ಚಾಲಕರು ಏನು ಮಾಡಬೇಕು? ಇಲ್ಲಿದೆ ಮಾಹಿತಿ

|

Updated on: May 08, 2020 | 7:13 PM

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ಕಂಗಾಲಾಗಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಸಹಾಯಧನ ವಿತರಣೆ ಸಂಬಂಧ ಸಾರಿಗೆ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚಾಲನಾ ಅನುಜ್ಞಾಪತ್ರ, ಬ್ಯಾಡ್ಜ್​ ಹೊಂದಿರುವ ಫಲಾನುಭವಿಗಳು ಮಾತ್ರ 5,000 ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. ಮಾರ್ಚ್ 1ಕ್ಕೆ ಚಾಲ್ತಿಯಲ್ಲಿರುವ ಅನುಜ್ಞಾ ಪತ್ರದ ವಿವರಗಳನ್ನು ನೀಡಬೇಕು. ಇದರ ಜೊತೆಗೆ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ, ವಾಹನ ನೋಂದಣಿ ಸಂಖ್ಯೆ ಸೇರಿದಂತೆ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಪೋರ್ಟಲ್​ನಲ್ಲಿ ನಮೂದಿಸಬೇಕು. ಅಲ್ಲದೆ, ಕೊರೊನಾ ಸಂದರ್ಭದಲ್ಲಿ ಆದಾಯ ಕಳೆದುಕೊಂಡಿರುವ ಬಗ್ಗೆಯೂ ಸೆಲ್ಫ್​ ಡಿಕ್ಲರೇಷನ್ […]

ಸಹಾಯಧನ ಪಡೆಯಲು ಆಟೋ ಚಾಲಕರು ಏನು ಮಾಡಬೇಕು? ಇಲ್ಲಿದೆ ಮಾಹಿತಿ
Follow us on

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ಕಂಗಾಲಾಗಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಸಹಾಯಧನ ವಿತರಣೆ ಸಂಬಂಧ ಸಾರಿಗೆ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚಾಲನಾ ಅನುಜ್ಞಾಪತ್ರ, ಬ್ಯಾಡ್ಜ್​ ಹೊಂದಿರುವ ಫಲಾನುಭವಿಗಳು ಮಾತ್ರ 5,000 ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.

ಮಾರ್ಚ್ 1ಕ್ಕೆ ಚಾಲ್ತಿಯಲ್ಲಿರುವ ಅನುಜ್ಞಾ ಪತ್ರದ ವಿವರಗಳನ್ನು ನೀಡಬೇಕು. ಇದರ ಜೊತೆಗೆ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ, ವಾಹನ ನೋಂದಣಿ ಸಂಖ್ಯೆ ಸೇರಿದಂತೆ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಪೋರ್ಟಲ್​ನಲ್ಲಿ ನಮೂದಿಸಬೇಕು. ಅಲ್ಲದೆ, ಕೊರೊನಾ ಸಂದರ್ಭದಲ್ಲಿ ಆದಾಯ ಕಳೆದುಕೊಂಡಿರುವ ಬಗ್ಗೆಯೂ ಸೆಲ್ಫ್​ ಡಿಕ್ಲರೇಷನ್ ಕೊಡಬೇಕಾಗಿದೆ.

ಆಟೋ ಹಾಗೂ ಟ್ಯಾಕ್ಸಿ ಚಾಲಕರು ಸಹಾಯಧನ ಪಡೆಯಲು ಸೇವಾ ಸಿಂಧು ಌಪ್​ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಈಗಾಗಲೇ ಈ ಸಂಬಂಧ ಕರಡು ಮಾರ್ಗಸೂಚಿಯನ್ನು ಸಾರಿಗೆ ಇಲಾಖೆ ಸಿದ್ಧಪಡಿಸಿದ್ದು, ಇನ್ನಷ್ಟೇ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಬೇಕಿದೆ.

Published On - 7:07 pm, Fri, 8 May 20