ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ: ಸುರಂಗ ಮಾರ್ಗ ಎಲ್ಲಿಂದ ಎಲ್ಲಿಗೆ?

| Updated By: ಗಂಗಾಧರ​ ಬ. ಸಾಬೋಜಿ

Updated on: Aug 22, 2024 | 5:45 PM

ಬೆಂಗಳೂರಿನಲ್ಲಿ 250 ಅಡಿ ಎತ್ತರದ 500 ಕೋಟಿ ರೂ. ವೆಚ್ಚದಲ್ಲಿ ಸ್ಕೈಡೆಕ್​ ನಿರ್ಮಾಣ ಮತ್ತು ಬೆಂಗಳೂರು ನಗರದ ಹೆಬ್ಬಾಳ ಮೇಲ್ಸುತೇವೆಯಿಂದ ಸಿಲ್ಕ್ ಬೋರ್ಡ್​ವರೆಗೆ ಸುರಂಗ ಮಾರ್ಗಕ್ಕೆ 12,600 ಕೋಟಿ ರೂ. ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಅನುಮೋದಿಸಲಾಗಿದೆ ಎಂದು ಕಾನೂನು ಸಚಿವ ಹೆಚ್​.ಕೆ.ಪಾಟೀಲ್​ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ: ಸುರಂಗ ಮಾರ್ಗ ಎಲ್ಲಿಂದ ಎಲ್ಲಿಗೆ?
ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ, ಸುರಂಗ ಮಾರ್ಗ ಎಲ್ಲಿಂದ ಎಲ್ಲಿಗೆ?
Follow us on

ಬೆಂಗಳೂರು, ಆಗಸ್ಟ್​ 22: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ (Cabinet) ಮಾಡಲಾಗಿದೆ. ಬೆಂಗಳೂರಿನ ಸುರಂಗ ಮಾರ್ಗ, ಟಿಡಿಆರ್ ಸೇರಿದಂತೆ ಪ್ರಮುಖ ಕಾಮಗಾರಿಗಳ ಸೇರಿದಂತೆ 40ಕ್ಕೂ ಹೆಚ್ಚು ಅಭಿವೃದ್ಧಿ ವಿಷಯಗಳ ಮೇಲೆ ಚರ್ಚೆ ಮಾಡಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್​.ಕೆ.ಪಾಟೀಲ್​, ಬೆಂಗಳೂರಲ್ಲಿ ಸ್ಕೈಡೆಕ್​ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.

250 ಅಡಿ ಎತ್ತರದ 500 ಕೋಟಿ ರೂ. ವೆಚ್ಚದಲ್ಲಿ ಸ್ಕೈಡೆಕ್​ ನಿರ್ಮಾಣಕ್ಕೆ ಅನುಮೋದಿಸಲಾಗಿದ್ದು, ಇನ್ನೂ ಕೂಡ ಸ್ಥಳ ನಿಗದಿಯಾಗಿಲ್ಲ ಎಂದಿದ್ದಾರೆ.

12,600 ಕೋಟಿ ರೂ. ಯೋಜನೆಗೆ ಸಚಿವ ಸಂಪುಟ ಸಭೆ ಅಸ್ತು

ಬೆಂಗಳೂರು ನಗರದ ಹೆಬ್ಬಾಳ ಮೇಲ್ಸುತೇವೆಯಿಂದ ಸಿಲ್ಕ್ ಬೋರ್ಡ್​​ವರೆಗೆ ಸುರಂಗ ಮಾರ್ಗಕ್ಕೆ 12,600 ಕೋಟಿ ರೂ. ಯೋಜನೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ ಎಂದು ತಿಳಿಸಿದರು. ಬಾಲ ಗರ್ಭಿಣಿಯರ ಸಂಖ್ಯೆ ತಡೆಯಲು ವಿವಿಧ ಇಲಾಖೆಗಳ ಜವಾಬ್ದಾರಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.

ಇದನ್ನೂ ಓದಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಯಾರನ್ನು ಬೇಕಾದರೂ ಟೀಕಿಸಬಹುದು: ಡಿಕೆ ಶಿವಕುಮಾರ್

ಜೆಎಸ್‌ಡಬ್ಲ್ಯು ಸಂಸ್ಥೆಗೆ ಗಣಿಗಾರಿಕೆಯ ಒಟ್ಟು 3666 ಎಕರೆ ಭೂಮಿ ಶುದ್ಧ ಕ್ರಯಪತ್ರ ನೀಡಲು ಅನುಮೋದಿಸಲಾಗಿದೆ. ತೋರಣಗಲ್ಲು ಮತ್ತು ಕೊರೆಕೊಪ್ಪ ಗ್ರಾಮಗಳಲ್ಲಿ 2,000 ಎಕರೆ, ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಮತ್ತು ಕೊರೆಕೊಪ್ಪ, ಮೊಸೇನಾಯಕನಹಳ್ಳಿ ಮತ್ತು ಎರಬನಹಳ್ಳಿ ಗ್ರಾಮಗಳಲ್ಲಿ 1666 ಎಕರೆ ಭೂಮಿ ಶುದ್ಧ ಕ್ರಯಪತ್ರ ನೀಡಲು ಒಪ್ಪಿಗೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರ ಅನುಮತಿ ವಿಚಾರವಾಗಿ ಮಾತನಾಡಿದ ಅವರು, ಆಗಸ್ಟ್​ 1ರಂದು ಡಿಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿತ್ತು. ಆರ್ಟಿಕಲ್ 163ರ ಅನ್ವಯ ರಾಜ್ಯಪಾಲರಿಗೆ ಸಲಹಾ ನಿರ್ಣಯವನ್ನು ದೃಢೀಕರಿಸಲು ಇಂದು ಸಭೆ ನಡೆಯಿತು ಎಂದರು.

ಇದನ್ನೂ ಓದಿ: ಮುಡಾ ಹಗರಣ: ಪತ್ನಿ ಪತ್ರ ಬರೆದಿದ್ದು ಗೊತ್ತಿದ್ದೂ ಗೊತ್ತಿಲ್ಲವೆಂದು ರಾಜ್ಯಪಾಲರಿಗೆ ಉತ್ತರಿಸಿದ ಸಿದ್ದರಾಮಯ್ಯ

ದೃಢೀಕರಣ ಸಂದರ್ಭದಲ್ಲಿ ಮುಖ್ಯಮಂತ್ರಿ ಸಭೆಯಿಂದ ಹೊರಗಡೆ ಇದ್ದರು. ತಾವಿರುವುದು ಸೂಕ್ತವಲ್ಲ ಅಂತಾ ಮುಖ್ಯಮಂತ್ರಿ ಸಭೆಯಿಂದ ಹೊರಗಿದ್ದರು. ಹೀಗಾಗಿ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಣಯ ದೃಢೀಕರಿಸಿದ್ದೇವೆ. ಆಗಸ್ಟ್ 1ರಂದು ತೆಗೆದುಕೊಂಡ ನಿರ್ಣಯವನ್ನು ದೃಢಿಕರಿಸಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:09 pm, Thu, 22 August 24