ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ

ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸ್ತಿದ್ದ ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Edited By: ವಿವೇಕ ಬಿರಾದಾರ

Updated on: Sep 19, 2022 | 8:37 PM

ಬೆಂಗಳೂರು: ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸ್ತಿದ್ದ ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕ ಮಾಡಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ವಿಧಾನಸೌಧದಲ್ಲಿ (Vidhan Soudha) ನಡೆದ ರಾಜ್ಯ ಸಚಿವ ಸಂಪುಟ  ಸಭೆಯಲ್ಲಿ (Cabinet  Ministers Meeting) ತೀರ್ಮಾನಿಸಲಾಗಿದೆ. ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲು ಸಚಿವ ಸಂಪುಟ ಅನುಮೋದನೆ ನೀಡಿದೆ.

ಬಿಬಿಎಂಪಿಯ 3673 ನೌಕರರು, ನಗರಸಭೆ, ಪುರಸಭೆಗಳಲ್ಲಿ 5533 ಮತ್ತು ಮಹಾನಗರ ಪಾಲಿಕೆಗಳಲ್ಲಿನ 1927 ಪೌರಕಾರ್ಮಿಕರು ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದರಿಂದ ಪೌರಕಾರ್ಮಿಕರು 17,000-28,980 ವೇತನ ಶ್ರೇಣಿ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ.

ಪಿಯು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ವಿಲೀನ

ಸಂಪುಟ ಸಭೆಯಲ್ಲಿ ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ವಿಲೀನಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಆರ್ಥಿಕ ನಷ್ಟ, ಹೆಚ್ಚುವರಿ ಸಿಬ್ಬಂದಿ ಅವಶ್ಯಕತೆ ಕಾರಣದಿಂದ ವಿಲೀನಗೊಳಿಸಲಾಗುತ್ತಿದೆ. ಅಲ್ಲದೇ ಶಿಕ್ಷಕರ ಪರಸ್ಪರ ವರ್ಗಾವಣೆಗೂ ತೀರ್ಮಾನ ಕೈಗೊಳ್ಳಲಾಗಿದೆ. ಒಂದೇ ವಿಷಯದ ಇಬ್ಬರೂ ಶಿಕ್ಷಕರು ಒಪ್ಪಿಗೆ ಇದ್ದಲ್ಲಿ ಪರಸ್ಪರ ವರ್ಗಾವಣೆ ಅವಕಾಶ ನೀಡಲಾಗಿದೆ. ನಾಳೆ (ಸೆ.20) ಶಿಕ್ಷಕರ ವರ್ಗಾವಣೆ ಬಗ್ಗೆ ಸದನದಲ್ಲಿ ವಿಧೇಯಕ ಮಂಡನೆಯಾಗಲಿದೆ.

35 ಕ್ರಿಮಿನಲ್ ಕೇಸ್ ಹಿಂಪಡೆಯಲು ಸಂಪುಟ ಸಭೆ ತೀರ್ಮಾನ

ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 35 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಉಪ ಸಮಿತಿ ಶಿಫಾರಸಿನಂತೆ ವಾಪಸ್ ಪಡೆಯಲು ತೀರ್ಮಾನ ಕೈಗೊಳ್ಳಲಾಗಿದೆ.

ಉಚಿತ ವಿದ್ಯುತ್ ನೀಡುವ ಸರ್ಕಾರದ ಆದೇಶಕ್ಕೆ ಅನುಮೋದನೆ

ಎಸ್‌ಸಿ, ಎಸ್‌ಟಿ ಸಮುದಾಯದ ಬಿಪಿಎಲ್ ಕಾರ್ಡ್‌ದಾರರಿಗೆ 75 ಯುನಿಟ್ ಉಚಿತ ವಿದ್ಯುತ್ ಕೊಡುವ ಸರ್ಕಾರದ ಆದೇಶಕ್ಕೆ ಸಮ್ಮತಿ ದೊರೆತಿದೆ. ಮುಖ್ಯಮಂತ್ರಿಗಳ ವಿದ್ಯಾನಿಧಿ ಯೋಜನೆಯನ್ನು ಮೀನುಗಾರರು ಮತ್ತು ಕೃಷಿಕರ ಮಕ್ಕಳಿಗೆ ವಿಸ್ತರಣೆ ಮಾಡಲಾಗುತ್ತದೆ. ಬೆಂಗಳೂರು ಮೆಟ್ರೋಪಾಲಿಟನ್ ಭೂಸಾರಿಗೆ ಪ್ರಾಧಿಕಾರ ವಿಧೇಯಕವನ್ನು ಸದನದಲ್ಲಿ ಮಂಡಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:32 pm, Mon, 19 September 22

TV9 Web

TV9 Kannada

Read More
Loading...
Unable to load recommendations.
Follow Us